ಬೆಳಗಾವಿ: ಶ್ರೀರಾಮ ಸೇನೆ ಮುಖಂಡರ ಮೇಲೆ ಗುಂಡಿನ ದಾಳಿ
ಬೆಳಗಾವಿ: ಸಮೀಪದ ಹಿಂಡಲಗಾ ಗ್ರಾಮದಲ್ಲಿ ಶನಿವಾರ ರಾತ್ರಿ ಶ್ರೀರಾಮ ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಹಾಗೂ ಮುಖಂಡನ ಮೇಲೆ ಗುಂಡಿನ ದಾಳಿ ನಡೆದಿದೆ ಎಂದು ವರದಿಯಾಗಿದೆ.
ಶ್ರೀರಾಮ ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ರವಿ ಕೋಕಿತ್ಕರ್ ಹಾಗೂ ಹಿಂದೂ ರಾಷ್ಟ್ರ ಸೇನಾ ಮುಖಂಡ ಮನೋಜ್ ದೇಸೂರಕರ್ ಗುಂಡೇಟಿನಿಂದ ಗಾಯಗೊಂಡಿದ್ದಾರೆ. ಗಾಯಗೊಂಡ ಇಬ್ಬರನ್ನೂ ಕೆಎಲ್ಇ ಆಸ್ಪತ್ರೆಗೆ ದಾಖಲಿಸಲಾಗಿದೆ.
ರವಿ ಹಾಗೂ ಅವರ ಸಹವರ್ತಿ ಮನೋಜ್ ರಾತ್ರಿ 8ರ ಸುಮಾರಿಗೆ ಕಾರಿನಲ್ಲಿ ತೆರಳುತ್ತಿದ್ದಾಗ ಇಬ್ಬರು ದುಷ್ಕರ್ಮಿಗಳು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆನ್ನಲಾಗಿದೆ.
ಈ ಬಗ್ಗೆ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story