Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹಾವೇರಿ: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ...

ಹಾವೇರಿ: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪುಸ್ತಕ ಮಾರಾಟಗಾರರಿಗೆ ನಷ್ಟ

ತಲೆನೋವಾದ ‘ಡಿಜಿಟಲ್ ಬ್ಯಾಂಕಿಂಗ್’!

ಸಮೀರ್ ದಳಸನೂರುಸಮೀರ್ ದಳಸನೂರು8 Jan 2023 8:39 AM IST
share
ಹಾವೇರಿ: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪುಸ್ತಕ ಮಾರಾಟಗಾರರಿಗೆ ನಷ್ಟ
ತಲೆನೋವಾದ ‘ಡಿಜಿಟಲ್ ಬ್ಯಾಂಕಿಂಗ್’!

ಹಾವೇರಿ: ಒಂದೆಡೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪುಸ್ತಕಗಳ ಖರೀದಿಯ ಭರಾಟೆ ಜೋರಾಗಿದ್ದರೆ, ಮತ್ತೊಂದೆಡೆ ನಗದು ವಹಿವಾಟಿನ ಸಮಸ್ಯೆ ತಲೆದೋರಿದೆ. ಇದಕ್ಕೆ ಮುಖ್ಯ ಕಾರಣ ‘ಡಿಜಿಟಲ್ ಬ್ಯಾಂಕಿಂಗ್’ ವ್ಯವಸ್ಥೆಯೇ ಆಗಿರುವುದು ವಿಪರ್ಯಾಸ.

ಕ್ಷಣ ಕ್ಷಣಕ್ಕೂ ಮೊಬೈಲ್ ನೆಟ್‌ವರ್ಕ್ ದೊರೆಯದ ಕಾರಣ, 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪುಸ್ತಕ ಮಾರಾಟದಲ್ಲಿ ತೊಡಗಿರುವ ನೂರಾರು ಮಳಿಗೆ ಮಾಲಕರು, ಎರಡನೇ ದಿನ ಶನಿವಾರವೂ ನಷ್ಟ ಅನುಭವಿಸಿದರು.

ಏಲಕ್ಕಿ ನಗರ ಹಾವೇರಿಯಲ್ಲಿ ನಡೆಯುತ್ತಿ ರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪ್ರಮುಖ ಆಕರ್ಷಣೆಯಾಗಿರುವುದೇ ಪುಸ್ತಕಗಳ ಪ್ರದರ್ಶನ ಹಾಗೂ ಮಾರಾಟ. ಅದರಲ್ಲೂ 250ಕ್ಕೂ ಅಧಿಕ ಪುಸ್ತಕ ಮಳಿಗೆಗಳು ಇಲ್ಲಿವೆ. ಆದರೆ, ಆನ್‌ಲೈನ್ ಬ್ಯಾಂಕ್ ವ್ಯವಸ್ಥೆ, ಆ್ಯಪ್ ಆಧಾರಿತ ನಗದು ವಾಹಿವಾಟು ನಡೆಸಲು ಮೊಬೈಲ್ ನೆಟ್‌ವರ್ಕ್ ಇಲ್ಲದ ಕಾರಣ, ಹಲವು ಸಾಹಿತ್ಯಾಸಕ್ತರು ಪುಸ್ತಕಗಳ ಖರೀದಿಗೆ ಹಿಂದೇಟು ಹಾಕುತ್ತಿದ್ದಾರೆ.

ಮೊಬೈಲ್ ಹಿಡಿದು ಪರದಾಟ:

ಪುಸ್ತಕ ಮಳಿಗೆಯವರು ಹಣ ಪಾವತಿಗೆ ಗೂಗಲ್ ಪೇ, ಭೀಮ್, ಫೋನ್‌ಪೇ, ಪೇಟಿಎಂ ಕ್ಯುಆರ್ ಕೋಡ್‌ಗಳನ್ನು ತಂದಿದ್ದಾರೆ. ಬೆಳಗ್ಗೆ ತಮ್ಮ ಮಳಿಗೆಯಲ್ಲಿ ಈ ಕೋಡ್‌ಗಳನ್ನು ಪ್ರದರ್ಶಿಸಿದ್ದರು. ಆದರೆ ಶೇ.99ರಷ್ಟು ಆನ್‌ಲೈನ್ ಪೇಮೆಂಟ್ ವಿಫಲವಾಗುತ್ತಿದೆ. ಇಡೀ ದಿನ ಬೆರಳೆಣಿಕೆಯ ಮಂದಿ ಮಾತ್ರ ಆನ್‌ಲೈನ್ ಪಾವತಿ ಮಾಡಲು ಸಫಲರಾದರು. ಈ ವೇಳೆ ಮೊಬೈಲ್ ಹಿಡಿದು ಅನೇಕರು ಹೊರಗಡೆ ಪರದಾಟ ನಡೆಸಿದರು.

ಹಾವೇರಿ ನಗರದಿಂದ ಸುಮಾರು 3 ಕಿಲೋಮೀಟರ್ ದೂರದಲ್ಲಿ ಸಮ್ಮೇಳನವನ್ನು ಆಯೋಜಿಸಲಾಗಿದೆ. ಇಲ್ಲಿ ಮೊಬೈಲ್ ನೆಟ್‌ವರ್ಕ್ ಇದೆಯಾದರೂ ಸಾವಿರಾರು ಜನರು ಒಂದೇ ಕಡೆ ಕೂಡಿದ್ದರಿಂದ ದಿನಪೂರ್ತಿ ಮೊಬೈಲ್ ನೆಟ್‌ವರ್ಕ್ ಜಾಮ್ ಆಗಿದೆ. ಸಾಮಾನ್ಯ ಕರೆಗೂ ಪರದಾಡುವ ಸ್ಥಿತಿ ಇದೆ ಎಂದು ಕಲ್ಯಾಣ್ ಪುಸ್ತಕ ಮಳಿಗೆಯ ವಿನೋದ್ ತಮ್ಮ ಅಳಲು ತೋಡಿಕೊಂಡರು.

ಈ ಕುರಿತು ಪ್ರತಿಕ್ರಿಯಿಸಿದ ಸಿಂಧನೂರ ಸಾಹಿತ್ಯ ಮಳಿಗೆಯ ಸದಸ್ಯ ಅಲಿ, ಪುಸ್ತಕ ಖರೀದಿಸಲು ಆಗಮಿಸುವ ಅನೇಕರು ಆನ್‌ಲೈನ್ ಪೇಮೆಂಟ್ ಇದೆಯೇ ಎಂದು ಮೊದಲು ಕೇಳುತ್ತಾರೆ. ಅದರಲ್ಲೂ ಈಗಿನ ಯುವಜನರು ಯಾರೂ ಹೆಚ್ಚು ಹಣವನ್ನು ಜತೆಯಲ್ಲಿ ಒಯ್ಯುವುದಿಲ್ಲ. ಹೀಗಾಗಿ, ಪುಸ್ತಕ ಖರೀದಿಗೆ ಮುಂದಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಬರಹಗಾರ ರಾಜೀವ್ ಜೋಷಿ ಈ ಕುರಿತು ಪ್ರತಿಕ್ರಿಯಿಸಿ, ಹೊಸ ಪುಸ್ತಕಗಳು ಕಡಿಮೆ ದರಕ್ಕೆ ದೊರೆತ ಹಿನ್ನೆಲೆ 20 ಪುಸ್ತಕಗಳನ್ನು ಖರೀದಿ ಮಾಡಿದೆ. ಆದರೆ, ಆನ್‌ಲೈನ್ ಪೇಮೆಂಟ್ ಸಾಧ್ಯವಾಗಲೇ ಇಲ್ಲ. ಕೊನೆಗೆ ನನ್ನಲ್ಲಿದ್ದ ಅಷ್ಟೂ ಹಣ, ಸ್ನೇಹಿತನಲ್ಲಿದ್ದ ಹಣವನ್ನು ಸೇರಿಸಿದರೂ 1,500ರೂ. ದಾಟಲಿಲ್ಲ. ಕೊನೆಗೆ, ನಾಳೆ ಬರುತ್ತೇನೆ ಎಂದು ಹಾಗೆಯೇ ಇಟ್ಟು ಬಂದಿದ್ದೇನೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಹೀಗೆ, ಅನೇಕ ಪುಸ್ತಕ ಮಳಿಗೆ ಮಾಲಕರು, ಖರೀದಿದಾರರು ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದು, ಅಷ್ಟೂ ಮಳಿಗೆಗಳನ್ನು ಸೇರಿಸಿ ದಿನಪೂರ್ತಿ ಲಕ್ಷಾಂತರ ರೂ. ನಷ್ಟವಾಗಿದೆ ಎಂದೇ ಹೇಳಿದರು. ಕೋಟ್ಯಂತರ ರೂಪಾಯಿ ಹಣ ಖರ್ಚು ಮಾಡಿ ಸಮ್ಮೇಳನ ಮಾಡುವಾಗ, ತಂತ್ರಜ್ಞಾನಕ್ಕೆ ತಕ್ಕಂತೆ ಸಂಚಾರಿ ನೆಟ್‌ವರ್ಕ್‌ಗಳು ಅಥವಾ ಇನ್ನಾವುದೇ ವ್ಯವಸ್ಥೆ ಮೂಲಕ ಆನ್‌ಲೈನ್ ಪಾವತಿಗೆ ವ್ಯವಸ್ಥೆ ಕಲ್ಪಿಸಬೇಕಾಗಿತ್ತು ಎಂದು ನುಡಿದರು.

share
ಸಮೀರ್ ದಳಸನೂರು
ಸಮೀರ್ ದಳಸನೂರು
Next Story
X