Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ತೋಡಾರಿನಲ್ಲಿ "ತುಡರ್" ಹಸ್ತಾಂತರ...

ತೋಡಾರಿನಲ್ಲಿ "ತುಡರ್" ಹಸ್ತಾಂತರ ಕಾರ್ಯಕ್ರಮ

7 Jan 2023 5:53 PM IST
share
ತೋಡಾರಿನಲ್ಲಿ ತುಡರ್ ಹಸ್ತಾಂತರ ಕಾರ್ಯಕ್ರಮ

ಮೂಡುಬಿದಿರೆ: ಕಳೆದ ಹಲವು ವರ್ಷಗಳಿಂದ ಪ್ಲಾಸ್ಟಿಕ್ ಹೊದಿಕೆಯ ಮನೆಯಲ್ಲಿ ವಾಸವಾಗಿದ್ದ ಬಾಬು ಪೂಜಾರಿ ಕುಟುಂಬಕ್ಕೆ ಕುಮಾರ್, ರೋಟರಿ ಕ್ಲಬ್ ಆಫ್ ಮಿಡ್ ಟೌನ್, ತಾ.ಪಂ.ಸದಸ್ಯೆ ರೀಟಾ ಕುಟಿನ್ಹಾ ಅವರ ನೇತೃತ್ವದಲ್ಲಿ  ದಾನಿಗಳ ಸಹಕಾರದಿಂದ ರೂ 7ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ನೂತನ ಮನೆ "ತುಡರ್" ಇದರ ಹಸ್ತಾಂತರ ಕಾರ್ಯಕ್ರಮವು ಶನಿವಾರ ನಡೆಯಿತು.

ರಾಷ್ಟ್ರೀಯ ಬಿಲ್ಲವ ಮಹಾಮಂಡಲದ  ಅಧ್ಯಕ್ಷ ರಾಜಶೇಖರ್ ಕೋಟ್ಯಾನ್ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. 

ಶಾಸಕ ಉಮಾನಾಥ ಕೋಟ್ಯಾನ್ ಕೀಯನ್ನು ಹಸ್ತಾಂತರಿಸಿ ಮಾತನಾಡಿ, ಹೊಟ್ಟೆಗೆ ತಿನ್ನಲು ಆಹಾರ, ಧರಿಸಲು ಬಟ್ಟೆ ಹಾಗೂ ಕೂರಲೊಂದು ಮನೆ ಇದು ಪ್ರತಿಯೊಬ್ಬನಿಗೂ ಬೇಕಾದ ಅಗತ್ಯ ವಸ್ತುಗಳು. ಬಡ ಕುಟುಂಬಕ್ಕೆ ಆಶ್ರಯ ನೀಡುವುದು ಉತ್ತಮ ಕೆಲಸ. ಸರಕಾರವು ಬಡವರಿಗೆ ಮನೆ ನೀಡುತ್ತದೆ.  ಆದರೆ ಅದಕ್ಕೆ ಬೇಕಾದ ಸರಿಯಾದ ದಾಖಲೆಪತ್ರಗಳು ಬೇಕಾಗುತ್ತದೆ. ದಾಖಲೆ ಪತ್ರಗಳು ಸರಿ ಇಲ್ಲದಿರುವುದರಿಂದ ಮನೆ ಕೊಡಲು ಕಷ್ಟವಾಗುತ್ತದೆ. ಇದರಿಂದಾಗಿ ದಾನಿಗಳ ಸಹಕಾರ ಪಡೆದು ಮನೆಗಳನ್ನು ನಿರ್ಮಿಸಿ ಕೊಡಬೇಕಾಗುತ್ತದೆ.  ತಮಗೆ ಮನೆ ನಿರ್ಮಿಸಿಕೊಟ್ಟವರನ್ನು ಯಾವತ್ತೂ ಮರೆಯಬೇಡಿ. ಮುಂದಿನ ದಿನಗಳಲ್ಲಿ ತಮ್ಮ ಮಕ್ಕಳು ಇತರ ಅಶಕ್ತರಿಗೆ ಸಹಾಯ ಮಾಡುವಂತಹ ಗುಣವನ್ನು ಬೆಳೆಸಿಕೊಳ್ಳಲಿ ಎಂದು ಶುಭ ಹಾರೈಸಿದರು.

ಮಾಜಿ ಸಚಿವ  ಕೆ.ಅಭಯಚಂದ್ರ ಜೈನ್ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ಬಡವರಿಗೆ ತಾನು ಸಹಕಾರ ನೀಡಿದ್ದರಿಂದ ಕಳೆದ ನಾಲ್ಕು ಬಾರಿ ಶಾಸಕನಾಗಿ ಆಯ್ಕೆಯಾಗಲು ಸಹಕಾರಿಯಾಯಿತು. ಮಾಜಿ ಪ್ರಧಾನಿ ಇಂದಿರಾಗಾಂಧಿಯವರು ಉಳುವವನೆ ಹೊಲದೊಡೆಯ ಎಂಬ ಕಾನೂನನ್ನು ಜಾರಿಗೆ ತಂದಿರುವುದರಿಂದ ಬಿಲ್ಲವ, ದೇವಾಡಿಗ, ಎಸ್ ಸಿ, ಎಸ್ ಟಿಯವರಿಗೆ ಭೂಮಿಯ ಒಡೆತನ ಸಿಗುವ ಮೂಲಕ  ಸಹಕಾರಿಯಾಗಿತ್ತು.  ಹಿಂದುತ್ವ ಕೇವಲ ಒಬ್ಬನ ಆಸ್ತಿಯಲ್ಲ. ದೇಶಪ್ರೇಮ, ಬಡವರ  ಬಗ್ಗೆ ಮಾತನಾಡುವವರು ತಮ್ಮ  ಮಕ್ಕಳನ್ನು ಮಿಲಿಟ್ರಿಗೆ ಕಳುಹಿಸಬೇಕು.  ಆಗ ಮಾತ್ರ ದೇಶಪ್ರೇಮದ ಬಗ್ಗೆ ಮಾತನಾಡಲು ಅರ್ಹತೆ ಇರುವುದು. ಕುಮಾರ್ ಮತ್ತು ದಾನಿಗಳು ಬಡವರಿಗೆ ಆಶ್ರಯ ನೀಡುವ ಮೂಲಕ  ಉತ್ತಮ ಕೆಲಸವನ್ನು ನಿರ್ವಹಿಸಿದ್ದಾರೆಂದರು.

ಸನ್ಮಾನ: ದಾನಿ, ವಿದ್ಯುತ್ ಗುತ್ತಿಗೆದಾರ ಕುಮಾರ್ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು ಹಾಗೂ ಸಹಕಾರ ನೀಡಿರುವ ದಾನಿಗಳನ್ನು ಗುರುತಿಸಿ ಗೌರವಿಸಲಾಯಿತು.

ಯುವ ಮುಂದಾಳು ಮಿಥುನ್ ರೈ, ತಾ.ಪಂ.ಮಾಜಿ ಸದಸ್ಯೆ ರೀಟಾ ಕುಟಿನ್ಹಾ, ಇರುವೈಲ್ ಗ್ರಾ.ಪಂ.ಅಧ್ಯಕ್ಷೆ ವಲೇರಿಯನ್ ಕುಟಿನ್ಹಾ, ಪುರಸಭಾ ಸದಸ್ಯ ಸುರೇಶ್ ಕೋಟ್ಯಾನ್, ತೋಡಾರು ಗುತ್ತಿನ ಚಂದ್ರರಾಜ ಬಲಿಪ, ಎಪಿಎಂಸಿ ಸದಸ್ಯ ಚಂದ್ರಹಾಸ ಸನಿಲ್, ರೋಟರಿ ಕ್ಲಬ್ ಆಫ್  ಮಿಡ್ಟೌನ್ ನ ಅಧ್ಯಕ್ಷ ಪುಷ್ಪರಾಜ್ ಜೈನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಬಾಬು ಪೂಜಾರಿ ದಂಪತಿ ಈ ಸಂದರ್ಭದಲ್ಲಿದ್ದರು.

ಅರ್ಚಕ ರತೀಶ್ ಭಟ್ ಗೃಹಪ್ರವೇಶದ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು. ಸೀನ ನಾಯ್ಕ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

share
Next Story
X