Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎಲ್ಲ 60 ಶಾಸಕರ ರಾಜೀನಾಮೆಗೆ...

ಎಲ್ಲ 60 ಶಾಸಕರ ರಾಜೀನಾಮೆಗೆ ನಾಗಾಲ್ಯಾಂಡ್ ಕಾಂಗ್ರೆಸ್ ಆಗ್ರಹ: ಕಾರಣ ಇಲ್ಲಿದೆ...

6 Jan 2023 3:48 PM IST
share
ಎಲ್ಲ 60 ಶಾಸಕರ ರಾಜೀನಾಮೆಗೆ ನಾಗಾಲ್ಯಾಂಡ್ ಕಾಂಗ್ರೆಸ್ ಆಗ್ರಹ: ಕಾರಣ ಇಲ್ಲಿದೆ...

ದಿಮಾಪುರ್: ನಾಗಾ ಸಮಸ್ಯೆಗೆ ರಾಜಕೀಯ ಪರಿಹಾರ ಜಾರಿಗಾಗಿ ನಾಗಾಲ್ಯಾಂಡ್ (Nagaland) ವಿಧಾನಸಭೆಯ ಎಲ್ಲ 60 ಶಾಸಕರು ರಾಜೀನಾಮೆ ಸಲ್ಲಿಸಬೇಕು ಎಂದು ನಾಗಾಲ್ಯಾಂಡ್ ಪ್ರದೇಶ ಕಾಂಗ್ರೆಸ್ (Congress) ಸಮಿತಿ ಆಗ್ರಹಿಸಿದೆ ಎಂದು ndtv.com ವರದಿ ಮಾಡಿದೆ.

ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ನಾಗಾಲ್ಯಾಂಡ್ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ. ಥೇರೀ, ಸಂಯುಕ್ತ ಪ್ರಜಾಸತ್ತಾತ್ಮಕ ಮೈತ್ರಿಕೂಟಕ್ಕೆ ನಿಷ್ಠೆ ಏನಾದರೂ ಉಳಿದಿದ್ದರೆ, ಅವರೆಲ್ಲ ಕೇಂದ್ರ ಗೃಹ ಸಚಿವ ಅಮಿತ್ ಶಾರಿಗೆ ತಮ್ಮ ರಾಜೀನಾಮೆ ಸಲ್ಲಿಸಿ, ನಾಗಾ ಸಮಸ್ಯೆಗೆ ರಾಜಕೀಯ ಪರಿಹಾರ ಅನುಷ್ಠಾನಗೊಳಿಸಲು ಆಗ್ರಹಿಸಬೇಕು. ಏಕೆಂದರೆ, ಶೀಘ್ರದಲ್ಲಿಯೇ ವಿಧಾನಸಭಾ ಚುನಾವಣೆ ನಡೆಯಲಿರುವುದರಿಂದ ಹೆಚ್ಚು ಕಾಲಾವಕಾಶ ಉಳಿದಿಲ್ಲ" ಎಂದು ಹೇಳಿದ್ದಾರೆ.

ಇದೇ ವೇಳೆ ನಾಗಾ ಜನತೆಯನ್ನು ಹೆಚ್ಚು ನಿಗೂಢವಾಗಿಡಕೂಡದು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿರುವ ಅವರು, ಇದು ಅತಿಯಾಯಿತು ಎಂದು ಕಿಡಿ ಕಾರಿದ್ದಾರೆ. "ಅವರು ನಿಜಕ್ಕೂ ಪ್ರಾಮಾಣಿಕರಾಗಿದ್ದರೆ ಅವರು ರಾಷ್ಟ್ರಪತಿ ಆಡಳಿತಕ್ಕೆ ಒತ್ತಾಯಿಸಬೇಕು ಮತ್ತು ರಾಜಕೀಯ ಪರಿಹಾರದ ಅನುಷ್ಠಾನಕ್ಕಾಗಿ ಚುನಾವಣೆಯನ್ನು ಬಹಿಷ್ಕರಿಸಬೇಕು. ಇದು ಬಿಜೆಪಿ ಮತ್ತು ರಾಜ್ಯ ಸರ್ಕಾರದ ನಿಲುವಾಗಬೇಕು" ಎಂದು ಅಭಿಪ್ರಾಯ ಪಟ್ಟಿದ್ದಾರೆ.

"ನಾಗಾಲ್ಯಾಂಡ್‌ನ ನಾಗಾ ಜನತೆಗಾಗಿ ನವೆಂಬರ್, 2017ರಲ್ಲಿ ಸ್ವೀಕೃತ ನಿಲುವಿಗೆ ನಾಗಾ ರಾಷ್ಟ್ರೀಯ ರಾಜಕೀಯ ಪಕ್ಷಗಳು ಸಹಿ ಮಾಡಿವೆ. ಅಲ್ಲಿಂದ ಇಲ್ಲಿಯವರೆಗೆ ಸ್ವಾಯತ್ತೆಯೂ ದೊರೆತಿಲ್ಲ, ಏಕತೆಯೂ ಮೂಡಿಲ್ಲ. ನಾಗಾಲ್ಯಾಂಡ್ ಮೇಲೆ ಎರಡು ಪರಿಹಾರಗಳನ್ನು ಜಾರಿಗೊಳಿಸಲು ಸಾಧ್ಯವಿಲ್ಲದೆ ಇರುವುದರಿಂದ ನಾವು ಮತ್ತೊಂದು ಸುತ್ತಿನ ಮಾತುಕತೆಗೆ ಕಾಯುವ ಅಗತ್ಯವಿಲ್ಲ" ಎಂದು ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಹೇಳಿದ್ದಾರೆ.

ಹೀಗಾಗಿ, ಕೇಂದ್ರ ಮತ್ತು ನಾಗಾ ರಾಷ್ಟ್ರೀಯ ರಾಜಕೀಯ ಪಕ್ಷಗಳ ನಡುವೆ ಏರ್ಪಟ್ಟಿರುವ ಒಪ್ಪಂದದಂತೆ ಸ್ವೀಕೃತ ನಿಲುವನ್ನು ಜಾರಿಗೊಳಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಸೀಟ್‌ ಕಡಿಮೆಯಾದರೂ ಶೌಚಾಲಯ ಹೆಚ್ಚಿರಲಿ: ಏರ್‌ ಇಂಡಿಯಾ 'ಮೂತ್ರ ಪ್ರಕರಣದ' ಕುರಿತು ನೆಟ್ಟಿಗರ ವ್ಯಂಗ್ಯ

share
Next Story
X