Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕರ್ನಾಟಕ ಶಿಕ್ಷಣ ಕಾಯಿದೆ ಸೆಕ್ಷನ್...

ಕರ್ನಾಟಕ ಶಿಕ್ಷಣ ಕಾಯಿದೆ ಸೆಕ್ಷನ್ 48ನ್ನು ಅಸಾಂವಿಧಾನಿಕ ಎಂದ ಹೈಕೋರ್ಟ್

ಕರ್ನಾಟಕ ಖಾಸಗಿ ಶಾಲೆಗಳ ಸಮಿತಿ ಸಲ್ಲಿಸಿದ್ದ ಅರ್ಜಿ ವಿಚಾರ

6 Jan 2023 11:37 PM IST
share
ಕರ್ನಾಟಕ ಶಿಕ್ಷಣ ಕಾಯಿದೆ ಸೆಕ್ಷನ್ 48ನ್ನು ಅಸಾಂವಿಧಾನಿಕ ಎಂದ ಹೈಕೋರ್ಟ್
ಕರ್ನಾಟಕ ಖಾಸಗಿ ಶಾಲೆಗಳ ಸಮಿತಿ ಸಲ್ಲಿಸಿದ್ದ ಅರ್ಜಿ ವಿಚಾರ

ಬೆಂಗಳೂರು, ಜ.6: ಖಾಸಗಿ ಅನುದಾನ ರಹಿತ ಶಾಲೆಗಳು ರಾಜ್ಯ ಸರಕಾರ ನಿಗದಿ ಪಡಿಸಿದ ರೀತಿಯಲ್ಲಿ ಹೊರತುಪಡಿಸಿ ಇತರ ಕಾರಣಗಳಿಗೆ ಶುಲ್ಕ ಪಡೆಯುವುದನ್ನು ನಿಷೇಧಿಸುವ ಕರ್ನಾಟಕ ಶಿಕ್ಷಣ ಕಾಯಿದೆ 1983ರ ಸೆಕ್ಷನ್ 48ನ್ನು ಹೈಕೋರ್ಟ್ ಅಸಾಂವಿಧಾನಿಕ ಎಂದು ಪ್ರಕಟಿಸಿದೆ. 

ಕರ್ನಾಟಕ ಖಾಸಗಿ ಶಾಲೆಗಳ ಸಮಿತಿ ಸೇರಿ ಮತ್ತಿತರ ಶಾಲಾ ಆಡಳಿತ ಮಂಡಳಿಗಳು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಇ.ಎಸ್.ಇಂದಿರೇಶ್ ಅವರಿದ್ದ ನ್ಯಾಯಪೀಠ, ಈ ಆದೇಶ ಪ್ರಕಟಿಸಿದೆ. ಇದರಿಂದ, ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳನ್ನು ಶುಲ್ಕ ವಿಧಿಸುವುದನ್ನು ನಿಯಂತ್ರಿಸುವುದಕ್ಕೆ ಸರಕಾರಕ್ಕೆ ಇದ್ದ ಅಧಿಕಾರ ರದ್ದಾದಂತಾಗಿದೆ. 

ಅಲ್ಲದೆ, ಮಕ್ಕಳನ್ನು ಲೈಂಗಿಕ ಅಪರಾಧಗಳಿಂದ ರಕ್ಷಣೆ ಮತ್ತು ಸುರಕ್ಷತೆ ಕಾಪಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಸರಕಾರ ಖಾಸಗಿ ಅನುದಾನರಹಿತ ಶಾಲೆಗಳು ಮತ್ತು ಅದರ ಉದ್ಯೋಗಿಗಳ ಮೇಲೆ ಕ್ರಮ ಕೈಗೊಳ್ಳಬಹುದಾದ ಸೆಕ್ಷನ್ 5ಎ, ಅನುದಾನ ರಹಿತ ಶಾಲೆಗಳನ್ನು ನಿಯಂತ್ರಿಸುವ ಜಿಲ್ಲಾಧಿಕಾರಿಗಳ ನೇತೃತ್ವದ ಜಿಲ್ಲಾ ಶಿಕ್ಷಣ ನಿಯಂತ್ರಣ ಪ್ರಾಧಿಕಾರ (ಡಿಇಆರ್‍ಎ) ಕ್ಕೆ ಅಧಿಕಾರ ಒದಗಿಸುವ ಸೆಕ್ಷನ್2 (11) (ಎ), ನಿಗದಿಗಿಂತಲೂ ಹೆಚ್ಚುವರಿ ಶುಲ್ಕ ಪಡೆಯುವುದನ್ನು ನಿಯಂತ್ರಿಸುವ ಸೆಕ್ಷನ್ 48ರ ಉಲ್ಲಂಘನೆ ಮಾಡುವ ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಿಗೆ 10 ಲಕ್ಷ ರೂ.ವರೆಗೂ ದಂಡ ವಿಧಿಸುವುದಕ್ಕೆ ಅವಕಾಶ ನೀಡುವ ಸೆಕ್ಷನ್ 124ಎ ಅನ್ನು ಅಸಾಂವಿಧಾನಿಕ ಎಂದು ತಿಳಿಸಿದೆ.

ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಹಕ್ಕುಗಳ ಮೆಲೆ ಸುಪ್ರೀಂಕೋರ್ಟ್ ರೂಪಿಸಿರುವ ಪ್ರಕಾರ ಕರ್ನಾಟಕ ಶಿಕ್ಷಣ ಕಾಯಿದೆ 1983ರ ಈ ಸೆಕ್ಷನ್‍ಗಳು ಸಂವಿಧಾನ ಪರಿಚ್ಛೇದ 14 (ಕಾನೂನಿನಲ್ಲಿ ಸಮಾನತೆ), ಪರಿಚ್ಛೇದ 19 (1) (ಜಿ) (ಕಾನೂನಿನ ಅಧೀನದಲ್ಲಿರುವ ಯಾವುದೇ ವೃತ್ತಿ, ಉದ್ಯೋಗ, ವ್ಯಾಪಾರ ಮತ್ತು ವ್ಯವಹಾರವನ್ನು ನಡೆಸುವ ಹಕ್ಕು) ಯ ಉಲ್ಲಂಘನೆ ಮಾಡಿದಂತಿದೆ ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿದೆ.

ಅಲ್ಲದೇ, ಮಕ್ಕಳ ಮೇಲಿನ ಲೈಂಗಿಕ ಅಪರಾಧಗಳಲ್ಲಿ ಭಾಗಿಯಾದ ಅನುದಾನ ರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳ ಸದಸ್ಯರು, ಸಿಬ್ಬಂದಿಗೆ ಆರು ತಿಂಗಳುಗಳ ಕಾಲ ಶಿಕ್ಷೆ ಮತ್ತು 1 ಲಕ್ಷದ ವರೆಗಗೂ ದಂಡ ವಿಧಿಸಬಹುದಾದ ಸೆಕ್ಷನ್ 112(ಎ) ಸಹಾ ಉಲ್ಲಂಘಿಸಿದಂತಾಗಿದೆ. ಅಲ್ಲದೆ, ಪೂರ್ವ ಪ್ರಾರ್ಥಮಿಕ ಅವಧಿಗೆ ಶುಲ್ಕ ವಿಧಿಸುವುದು ಮತ್ತು ವಿಶೇಷ ಅಭಿವೃದ್ಧಿ ಶುಲ್ಕ ಸಂಗ್ರಹಿಸುವುದನ್ನು ನಿಯಂತ್ರಿಸಬಹುದಾದ 1995 ಮತ್ತು 1999ರಲ್ಲಿ ಜಾರಿ ಮಾಡಿರುವ ನಿಯಮಗಳು ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಿಗೆ ಅನ್ವಯಿಸುವುದಿಲ್ಲ ಎಂದು ಹೈಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿದೆ.

ಈ ಹಿಂದೆಯೂ ಆದೇಶ ನೀಡಿದ್ದ ಹೈಕೋರ್ಟ್, ಕರ್ನಾಟಕ ಅನುದಾನ ರಹಿತ ಶಾಲೆಗಳ ನಿರ್ವಹಣಾ ಸಂಘ (ಕುಸ್ಮಾ)1995ರಲ್ಲಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾ. ಆಲೋಕ್ ಆರಾಧೆ ಅವರ ನೇತೃತ್ವದ ವಿಭಾಗೀಯ ಪೀಠ, 2022ರ ಡಿ.1ರಂದು ಕರ್ನಾಟಕ ಶಿಕ್ಷಣ ಕಾಯಿದೆ 1983ರ ಹಲವು ಸೆಕ್ಷನ್‍ಗಳನ್ನು ಅಸಾಂವಿಧಾನಿಕ ಎಂಬುದಾಗಿ ಪ್ರಕಟಿಸಿತ್ತು ಎಂಬುದನ್ನು ಇಲ್ಲಿ ಸ್ಮರಿಸಬಹುದಾಗಿದೆ. 

share
Next Story
X