ಬಂಟ್ವಾಳ ತಾಲೂಕು ಸಂಯುಕ್ತ ಜಮಾಅತ್ ವತಿಯಿಂದ ಶೈಕ್ಷಣಿಕ ಮತ್ತು ಆರೋಗ್ಯ ಜಾಗೃತಿ ಕಾರ್ಯಕ್ರಮ
ಬಂಟ್ವಾಳ: ಬಂಟ್ವಾಳ ತಾಲೂಕು ಸಂಯುಕ್ತ ಜಮಾಅತ್ ಕಮಿಟಿ ಇದರ ವತಿಯಿಂದ ತಾಲೂಕಿನ ಸಮಸ್ತ ಮತ್ತು ಸುನ್ನಿ ವಿದ್ಯಾಭ್ಯಾಸ ಬೋರ್ಡಿನ ಎರಡೂ ರೇಂಜಿನ ಅಧ್ಯಕ್ಷರು, ಕಾರ್ಯದರ್ಶಿ, ಸದರ್ ಮುಲಅಲ್ಲಿಮ್ ಹಾಗೂ ಮಸೀದಿಗಳ ಖತೀಬರಗಳಿಗೆ " ಶೈಕ್ಷಣಿಕ ಹಾಗೂ ಅರೋಗ್ಯ ಜಾಗೃತಿ ಕಾರ್ಯಕ್ರಮ ಜನವರಿ 10 ರಂದು ಬಿ.ಸಿ.ರೋಡ್ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಸಮುದಾಯದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆಯ ಫಲಿತಾಂಶದ ಉನ್ನತೀಕರಣ ಹಾಗೂ ಕಿಡ್ನಿ ವೈಫಲ್ಯ ತಡೆಗಟ್ಟಲು ದೈನಂದಿನ ಜೀವನದಲ್ಲಿ ಅನುಸರಿಸಬೇಕಾದ ಕ್ರಮಗಳ ಕುರಿತು ತಜ್ಞ ವ್ಯಕ್ತಿಗಳಿಂದ ಮಾಹಿತಿ ನೀಡಲಾಗುವುದು.
ಕಾರ್ಯಕ್ರಮದಲ್ಲಿ ಸಯ್ಯಿದ್ ಅನಸ್ ಹಾದಿ ತಂಙಳ್ ಅಲ್ ಅಝ್ಹರಿ ದುವಾ ನೆರವೇರಿಸಲಿದ್ದು, ಜಿ.ಎಂ.ಮಹಮ್ಮದ್ ಕಾಮಿಲ್ ಸಖಾಫಿ ಉದ್ಘಾಟಿಸಲಿದ್ದಾರೆ.
ಸಂಯುಕ್ತ ಜಮಾಅತ್ ಅಧ್ಯಕ್ಷ ಮಹಮ್ಮದ್ ಹನೀಫ್ ಹಾಜಿ ಗೋಳ್ತಮಜಲು ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
Next Story





