ಉಡುಪಿ: ಕಾನೂನು ಪದವೀಧರರಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ
ಉಡುಪಿ: ಜಿಲ್ಲಾ ನ್ಯಾಯಾಲಯದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ ನವ ಕಾನೂನು ಪದವೀಧರರಿಗೆ ಮಾಸಿಕ 2,000 ರೂ.ನಂತೆ ಪ್ರೋತ್ಸಾಹಧನ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಫೆಬ್ರವರಿ 15 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಧಾನ ಜಿಲ್ಲಾ ನ್ಯಾಯಾಧೀಶರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿ ಪ್ರಕಟಣೆ ತಿಳಿಸಿದೆ.
Next Story