ಉಡುಪಿ: ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ
ಉಡುಪಿ: ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ವತಿಯಿಂದ ಕಾರ್ಕಳ ತಾಲೂಕು ನೂರಾಲ್‌ಬೆಟ್ಟು ಪ್ರದೇಶದಲ್ಲಿ ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನಿಸಲಾಗಿದೆ.
ರಾಜ್ಯ ಸರ್ಕಾರದ ಸ್ವಾಮ್ಯದ ನಿಗಮ/ ಉದ್ಯಮ ಅಥವಾ ಕಂಪೆನಿಗಳು ಅಥವಾ ಗ್ರಾಪಂಗಳು, ನಗರ ಸ್ಥಳೀಯ ಸಂಸ್ಥೆಗಳು, ತಾಲೂಕು ಕೃಷಿ ಪ್ರಾಥಮಿಕ ಸಂಘಗಳು, ಸಹಕಾರ ಮಾರಾಟ ಸಂಘಗಳು, ಪ್ರಾಥಮಿಕ ಕೃಷಿ ಸಹಕಾರ ಸಂಘ ಅಥವಾ ಹಾಪ್‌ಕಾಮ್ಸ್, ನೋಂದಾಯಿತ ಸಹಕಾರ ಸಂಘಗಳು, ನೋಂದಾಯಿತ ಪ್ರಾಥಮಿಕ ಗ್ರಾಹಕ ಸಹಕಾರ ಸಂಘ, ಲ್ಯಾಂಪ್ಸ್ (ಆದಿವಾಸಿಗಳ ವಿವಿದ್ಧೋದ್ದೇಶ ಸಂಘ), ನೋಂದಾಯಿತ ನೇಕಾರರ ಸಹಕಾರ ಸಂಘ, ನೋಂದಾಯಿತ ಮಹಿಳಾ ವಿವಿದ್ಧೋದ್ದೇಶ ಸಹಕಾರ ಸಂಘ, ನೋಂದಾಯಿತ ದ್ಧೋದ್ದೇಶ ಸಹಕಾರ ಸಂಘ, ಅಂಗಕಲರ ಕಲ್ಯಾಣ ಸಹಕಾರ ಸಂಘ, ಸಹಕಾರ ಸಂಘ ಅಥವಾ ಸಹಕಾರಿ ಬ್ಯಾಂಕ್ ನಡೆಸುತ್ತಿರುವ ಬ್ಯಾಂಕ್‌ಗಳು, ನ್ಯಾಯಬೆಲೆ ಅಂಗಡಿ ಮಂಜೂರು ಮಾಡುವ ಪ್ರದೇಶದಲ್ಲಿ ನೆಲೆಗೊಂಡಿರುವ, ಕನಿಷ್ಠ 3 ವರ್ಷಗಳಿಂದ ಅಸ್ತಿತ್ವದಲ್ಲಿರುವ ಹಾಗೂ ಕಳೆದ ಒಂದು ವರ್ಷದಿಂದ ನಿರಂತರವಾಗಿ ಕನಿಷ್ಠ ಒಂದು ಲಕ್ಷ ರೂ.ಬ್ಯಾಂಕ್ ಬ್ಯಾಲೆನ್ಸ್ ಹೊಂದಿರುವ ರಾಜ್ಯ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಮಾನ್ಯತೆ ಪಡೆದ ಸ್ತ್ರೀ ಶಕ್ತಿ ಗುಂಪುಗಳು ಮತ್ತು ಮಹಿಳಾ ಸ್ವ-ಸಹಾಯ ಗುಂಪುಗಳು, ವೈಯಕ್ತಿಕವಾಗಿ ಅಂಗವಿಕಲ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ವರ್ಗದ ಅರ್ಹ ವ್ಯಕ್ತಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಫೆ.1 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ರಜತಾದ್ರಿ, ಮಣಿಪಾಲ ಉಡುಪಿ ದೂ.ಸಂಖ್ಯೆ: 0820-2574947, ಕಾರ್ಕಳ ತಾಲೂಕು ಕಚೇರಿಯ ಆಹಾರ ನಿರೀಕ್ಷಕರು ಮೊ.ನಂ: 9008819733ನ್ನು ಸಂಪರ್ಕಸಬಹುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







