87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮಂಡ್ಯದಲ್ಲಿ

ಹಾವೇರಿ, ಜ.8: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಡ್ಯ ಜಿಲ್ಲೆಯಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ರಾಜ್ಯ ಘಟಕದ ಅಧ್ಯಕ್ಷ ಮಹೇಶ ಜೋಶಿ ಪ್ರಕಟಿಸಿದ್ದಾರೆ.
ಇಂದು ಬೆಳಗ್ಗೆ ನಡೆದ ಕನ್ನಡ ಸಾಹಿತ್ಯ ಪರಿಷತ್ ನ ಕಾರ್ಯಕಾರಿ ಸಮಿತಿ ಸಭೆಯ ಬಳಿಕ ಅವರು ಘೋಷಿಸಿದರು.
ತಮ್ಮ ಜಿಲ್ಲೆಯಲ್ಲಿ ಮುಂದಿನ ಸಮ್ಮೇಳನ ಸಂಘಟಿಸಬೇಕೆಂದು ಒಂಭತ್ತು ಜಿಲ್ಲೆಯವರು ಹಕ್ಕು ಮಂಡಿಸಿದ್ದರು. ಈ ಪೈಕಿ ಹೆಚ್ಚಿನವರು ಮಂಡ್ಯ ಜಿಲ್ಲೆಯಲ್ಲೇ ಮಾಡಬೇಕೆಂದು ಹೇಳಿದ್ದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದವರು ತಿಳಿಸಿದರು.
Next Story





