ಬಿ.ಎ. ವಿವೇಕ ರೈಗೆ ‘ಶ್ರೀ ಸಾಹಿತ್ಯ ಪ್ರಶಸ್ತಿ’
ಬೆಂಗಳೂರು, ಜ. 6: ಜಾನಪದ ವಿದ್ವಾಂಸ ಹಾಗೂ ಹಿರಿಯ ಸಂಶೋಧಕ ಬಿ.ಎ. ವಿವೇಕ ರೈ ಅವರನ್ನು 2023ನೆ ಸಾಲಿನ 'ಶ್ರೀ ಸಾಹಿತ್ಯ ಪ್ರಶಸ್ತಿ'ಗೆ ಆಯ್ಕೆ ಮಾಡಲಾಗಿದೆ.
ಪ್ರಶಸ್ತಿಯು 1 ಲಕ್ಷ ರೂ. ನಗದು, ಸ್ಮರಣಿಕೆಯನ್ನು ಒಳಗೊಂಡಿದೆ. ಜ. 22ರಂದು ಎನ್.ಆರ್. ಕಾಲನಿಯಲ್ಲಿರುವ ಬಿ.ಎಂ.ಶ್ರೀ ಪ್ರತಿಷ್ಠಾನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರತಿಷ್ಠಾನದ ಪ್ರಕಟಣೆ ತಿಳಿಸಿದೆ.
Next Story





