Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕುಂದಾಪುರ: ಕೊಡ್ಲಾಡಿ ಸರ್ಕಾರಿ ಹಿರಿಯ...

ಕುಂದಾಪುರ: ಕೊಡ್ಲಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಗುರುಕುಲದಿಂದ ನೂತನ ಶಾಲಾ ಕಟ್ಟಡ ಕೊಡುಗೆ

7 Jan 2023 9:11 PM IST
share
ಕುಂದಾಪುರ: ಕೊಡ್ಲಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ  ಗುರುಕುಲದಿಂದ ನೂತನ ಶಾಲಾ ಕಟ್ಟಡ ಕೊಡುಗೆ

ಕುಂದಾಪುರ: ಜ್ಞಾನ ದೇಗುಲವಾದ ಕನ್ನಡ ಮಾಧ್ಯಮ ಸಂಸ್ಥೆಗಳು ಕಳೆಗುಂದುತ್ತಿರುವುದು ಬೇಸರದ ವಿಚಾರ. ಕನ್ನಡ ಶಾಲೆಗಳ ಉಳಿವು ಇಂದಿನ ಆಗತ್ಯ ವಿಚಾರಗಳಲ್ಲೊಂದಾಗಿದೆ. ಸರಕಾರಗಳು ಇರುವ ಶಾಲೆಗಳನ್ನು ಉಳಿಸಿಕೊಂಡು ಅದನ್ನು ಉನ್ನತೀಕರಣಗೊಳಿಸಬೇಕಾದ ಅನಿವಾರ್ಯತೆ ಯಿದೆ. ಆದರೆ ತರಗತಿಗೊಬ್ಬರು ಶಿಕ್ಷಕರನ್ನು ನೀಡುವ ಯೋಗ್ಯತೆಯಿಲ್ಲದ ಸರಕಾರದಿಂದ ಪ್ರಗತಿ ಹೇಗೆ ಸಾಧ್ಯ ಎಂದು ಮೂಡಬಿದಿರೆ ಆಳ್ವಾಸ್ ಸಮೂಹ ಶಿಕ್ಷಣ ಸಂಸ್ಥೆಗಳ ಪ್ರವರ್ತಕ ಡಾ.ಎಂ. ಮೋಹನ್ ಆಳ್ವ ಪ್ರಶ್ನಿಸಿದ್ದಾರೆ.

ಗುರುಕುಲ ಪಬ್ಲಿಕ್ ಶಾಲೆ ವಕ್ವಾಡಿ ಇವರಿಂದ ದತ್ತು ಸ್ವೀಕೃತವಾದ ಕುಂದಾಪುರ ತಾಲೂಕಿನ ಕೊಡ್ಲಾಡಿ ಬಾಂಡ್ಯದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಗುರುಕುಲ ಸಂಸ್ಥೆಯಿಂದ ಕೊಡುಗೆಯಾಗಿ ನೀಡಿದ ನೂತನ ಶಾಲಾ ಕಟ್ಟಡ ‘ಕದಂಬ’ವನ್ನು ಜ.7ರಂದು ಲೋಕಾರ್ಪಣೆಗೊಳಿಸಿ ಅವರು ಮಾತನಾಡುತಿದ್ದರು.

ನಮ್ಮ ಪೂರ್ವಜರು ಶೈಕ್ಷಣಿಕ ಚಿಂತನೆಯೊಂದಿಗೆ ಕಟ್ಟಿದ ಕನ್ನಡ ಶಾಲೆಗಳನ್ನು ಕಾಲಕಾಲಕ್ಕೆ ಸರಿಯಾಗಿ ಉನ್ನತೀಕರಣಗೊಳಿಸಬೇಕು.ಸಮಾಜದ ಪರಿಕಲ್ಪನೆ ಕೇವಲ ಸರಕಾರಕ್ಕೆ ಮಾತ್ರವಲ್ಲ, ಎಲ್ಲಾ ಸ್ತರದ ಜನರಲ್ಲಿರಬೇಕು. ಸಂಘ ಜೀವಿಯಾದ ಮಾನವನು ಸಮಾಜದಿಂದ ಸಂಪತ್ತು ಪಡೆಯುವ ಕಾರಣ ಬದ್ದತೆ ಇರಬೇಕು ಎಂದರು.

ಗುರುಕುಲ ವಿದ್ಯಾಸಂಸ್ಥೆ ಆಡಳಿತ ಮಂಡಳಿ ಸದಸ್ಯ ಕೆ.ಸಿ ರಾಜೇಶ್ ಪ್ರಸ್ತಾವನೆಯ ಮಾತುಗಳನ್ನಾಡಿ, ಗುರುಕುಲ ಎನ್ನುವ ಭವ್ಯ ಪರಂಪರೆಯನ್ನು ಮುಂದುವರಿಸಬೇಕು. ಶಾಲೆ ಹಾಗೂ ಶಿಕ್ಷಣ ಸಂಸ್ಥೆ ಪ್ರಕೃತಿ ಮಡಿಲಿನಲ್ಲಿ ಸೊಗಸಾಗಿ ನಿಲ್ಲಬೇಕು ಎಂಬ ದೂರದೃಷ್ಟಿ ಚಿಂತನೆಯೊಂದಿಗೆ ಗುರುಕುಲ ವಿದ್ಯಾಸಂಸ್ಥೆ ಹುಟ್ಟಿಕೊಂಡಿದ್ದು, ಇದರ ಜಂಟಿ ಕಾರ್ಯನಿರ್ವಾಹಕ ದಂಪತಿಗಳಾದ ಬಾಂಡ್ಯ ಸುಭಾಶ್ಚಂದ್ರ ಶೆಟ್ಟಿ, ಅನುಪಮಾ ಶೆಟ್ಟಿ ತಮ್ಮ ಹುಟ್ಟೂರಿನ ಸರಕಾರಿ ಶಾಲೆ ಅಭಿವೃದ್ಧಿ ಬಗ್ಗೆ ನಿರ್ಧರಿಸಿ, ಈ ಕನ್ನಡ ಶಾಲೆಯನ್ನು ಉಳಿಸಿಕೊಂಡು, ಪ್ರಬುದ್ದತೆಗಾಗಿ ಇಂಗ್ಲೀಷ್ ಪಾಠಶಾಲೆ ತೆರಯಲು ಚಿಂತನೆಯೊಂದಿಗೆ ದತ್ತು ಸ್ವೀಕರಿಸಿದ್ದಾರೆ ಎಂದರು.

ಮಂಗಳೂರಿನ ಡಾ.ವಾದಿರಾಜ ಗೋಪಾಡಿ ಮಾತನಾಡಿದರು. ಇದೇ ಸಂದರ್ಭ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ನಡೆಯಿತು. ನಿವೃತ್ತ ಮುಖ್ಯೋಪಾಧ್ಯಾಯ ಸಂತೋಷ ಕುಮಾರ ಶೆಟ್ಟಿ ಅಂಪಾರು ಅವರನ್ನು ಸನ್ಮಾನಿಸಲಾಯಿತು.

ಕುಂದಾಪುರದ ಬಾಂಡ್ಯಾ ಎಜ್ಯುಕೇಶನಲ್ ಟ್ರಸ್ಟ್ ಸ್ಥಾಪಕಾಧ್ಯಕ್ಷ ಬಿ. ಅಪ್ಪಣ್ಣ ಹೆಗ್ಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಹಿರಿಯರಾದ ಬಾಂಡ್ಯ ಸುಬ್ಬಣ್ಣ ಶೆಟ್ಟಿ, ವಕ್ವಾಡಿ ಗುರುಕುಲ ಸಮೂಹ ಶಿಕ್ಷಣ ಸಂಸ್ಥೆಗಳ ಜಂಟಿ ಕಾರ್ಯ ನಿರ್ವಾಹಕರಾದ ಸುಭಾಶ್ಚಂದ್ರ ಶೆಟ್ಟಿ ಬಾಂಡ್ಯ, ಅನುಪಮಾ ಎಸ್. ಶೆಟ್ಟಿ ಉಪಸ್ಥಿತರಿದ್ದರು.

ಗುರುಕುಲ ಪಬ್ಲಿಕ್ ಶಾಲೆಯ ಸಂಯೋಜಕಿ ವಿಶಾಲಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಕೊಡ್ಲಾಡಿ ಬಾಂಡ್ಯದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಸಂತೋಷ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಸಹಶಿಕ್ಷಕಿ ಆಶ್ರಿತಾ ವಂದಿಸಿದರು.

share
Next Story
X