ಹಾಲಿ ಚಾಂಪಿಯನ್ ಕಲ್ಲಿಕೋಟೆ ವಿವಿಗೆ ಸೋಲು: ಕುರುಕ್ಷೇತ್ರ ವಿವಿ ಫೈನಲ್‌ಗೆ
ಉಡುಪಿ: ಅಖಿಲ ಭಾರತ ಅಂತರ್ ವಿವಿ ಮಟ್ಟದ ವಾಲಿಬಾಲ್ ಚಾಂಪಿಯನ್ ಶಿಪ್

ಉಡುಪಿ, ಜ.8: ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನಲ್ಲಿ ನಡೆಯುತ್ತಿರುವ ಅಖಿಲ ಭಾರತ ಅಂತರ ವಿಶ್ವವಿದ್ಯಾನಿಲಯ ಮಟ್ಟದ ಪುರುಷರ ವಾಲಿಬಾಲ್ ಚಾಂಪಿಯನ್ ಶಿಪ್‌ನಲ್ಲಿ ಹಾಲಿ ರಾಷ್ಟ್ರೀಯ ವಿವಿ ಚಾಂಪಿಯನ್ ಕೇರಳದ ಕಲ್ಲಿಕೋಟೆ ವಿಶ್ವವಿದ್ಯಾನಿಲಯ ತಂಡ ಈ ಬಾರಿ ಪ್ರಶಸ್ತಿ ಉಳಿಸಿಕೊಳ್ಳುವಲ್ಲಿ ವಿಫಲವಾಗಿದೆ.
ಇಂದು ಬೆಳಗ್ಗೆ ನಡೆದ ಮೊದಲ ಸೆಮಿಫೈನಲ್‌ನಲ್ಲಿ ಕಳೆದ ಬಾರಿಯ ರನ್ನರ್ ಅಪ್ ತಂಡವಾದ ಹರ್ಯಾಣದ ಕುರುಕ್ಷೇತ್ರ ವಿವಿ ತಂಡವು ಕಲ್ಲಿಕೋಟೆ ವಿವಿಯನ್ನು 3-2 ಸೆಟ್‌ಗಳ ಅಂತರದಿಂದ ರೋಮಾಂಚಕಾರಿಯಾಗಿ ಪರಾಭವಗೊಳಿಸಿತು.
ಈ ಮೂಲಕ ಕಳೆದ ಬಾರಿ ಫೈನಲ್ ನಲ್ಲಿ ಅನುಭವಿಸಿದ ಸೋಲಿಗೆ ಮುಯ್ಯಿ ತೀರಿಸಿಕೊಂಡಿತು.
ಕುರುಕ್ಷೇತ್ರ ವಿವಿ ಪಂದ್ಯವನ್ನು 25-22, 25-27 25-15, 18-24, 15-7ರ ಅಂತರದಿಂದ ಗೆದ್ದುಕೊಂಡಿದೆ.
ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಪೂರ್ಣಪ್ರಜ್ಞ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರಗಳ ಜಂಟಿ ಆಶ್ರಯದಲ್ಲಿ ನಡೆಯುತ್ತಿರುವ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಪುರುಷರ ವಾಲಿಬಾಲ್ ಚಾಂಪಿಯನ್‌ಶಿಪ್ ಇಂದು ಸಂಜೆ ಸಮಾಪನಗೊಳ್ಳಲಿದೆ.