Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅತ್ಯಾಚಾರ ಪ್ರಕರಣದ ಆರೋಪಿಯ ತಾಯಿಗೆ...

ಅತ್ಯಾಚಾರ ಪ್ರಕರಣದ ಆರೋಪಿಯ ತಾಯಿಗೆ ಗುಂಡಿಕ್ಕಿದ ಅಪ್ರಾಪ್ತ ವಯಸ್ಸಿನ ಸಂತ್ರಸ್ತೆ!

8 Jan 2023 9:41 AM IST
share
ಅತ್ಯಾಚಾರ ಪ್ರಕರಣದ ಆರೋಪಿಯ ತಾಯಿಗೆ ಗುಂಡಿಕ್ಕಿದ ಅಪ್ರಾಪ್ತ ವಯಸ್ಸಿನ ಸಂತ್ರಸ್ತೆ!

ಹೊಸದಿಲ್ಲಿ: ಹದಿನಾರು ವರ್ಷ ವಯಸ್ಸಿನ ಅತ್ಯಾಚಾರ ಸಂತ್ರಸ್ತೆಯೊಬ್ಬಳು, ಅತ್ಯಾಚಾರಿಯ 50 ವರ್ಷ ವಯಸ್ಸಿನ ತಾಯಿಗೆ ಗುಂಡು ಹೊಡೆದು ಗಾಯಗೊಳಿಸಿದ ಪ್ರಕರಣ ಈಶಾನ್ಯ ದಿಲ್ಲಿಯ ಭಜನಪುರದಲ್ಲಿ ಶನಿವಾರ ನಡೆದಿದ್ದು, ಅಪ್ರಾಪ್ತ ವಯಸ್ಸಿನ ಯುವತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ಅಪ್ರಾಪ್ತ ವಯಸ್ಸಿನ ಯುವತಿ 2021ರಲ್ಲಿ, ಮಹಿಳೆಯ 25 ವರ್ಷ ವಯಸ್ಸಿನ ಮಗ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾಗಿ ಆರೋಪಿಸಿದ್ದಳು. ಆರೋಪಿ ಯುವಕ ಪ್ರಸ್ತುತ ಜೈಲಿನಲ್ಲಿದ್ದಾನೆ. ನಾಡಪಿಸ್ತೂಲಿನಿಂದ ಮಹಿಳೆಯ ಮೇಲೆ ಗುಂಡು ಹಾರಿಸಿದ್ದರಿಂದ ಗುಂಡೇಟು ತಗುಲಿರುವ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಭಜನಪುರದ ಘೋಂಡಾ ಪ್ರದೇಶದಲ್ಲಿ ಗುಂಡು ಹಾರಿಸಿದ ಬಗ್ಗೆ ಪೊಲೀಸ್ ನಿಯಂತ್ರಣ ಕಚೇರಿಗೆ ಸಂಜೆ 5.30ರ ವೇಳೆಗೆ ಕರೆ ಬಂದಿತ್ತು. ಪೊಲೀಸರು ಸ್ಥಳಕ್ಕೆ ಧಾವಿಸಿದಾಗ, ಮಹಿಳೆಯ ಮೇಲೆ ಅಪ್ರಾಪ್ತ ವಯಸ್ಸಿನ ಪರಿಚಿತ ಯುವತಿ ಗುಂಡು ಹಾರಿಸಿದ್ದು ತಿಳಿದು ಬಂತು. ಗುಂಡೇಟು ತಗುಲಿದ ಮಹಿಳೆಯನ್ನು ಸ್ಥಳೀಯರು ಜಗ್ ಪ್ರವೇಶ್ ಚಂದ್ರ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ಡಿಸಿಪಿ ಸಂಜಯ್ ಕುಮಾರ್ ಸೈನ್ ವಿವರ ನೀಡಿದ್ದಾರೆ.

ಮಹಿಳೆ ತಾನು ವಾಸವಿದ್ದ ಮನೆಯ ನೆಲಮಹಡಿಯಲ್ಲಿ ಕಿರಾಣಿ ಅಂಗಡಿ ನಡೆಸುತ್ತಿದ್ದರು. ಯುವತಿ ಅಂಗಡಿಗೆ ಬಂದು ಗುಂಡು ಹೊಡೆದು ಪರಾರಿಯಾದಳು.  ಯುವತಿಯನ್ನು ವಶಕ್ಕೆ ಪಡೆದು ಕೃತ್ಯಕ್ಕೆ ಬಳಸಿದ ನಾಡಪಿಸ್ತೂಲು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗ | ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್: ಯುವ ಉದ್ಯಮಿ ಮೃತ್ಯು

share
Next Story
X