ಉಡುಪಿ: ಜ. 8ರಂದು ಜಿಲ್ಲಾಮಟ್ಟದ ಲಿಂಗತ್ವ ಆಧಾರಿತ ದೌರ್ಜನ್ಯ ವಿಮೋಚನಾ ಅಭಿಯಾನ
ಉಡುಪಿ: ಜಿಲ್ಲಾ ಮಟ್ಟದ ಲಿಂಗತ್ವ ಆಧಾರಿತ ದೌರ್ಜನ್ಯ ವಿಮೋಚನಾ ಅಭಿಯಾನದ ಅಂಗವಾಗಿ ಜನವರಿ 8ರಂದು ಬೆಳಗ್ಗೆ 11 ಗಂಟೆಗೆ ಉಡುಪಿಯ ಬನ್ನಂಜೆ ಬಾಲಭವನದ ವಠಾರದಲ್ಲಿ ಸಂಜೀವಿನಿ ಸ್ವ-ಸಹಾಯ ಗುಂಪುಗಳ ಮಹಿಳೆಯರಿಗೆ ವಿವಿಧ ಸಾಂಸ್ಕೃತಿಕ ಸ್ಪರ್ಧಾಕೂಟ ಹಾಗೂ ಸ್ವ-ಸಹಾಯ ಗುಂಪಿನ ಮಹಿಳೆಯರು ಉತ್ಪಾದಿಸಿರುವ ವಿವಿಧ ಉತ್ಪನ್ನಗಳ ಮಾರಾಟ ಮೇಳ ‘ಸಂಜೀವಿನಿ ಮಾಸಿಕ ಸಂತೆ’ ನಡೆಯಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
Next Story