ಮಂಗಳೂರು: ಹರೇಕಳ ಗ್ರಾಮ ಸೌಧಕ್ಕೆ ಸಿದ್ದರಾಮಯ್ಯ ಭೇಟಿ; ಸಭಾಂಗಣ ಉದ್ಘಾಟನೆ

ಕೊಣಾಜೆ: ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ವಿವಿಧ ಅಭಿವೃದ್ಧಿ ಕಾಮಗಾರಿಗಳ ಮೂಲಕ ಗಮನ ಸೆಳೆಯುತ್ತಿರುವ ಹರೇಕಳ ಗ್ರಾಮದ ಗ್ರಾಮ ಪಂಚಾಯಿತಿ ಕಚೇರಿ ಕಟ್ಟಡ "ಹರೇಕಳ ಗ್ರಾಮ ಸೌಧ" ಕ್ಕೆ ಭೇಟಿ ನೀಡಿ ನೂತನ ಸಭಾಂಗಣವನ್ನು ಉದ್ಘಾಟಿಸಿದರು ಹಾಗೂ ಗ್ರಾಮೀಣ ಪ್ರದೇಶದಲ್ಲಿನ ಎಲ್ಲಾ ವ್ಯವಸ್ಥೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಬಳಿಕ ಡಾ.ಜಿ. ಶಂಕರ್ ಹರೇಕಳ ಗ್ರಾಮಕ್ಕೆ ಕೊಡುಗೆಯ ರೂಪದಲ್ಲಿ ನಿರ್ಮಿಸಿದ ಆಸ್ಪತ್ರೆ ಭೇಟಿ ನೀಡಿ ಅಲ್ಲಿಯ ಸೌಲಭ್ಯಗಳ ಬಗ್ಗೆ ವೀಕ್ಷಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಯು.ಟಿ.ಖಾದರ್, ಕಾಂಗ್ರೆಸ್ ಮುಖಂಡರಾದ ಬಿ.ಕೆ.ಹರಿಪ್ರಸಾದ್, ಮಾಜಿ ಸಚಿವ ರಮಾನಾಥ ರೈ, ಐವನ್ ಡಿಸೋಜ, ಹರೇಕಳ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಬದ್ರುದ್ದೀನ್ ಹರೇಕಳ, ತಾಲೂಕು ಪಂಚಾಯತಿ ಮಾಜಿ ಸದಸ್ಯರಾದ ಮಹಮ್ಮದ್ ಮುಸ್ತಫಾ ಹರೇಕಳ, ಉಪಾಧ್ಯಕ್ಷೆ ಕಲ್ಯಾಣಿ ಹಾಗೂ ಪಂಚಾಯತ್ ಸಿಬ್ಬಂದಿಗಳು, ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.
Next Story





