ಮಂಗಳೂರು: ಜ.8ರಂದು ಯಕ್ಷಗಾನ ಪ್ರದರ್ಶನ
ಮಂಗಳೂರು: ಯಕ್ಷಾಭಿನಯ ಬಳಗ ಮಂಗಳೂರು ಇದರ 3ನೇ ವಾರ್ಷಿಕೋತ್ಸವದ ಅಂಗವಾಗಿ ಬಡಗುತಿಟ್ಟು ಯಕ್ಷಗಾನ ಪ್ರದರ್ಶನವು ಜ. 8ರಂದು ಮಧ್ಯಾಹ್ನ 2ರಿಂದ ನಗರದ ಪುರಭವನದಲ್ಲಿ ನಡೆಯಲಿದೆ ಎಂದು ಬಳಗದ ಅಧ್ಯಕ್ಷ ಪ್ರಶಾಂತ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.
ಶುಕ್ರವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಡಗುತಿಟ್ಟು ಯಕ್ಷಗಾನ ತರಬೇತಿಗಾಗಿ ಮೂರು ವರ್ಷಗಳ ಹಿಂದೆ ಯಕ್ಷಾಭಿನಯ ಬಳಗ ಎಂಬ ಸಂಘವನ್ನು ಹುಟ್ಟು ಹಾಕಿ ಯಕ್ಷಗುರು ಐರೋಡಿ ಮಂಜುನಾಥ ಕುಲಾಲ್ ಯಡ್ತಾಡಿಯ ನಿರ್ದೇಶನದಲ್ಲಿ ಯಕ್ಷಗಾನ ತರಬೇತಿ ನೀಡಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಯಕ್ಷಗುರು ಐರೋಡಿ ಮಂಜುನಾಥ ಕುಲಾಲ್‌ಗೆ ಗುರುವಂದನೆ ನಡೆಯಲಿದೆ. ಜನ್ಸಾಲೆ ರಾಘವೇಂದ್ರ ಆಚಾರ್ಯ, ಪ್ರಸಾದ್ ಕುಮಾರ್ ಮೊಗೆಬೆಟ್ಟು ಅವರ ಭಾಗವತಿಕೆಯಲ್ಲಿ ತಾಮ್ರಧ್ವಜ ಕಾಳಗ ಮತ್ತು ಮೀನಾಕ್ಷಿ ಕಲ್ಯಾಣ ಎಂಬ ಎರಡು ಪ್ರಸಂಗಗಳ ಪ್ರದರ್ಶನ ನಡೆಯಲಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಬಳಗದ ಕಾರ್ಯದರ್ಶಿ ಸಂತೋಷ್ ಶೆಟ್ಟಿ, ಕೋಶಾಧಿಕಾರಿ ರಾಘವೇಂದ್ರ ನೆಲ್ಲಿಕಟ್ಟೆ, ಜೊತೆ ಕಾರ್ಯದರ್ಶಿ ರಾಮಕೃಷ್ಣ ಮರಾಟಿ, ಗಾಯತ್ರಿ ಉಪಸ್ಥಿತರಿದ್ದರು.