Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಜಿಲ್ಲೆಯಲ್ಲಿ ಅರಣ್ಯ, ವನ್ಯಜೀವಿ ಸಂಪತ್ತು...

ಜಿಲ್ಲೆಯಲ್ಲಿ ಅರಣ್ಯ, ವನ್ಯಜೀವಿ ಸಂಪತ್ತು ರಕ್ಷಣೆಗೆ ಉತ್ತಮ ಸಹಕಾರ: ಕುದುರೆಮುಖ ವನ್ಯಜೀವಿ ಡಿಎಫ್‌ಓ ಗಣಪತಿ ಕೆ

8 Jan 2023 6:57 PM IST
share
ಜಿಲ್ಲೆಯಲ್ಲಿ ಅರಣ್ಯ, ವನ್ಯಜೀವಿ ಸಂಪತ್ತು ರಕ್ಷಣೆಗೆ ಉತ್ತಮ ಸಹಕಾರ: ಕುದುರೆಮುಖ ವನ್ಯಜೀವಿ ಡಿಎಫ್‌ಓ ಗಣಪತಿ ಕೆ

ಉಡುಪಿ: ಉಡುಪಿ ಮತ್ತು ದ.ಕನ್ನಡ ಜಿಲ್ಲೆಯಲ್ಲಿಅರಣ್ಯ ಹಾಗೂ ವನ್ಯಜೀವಿ ಸಂಪತ್ತಿನ ರಕ್ಷಣೆಯಲ್ಲಿ ಸಾರ್ವಜನಿಕರು ಅರಣ್ಯ ಇಲಾಖೆಗೆ ಅತ್ಯುತ್ತಮ ರೀತಿಯಲ್ಲಿ  ಸಹಕಾರ ನೀಡುತಿದ್ದಾರೆ. ಇದರಿಂದ ಇಲಾಖೆ ದಕ್ಷತೆಯಿಂದ ಉತ್ತಮವಾಗಿ ಕಾರ್ಯ ನಿರ್ವಹಿಸಲು ಸಾಧ್ಯವಾಗುತ್ತಿದೆ ಎಂದು ಕಾರ್ಕಳದ ಕುದುರೆಮುಖ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಗಣಪತಿ ಕೆ. ತಿಳಿಸಿದ್ದಾರೆ.  

ನಗರದ ಕಿದಿಯೂರು ಹೋಟೆಲ್‌ನ ರೂಫ್‌ಟಾಪ್ ಸಭಾಂಗಣದಲ್ಲಿ ರವಿವಾರ ಕರ್ನಾಟಕ ರಾಜ್ಯ ಉಪ ವಲಯ ಅರಣ್ಯಾಧಿಕಾರಿಗಳ ಸಂಘ ಉಡುಪಿ ಜಿಲ್ಲೆ ಇವರ ವತಿಯಿಂದ ನಡೆದ 23ನೇ ವಾರ್ಷಿಕ ಸಮಾರಂಭ, ನೂತನ ವರ್ಷದ ಡೈರಿ ಬಿಡುಗಡೆ, ಸಾರ್ವಜನಿಕ ಸೇವೆ ಸಲ್ಲಿಸಿದವರಿಗೆ, ರಕ್ತದಾನಿಗಳಿಗೆ ಗೌರವ ಸಮರ್ಪಣೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅವರು ಮಾತನಾಡುತಿದ್ದರು. 

ಇಂದು ಅರಣ್ಯಾಧಿಕಾರಿಗಳ ಕಾರ್ಯವೈಖರಿ ಬದಲಾಗಿದೆ. ಅರಣ್ಯ ಮತ್ತು ವನ್ಯಜೀವಿ ಸಂಪತ್ತಿನ ರಕ್ಷಣಾ ಕಾರ್ಯ ಕಷ್ಟಕರವೂ, ಒತ್ತಡದಾಯಕವೂ ಆಗಿದೆ. ಆದರೂ ಸಹ ಸಾರ್ವಜನಿಕರ ಸಹಕಾರದಿಂದ ಉಡುಪಿ ಮತ್ತು ದ.ಕನ್ನಡ ಜಿಲ್ಲೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಇವುಗಳ ರಕ್ಷಣಾ ಕಾರ್ಯವನ್ನು ಉತ್ತಮವಾಗಿ ನಿರ್ವಹಿಸುತ್ತಿದ್ದಾರೆ ಎಂದರು.

ಇಂದು ಜನವಸತಿ ಪ್ರದೇಶಗಳಲ್ಲಿ ಚಿರತೆಯಂತಹ ವನ್ಯಜೀವಿಗಳು ಹೆಚ್ಚು ಸಂಖ್ಯೆಯಲ್ಲಿ ಕಂಡುಬರುತ್ತಿದೆ. ಹೆಬ್ರಿ ಮತ್ತು ಕಾರ್ಕಳ ವಲಯದಲ್ಲಿ ಕಳೆದೊಂದು ವರ್ಷದಲ್ಲಿ ಹತ್ತಕ್ಕೂ ಹೆಚ್ಚು ಚಿರತನೆಗಳನ್ನು ಹಿಡಿಯಲಾಗಿದೆ. ಆದರೂ ಸಹ ಅವುಗಳು ಅಪಾಯಕಾರಿಯಾಗಿ ಸಾರ್ವಜನಿಕರಿಗೆ ತೊಂದರೆ ನೀಡುವ ಮುನ್ನವೇ, ಇಲಾಖೆಯ ಸಿಬ್ಬಂದಿಗಳು ಅಪಾಯವನ್ನೂ ಲೆಕ್ಕಿಸದೇ ತ್ವರಿತಗತಿಯಲ್ಲಿ ಕಾರ್ಯಚರಣೆ ನಡೆಸಿ, ತಕ್ಷಣದಲ್ಲಿ ಅವುಗಳನ್ನು ಸೆರೆಡಿಯುವ ಮೂಲಕ ವನ್ಯಜೀವಿ ಮತ್ತು ಮಾನವ ಸಂಘರ್ಷಗಳು ನಡೆಯುದಂತೆ ಕ್ರಮ ಕೈಗೊಂಡಿದ್ದಾರೆ. ಇದಕ್ಕೆ ಸಾರ್ವಜನಿಕರ ಬೆಂಬಲವೂ  ಉತ್ತಮವಾಗಿದೆ ಎಂದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಮಂಗಳೂರು ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ ಎಸ್. ನೆಟಾಲ್ಕರ್ ಮಾತನಾಡಿ, ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು  ಸಿಬ್ಬಂದಿಗಳು ತಮ್ಮ ಬಿಡುವಿಲ್ಲದ ಕರ್ತವ್ಯದ ನಡುವೆಯೂ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಳ್ಳುವುದು ಅತ್ಯಂತ ಶ್ಲಾಘನೀಯ. ಅರಣ್ಯ ಇಲಾಖೆಯ ಸಿಬ್ಬಂದಿಗಳು ಸಾರ್ವಜನಿಕರಲ್ಲಿ ಅರಣ್ಯದ ಮಹತ್ವ, ಅದರ ಉಳಿವು, ಬೆಳವಣಿಗೆ ಮತ್ತು ರಕ್ಷಣೆಯ ಬಗ್ಗೆ ಅರಿವು ಮೂಡಿಸಿ, ಅವರ ಸಹಭಾಗಿತ್ವದಲ್ಲಿ ಅರಣ್ಯವನ್ನು ಉಳಿಸಿ ಬೆಳಸುವ ಕಾರ್ಯದಲ್ಲಿ ತೊಡಗಬೇಕು. ಜಿಲ್ಲೆಯಲ್ಲಿ ಉಪ ವಲಯ ಅರಣ್ಯಾಧಿಕಾರಿಗಳ ಸಂಘಕ್ಕೆ ಅಗತ್ಯವಿರುವ ನೂತನ ಸಭಾಭವನ ನಿರ್ಮಿಸುವ ಕುರಿತಂತೆ ಇಲಾಖೆುಂದ ಅಗತ್ಯವಿರುವ ಎಲ್ಲಾ ನೆರವು ನೀಡುವ ಮೂಲಕ ಶೀಘ್ರದಲ್ಲಿ ಅದು ಕಾರ್ಯರೂಪಕ್ಕೆ ಬರಲು ಪ್ರಯತ್ನಿಸಲಾಗುವುದು ಎಂದರು.

ರಾಜ್ಯ ಉಪ ವಲಯ ಅರಣ್ಯಾಧಿಕಾರಿಗಳ ಸಂಘದ  ಉಡುಪಿ ಜಿಲ್ಲಾ  ಗೌರವಾಧ್ಯಕ್ಷ  ಪ್ರಕಾಶ್ಚಂದ್ರ ಪ್ರಾಸ್ತಾವಿಕವಾಗಿ ಮಾತನಾಡಿ, ಸಂಘವು 23 ವರ್ಷಗಳಿಂದ ಹಲವು ಸಮಾಜಮುಖಿ ಕಾರ್ಯಗಳನ್ನು ನಡೆಸುತ್ತಿದ್ದು, ಗ್ರಾಮೀಣ ಸಾಧಕರಿಗೆ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಹಾಗೂ ರಕ್ತದಾನಿಗಳನ್ನು ಸನ್ಮಾನಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದೆ ಎಂದರು. 

ರಾಜ್ಯ ಉಪ ವಲಯ ಅರಣ್ಯಾಧಿಕಾರಿಗಳ ಸಂಘದ ಜಿಲ್ಲಾ ಅಧ್ಯಕ್ಷ ನಾಗೇಶ ಬಿಲ್ಲವ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ಕುಂದಾಪುರ ಪ್ರಾದೇಶಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಉದಯ ಎಂ ನಾಯಕ್, ಮಂಗಳೂರು ಅರಣ್ಯ ಸಂಚಾರಿ ದಳದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸತೀಶ್ ಬಾಬಾ ರೈ, ಲಯನ್ಸ್ ಜಿಲ್ಲಾ ಗವರ್ನರ್ ವಿ.ಜಿ. ಶೆಟ್ಟಿ, ಮೂಡಬಿದ್ರೆ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸತೀಶ್ ಎನ್. ಉಡುಪಿ ಅರಣ್ಯ ಸಂಚಾರಿ ದಳದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪಿ. ಶ್ರೀಧರ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗೋಪಾಲ್, ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಕೆ.ದಿನಕರ ಶೆಟ್ಟಿ ಅಂಪಾರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹರೀಶ್ ಶೆಟ್ಟಿ, ನಿವೃತ್ತ ಅರಣ್ಯಾಧಿಕಾರಿ ಯೋಗೇಶ್ವರ್ ಮತ್ತಿತರರು ಉಪಸ್ಥಿತರಿದ್ದರು.

ಸಂಘದ ಪ್ರಧಾನ ಕಾರ್ಯದರ್ಶಿ ವೀರಣ್ಣ ಸ್ವಾಗತಿಸಿ, ಪ್ರಶಾಂತ್  ಶೆಟ್ಟಿ ಹಾವಂಜೆ ಕಾರ್ಯಕ್ರಮ ನಿರೂಪಿಸಿದರು.

ಕಾರ್ಯಕ್ರಮದಲ್ಲಿ ನೂತನ ವರ್ಷದ ಡೈರಿ ಬಿಡುಗಡೆಗೊಳಿಸಲಾಯಿತು.  ಸಾರ್ವಜನಿಕ ಸೇವೆ ಸಲ್ಲಿಸಿದವರಿಗೆ, ರಕ್ತದಾನಿಗಳಿಗೆ ಈ ಕಾರ್ಯಕ್ರಮದಲ್ಲಿ ಗೌರವ ಸಮರ್ಪಣೆ ಹಾಗೂ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು.

share
Next Story
X