ಮಂಗಳೂರು: ಆರೋಗ್ಯ ಸಂಯೋಜಕರ ತಾತ್ಕಾಲಿಕ ನೇಮಕಕ್ಕೆ ಅರ್ಜಿ ಆಹ್ವಾನ
ಮಂಗಳೂರು: ತಾಲೂಕು ಮಟ್ಟದಲ್ಲಿ ಆದಿವಾಸಿ ಆರೋಗ್ಯ ಕಾರ್ಯಕರ್ತೆ ಹಾಗೂ ಜಿಲ್ಲಾ ಮಟ್ಟದಲ್ಲಿ ಆದಿವಾಸಿ ಆರೋಗ್ಯ ಸಂಯೋಜಕರನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆರೋಗ್ಯ ಕಾರ್ಯಕರ್ತೆಯರಿಗೆ ಪ್ರತಿ ತಿಂಗಳು 12,000 ರೂ.ಹಾಗೂ ಜಿಲ್ಲಾ ಮಟ್ಟದ ಆರೋಗ್ಯ ಸಂಯೋಜಕರಿಗೆ 15,000 ರೂ. ಗೌರವಧನ ನೀಡಲಾಗುವುದು. ಅರ್ಹ ಅಭ್ಯರ್ಥಿಗಳು ಮಂಗಳೂರಿನ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಸಮನ್ವಯಾಧಿಕಾರಿಯ ಕಚೇರಿಯಿಂದ ಅರ್ಜಿ ಪಡೆದು ಜ.20ರೊಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ದೂ.ಸಂ 0824-2451269ನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.
Next Story





