ಮಂಗಳೂರು: ಜ.8ರಂದು ಲಯನ್ಸ್ ಪ್ರಾಂತೀಯ ಸಮ್ಮೇಳನ
ಮಂಗಳೂರು: ಅಂತಾರಾಷ್ಟ್ರೀಯ ಲಯನ್ಸ್ ಸಂಸ್ಥೆ 317-ಡಿ ಇದರ ಪ್ರಾಂತ 10ರ ಪ್ರಾಂತೀಯ ಸಮ್ಮೇಳನ ‘ಮನ್ವಂತರ’ ಜ.8ರಂದು ಸಂಜೆ 4ಕ್ಕೆ ಅಡ್ಯಾರ್ ಗಾರ್ಡನ್‌ನ ಆದ್ಯ ಸಭಾಂಗಣದಲ್ಲಿ ನಡೆಯಲಿದೆ ಎಂದು ಲಯನ್ಸ್ ಪ್ರಾಂತ್ಯಾಧ್ಯಕ್ಷ ಲೋಕೇಶ್ ಶೆಟ್ಟಿ ತಿಳಿಸಿದರು.
ಶುಕ್ರವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಾಂತ್ಯಾಧ್ಯಕ್ಷ ಲೋಕೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಪ್ರಾಂತದ ಪ್ರಥಮ ಮಹಿಳೆ ಶಿಲ್ಪಾಶೆಟ್ಟಿ ಕಾರ್ಯಕ್ರಮ ಉದ್ಘಾಟಿಸುವರು. ರಾಜೀವ್ ಗಾಂಧಿ ವಿವಿಯ ಮಾಜಿ ನಿರ್ದೇಶಕ ಡಾ.ಕೆ.ಪಿ.ಪುತ್ತೂರಾಯ ದಿಕ್ಸೂಚಿ ಭಾಷಣ ಮಾಡುವರು. ಮಂಗಳೂರು ಎಸಿಪಿ ಗೀತಾ ಕುಲಕರ್ಣಿ ಅತಿಥಿಯಾಗಿ ಭಾಗವಹಿಸುವರು ಎಂದರು.
ಪ್ರಾಂತೀಯ ಸಮ್ಮೇಳನದ ಸವಿನೆನಪಿಗಾಗಿ ಎರಡು ಕುಟುಂಬಗಳಿಗೆ 10 ಲಕ್ಷ ರೂ. ಅಂದಾಜು ವೆಚ್ಚದಲ್ಲಿ ನಗರದ ಪಾಂಡೇಶ್ವರದ ದೂಮಪ್ಪಕಾಂಪೌಂಡ್ ಪರಿಸರದಲ್ಲಿ ನಿರ್ಮಿಸಲಾದ ಎರಡು ಮನೆಗಳ ಕೀಲಿಕೈ ಹಸ್ತಾಂತರಿಸಲಾಗುವುದು ಎಂದರು.
ಸುದ್ದಿಗೋಷ್ಠಿಯಲ್ಲಿ ಸಮ್ಮೇಳನದ ಕಾರ್ಯದರ್ಶಿ ಪ್ರವೀಣ್ ಶೆಟ್ಟಿ, ಸಾರ್ವಜನಿಕ ಸಂಪರ್ಕ ಅಧಿಕಾರಿ ಶ್ರೀಧರ್, ವಲಯ ರಾಯಭಾರಿ ಸದಾನಂದ ಉಪಾಧ್ಯಾಯ ಉಪಸ್ಥಿತರಿದ್ದರು.