Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು: ರಾಷ್ಟ್ರೀಯ ಯುವಜನೋತ್ಸ್ಸವದ...

ಬೆಂಗಳೂರು: ರಾಷ್ಟ್ರೀಯ ಯುವಜನೋತ್ಸ್ಸವದ ‘ಲೋಗೋ’ ಬಿಡುಗಡೆ

7 Jan 2023 11:17 PM IST
share
ಬೆಂಗಳೂರು: ರಾಷ್ಟ್ರೀಯ ಯುವಜನೋತ್ಸ್ಸವದ ‘ಲೋಗೋ’ ಬಿಡುಗಡೆ

ಬೆಂಗಳೂರು: ಇದೇ ತಿಂಗಳ 12ರಂದು ಹುಬ್ಬಳ್ಳಿ-ಧಾರವಾಡದಲ್ಲಿ ನಡೆಯಲಿರುವ ‘ರಾಷ್ಟ್ರೀಯ ಯುವಜನ ಉತ್ಸವ’ದ ಲೋಗೋ ಮತ್ತು ಮ್ಯಾಸ್ಕಾಟ್ ಅನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದಿಲ್ಲಿ ಬಿಡುಗಡೆ ಮಾಡಿದರು.

ಶನಿವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ವರ್ಚುವಲ್ ಕಾರ್ಯಕ್ರಮದಲ್ಲಿ ಕೇಂದ್ರ ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹಾಗೂ ರಾಜ್ಯದ ಕ್ರೀಡಾ ಸಚಿವ ನಾರಾಯಣಗೌಡ ಮತ್ತು ನಟಿ ತಾರಾ ಅನೂರಾಧ ಭಾಗವಹಿಸಿದ್ದರು.

ಬಳಿಕ ಮಾತನಾಡಿದ ಬಸವರಾಜ ಬೊಮ್ಮಾಯಿ, ರಾಜ್ಯದಲ್ಲಿ ಖೇಲೋ ಇಂಡಿಯಾ ಯುನಿವರ್ಸಿಟಿ ಕ್ರೀಡಾಕೂಟ ಆಯೋಜನೆ ಹಾಗೂ ಇದೀಗ ಈ ವರ್ಷ ಯುವಜನ ಉತ್ಸವ ಆಯೋಜನೆಗೆ ಅವಕಾಶ ಒದಗಿಸಿದ ಕೇಂದ್ರ ಸರಕಾರಕ್ಕೆ ಕೃತಜ್ಞತೆ ಸಲ್ಲಿಸುವೆ. ಯುವಜನ ಉತ್ಸವವನ್ನು ಯಶಸ್ವಿಯಾಗಿ ಆಯೋಜಿಸಲು ಸರಕಾರ ಎಲ್ಲ ಸಿದ್ಧತೆಗಳನ್ನು ಕೈಗೊಂಡಿದೆ ಎಂದು ತಿಳಿಸಿದರು.

ಯುವ ಜನಪ್ರತಿನಿಧಿಗಳ ಗೋಷ್ಠಿ: ಈ ಸಂದರ್ಭದಲ್ಲಿ ಯುವಜನ ಉತ್ಸವ ಸಿದ್ಧತೆಗಳ ಕುರಿತು ಚರ್ಚಿಸಲಾಯಿತು. ಇದಲ್ಲದೆ ಯುವಜನ ಮೇಳದಲ್ಲಿ ಯುವ ಶಾಸಕರು, ಸಂಸದರು ಹಾಗೂ ಇತರ ಜನಪ್ರತಿನಿಧಿಗಳ ಗೋಷ್ಠಿಯನ್ನು ಆಯೋಜಿಸಲು ತೀರ್ಮಾನಿಸಲಾಯಿತು. ವಿವಿಧ ರಾಜ್ಯಗಳಿಂದ ಆಗಮಿಸುವ ಯುವಜನರಿಗೆ ರೈಲ್ವೆ ವಿಶೇಷ ಬೋಗಿ ಅಳವಡಿಸುವ ಕುರಿತು, ರೈಲ್ವೆ ಮಂಡಳಿಯು ಒಪ್ಪಿಗೆ ನೀಡಿತು.

ಜನರ ಭಾಗೀದಾರಿಕೆಗೆ ಮೆಚ್ಚುಗೆ: ಉತ್ಸವದ ಲೋಗೋ ಮತ್ತು ಮ್ಯಾಸ್ಕಟ್ ವಿನ್ಯಾಸವನ್ನು ಸ್ಪರ್ಧೆ ಆಯೋಜಿಸುವ ಮೂಲಕ ರೂಪಿಸಿದ ಕುರಿತು ಕೇಂದ್ರ ಸಚಿವ ಅನುರಾಗ್ ಸಿಂಗ್ ಠಾಕೂರ್ ಮೆಚ್ಚುಗೆ ವ್ಯಕ್ತಪಡಿಸಿದರು. ಒಡಿಶಾದ ಬನ್ಸಿಲಾಲ್ ಕೇತ್ಕಿ ರೂಪಿಸಿದ ಲೋಗೋವನ್ನು ಆಯ್ಕೆ ಮಾಡಲಾಗಿದ್ದು, ಅವರಿಗೆ 50ಸಾವಿರ ರೂ.ಗಳ ಬಹುಮಾನ ದೊರೆಯಲಿದೆ.

ಈ ಲೋಗೋ ಭಾರತದ ರಾಷ್ಟ್ರೀಯ ಪುಷ್ಪ ತಾವರೆಯಿಂದ ಪ್ರೇರೇಪಿತವಾಗಿದ್ದು, ರಾಷ್ಟ್ರೀಯತೆ, ನಿಸ್ವಾರ್ಥ ಸೇವೆ ಮತ್ತು ವೈವಿಧ್ಯತೆಯ ನಡುವೆಯೂ ಇರುವ ಏಕತೆ ಹಾಗೂ ಸಹಕಾರವನ್ನು ಪ್ರತಿನಿಧಿಸುತ್ತದೆ. ಜಾಗತಿಕ ಮಟ್ಟದಲ್ಲಿ ಆರ್ಥಿಕವಾಗಿ, ವಿದೇಶಾಂಗ ವ್ಯವಹಾರದಲ್ಲಿ ಹಾಗೂ ಸೇನಾಬಲದಲ್ಲಿ ಭಾರತದ ಉನ್ನತಿಯನ್ನು ಬಿಂಬಿಸುವ ಜೊತೆಗೆ, ಜಿ-20 ಹಾಗೂ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಅಧ್ಯಕ್ಷತೆಯನ್ನು ಅಭಿವ್ಯಕ್ತಪಡಿಸುತ್ತದೆ. 

‘ಚಂಪಿ ಚಿಕ್ಕ’: ಅಂತೆಯೇ ಬೆಂಗಳೂರಿನ ಇನ್ಬಂ ಅವರು ರೂಪಿಸಿದ ‘ಚಂಪಿ ಚಿಕ್ಕ’ ಮ್ಯಾಸ್ಕಟ್ ಆಯ್ಕೆಯಾಗಿದ್ದು, ಅವರಿಗೂ 50ಸಾವಿರ ರೂ. ಬಹುಮಾನ ದೊರೆಯಲಿದೆ. ಇದು ಆನೆಯ ವಿನ್ಯಾಸವನ್ನು ಹೊಂದಿದ್ದು, ಕರ್ನಾಟದಲ್ಲಿ ಅತಿ ಹೆಚ್ಚಿರುವ ಆನೆಗಳ ಸಂಖ್ಯೆಯನ್ನು ಪ್ರತಿನಿಧಿಸುತ್ತದೆ. ಜೊತೆಗೆ ಜಾಗತಿಕ ಮಟ್ಟದಲ್ಲಿ ಹವಾಮಾನ ಬದಲಾವಣೆ, ಸುಸ್ಥಿರ ಅಭಿವೃದ್ಧಿ ಗುರಿ ಸಾಧನೆ, ವಿಶ್ವ ಶಾಂತಿಯ ಜೊತೆಗೆ ಕ್ರೀಡೆ, ಸ್ಟಾರ್ಟಪ್, ನಾವಿನ್ಯತೆ, ಶಿಕ್ಷಣ ಸೇರಿಂದ ವಿವಿಧ ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿರುವ ಯುವ ಮತ್ತು ಆಧುನಿಕ ಭಾರತವನ್ನು ಬಿಂಬಿಸುತ್ತದೆ. 

‘ವಿಕಸಿತ್ ಯುವ- ವಿಕಸಿತ್ ಭಾರತ್’ ಎಂಬ ವಿಷಯದಡಿ ನಡೆಯುತ್ತಿರುವ ಈ ಯುವಜನ ಉತ್ಸವದಲ್ಲಿ ದೇಶದ ಎಲ್ಲೆಡೆಯಿಂದ ಸುಮಾರು 7500 ಜನರು ಭಾಗವಹಿಸುವ ನಿರೀಕ್ಷೆ ಇದೆ. ಪ್ರಧಾನಿ ಮೋದಿ ಅವರು ಸ್ವಾಮಿ ವಿವೇಕಾನಂದರ ಜನ್ಮದಿನದಂದು ಜನವರಿ 12ರಂದು ಹುಬ್ಬಳ್ಳಿಯಲ್ಲಿ ಈ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ. 

ಕಾರ್ಯಕ್ರಮದಲ್ಲಿ ಕೇಂದ್ರ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಾರ್ಯದರ್ಶಿ ಮೀತಾ ಆರ್. ಲೋಚನ್, ರಾಜ್ಯದ ಕ್ರೀಡಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಸಿಎಂ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

share
Next Story
X