ಉತ್ತರಾಖಂಡದ ಜೋಶಿಮಠ ಪಟ್ಟಣ ಕುಸಿತ ಪ್ರಕರಣ: ಪ್ರಧಾನಮಂತ್ರಿ ಕಾರ್ಯಾಲಯದಲ್ಲಿ ಪ್ರಮುಖ ಸಭೆ

ಹೊಸದಿಲ್ಲಿ: ಉತ್ತರಾಖಂಡದ ಜೋಶಿಮಠ ಪಟ್ಟಣದ ನೂರಾರು ಕಟ್ಟಡಗಳು ಬಿರುಕು ಬಿಟ್ಟಿದ್ದು, ಯಾತ್ರಾರ್ಥಿಗಳು ಹಾಗೂ ಪ್ರವಾಸಿಗರಿಂದ ಜನಪ್ರಿಯವಾಗಿರುವ ಪ್ರದೇಶದಲ್ಲಿ ನೂರಾರು ಜನರನ್ನು ಅವರ ಮನೆಗಳಿಂದ ಸ್ಥಳಾಂತರಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಕಚೇರಿ ಉನ್ನತ ಮಟ್ಟದ ಸಭೆ ಕರೆದಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಪ್ರಧಾನ ಕಾರ್ಯದರ್ಶಿ ಪಿ.ಕೆ. ಮಿಶ್ರಾ ಅವರು ಸಂಪುಟ ಕಾರ್ಯದರ್ಶಿ, ಕೇಂದ್ರ ಸರಕಾರದ ಇತರ ಹಿರಿಯ ಅಧಿಕಾರಿಗಳು ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸದಸ್ಯರೊಂದಿಗೆ ಪರಿಶೀಲನಾ ಸಭೆ ನಡೆಸಲಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ಉತ್ತರಾಖಂಡದ ಹಿರಿಯ ಅಧಿಕಾರಿಗಳಲ್ಲದೆ ಜೋಶಿಮಠದ ಜಿಲ್ಲಾ ಅಧಿಕಾರಿಗಳು ವೀಡಿಯೊ ಕಾನ್ಫರೆನ್ಸ್ ಮೂಲಕ ಪರಿಶೀಲನಾ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
Next Story





