Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಿಜವಾಗಿಯೂ ಬಿಜೆಪಿ ಸಾಮಾಜಿಕ ನ್ಯಾಯದ...

ನಿಜವಾಗಿಯೂ ಬಿಜೆಪಿ ಸಾಮಾಜಿಕ ನ್ಯಾಯದ ಪರವಾಗಿದ್ದರೆ ಮೀಸಲಾತಿಯನ್ನು ಪ್ರಶ್ನೆ ಮಾಡುವುದು ಯಾಕೆ?: ಸಿದ್ದರಾಮಯ್ಯ

8 Jan 2023 7:15 PM IST
share
ನಿಜವಾಗಿಯೂ ಬಿಜೆಪಿ ಸಾಮಾಜಿಕ ನ್ಯಾಯದ ಪರವಾಗಿದ್ದರೆ ಮೀಸಲಾತಿಯನ್ನು ಪ್ರಶ್ನೆ ಮಾಡುವುದು ಯಾಕೆ?: ಸಿದ್ದರಾಮಯ್ಯ

ಚಿತ್ರದುರ್ಗ, ಜ.8: 'ಬಿಜೆಪಿಯವರಿಗೆ ಸಂವಿಧಾನದ ಬಗ್ಗೆ ಗೌರವ, ಬದ್ಧತೆ ಇಲ್ಲ. ಇದಕ್ಕೆ ಅವರ ನಡವಳಿಕೆಗಳು ಸಾಕ್ಷಿ. ನರೇಂದ್ರ ಮೋದಿ ಅವರ ಸರ್ಕಾರದಲ್ಲಿ ಸಚಿವರಾಗಿದ್ದ ಅನಂತ ಕುಮಾರ್‌ ಹೆಗ್ಡೆ ಅವರು ನಾವು ಅಧಿಕಾರಕ್ಕೆ ಬಂದಿರುವುದೇ ಸಂವಿಧಾನವನ್ನು ಬದಲಾವಣೆ ಮಾಡಲು ಎಂದು ಹೇಳಿದ್ದರು. ಬಿಜೆಪಿಯ ಅಂದಿನ ಅಧ್ಯಕ್ಷರಾಗಿದ್ದ ಅಮಿತ್‌ ಶಾ ಅವರಾಗಲೀ, ಪ್ರಧಾನಿ ಮೋದಿ ಅವರಾಗಲೀ ಅನಂತಕುಮಾರ್‌ ಹೆಗ್ಡೆ ಅವರ ಮೇಲೆ ಯಾವ ಕ್ರಮ ಕೈಗೊಂಡಿಲ್ಲ. ಬಿಜೆಪಿ ಅವರು ದಲಿತರು, ಶೋಷಿತರು, ಬಡವರು, ರೈತರ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಾರೆ' ಎಂದು ವಿಧಾನಸಭೆ ವರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ. 

ಚಿತ್ರದುರ್ಗದಲ್ಲಿ ಕಾಂಗ್ರೆಸ್‌ ಪಕ್ಷ ಆಯೋಜಿಸಿದ್ದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಐಕ್ಯತಾ ಸಮಾವೇಶದಲ್ಲಿ ಪಾಲ್ಗೊಂಡು ಅವರ ಮಾತನಾಡುತ್ತಿದ್ದರು.

'ನಿಜವಾಗಿಯೂ ಬಿಜೆಪಿ ಸಾಮಾಜಿಕ ನ್ಯಾಯದ ಪರವಾಗಿ ಇದ್ದರೆ ಮೀಸಲಾತಿಯನ್ನು ಪ್ರಶ್ನೆ ಮಾಡುವುದು ಯಾಕೆ? ಇನ್ನು ಎಷ್ಟು ವರ್ಷ ಮೀಸಲಾತಿ ಬೇಕು ಎಂಬ ಬಗ್ಗೆ ತಗಾದೆ ತೆಗೆಯುತ್ತಾರೆ. ಆದರೆ ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರೇ ಹೇಳಿರುವಂತೆ ಮೀಸಲಾತಿ ಭಿಕ್ಷೆಯಲ್ಲ, ಶೋಷಿತ ಜನರ ಹಕ್ಕು. ಎಲ್ಲಿಯವರೆಗೆ ಜಾತಿ ವ್ಯವಸ್ಥೆ ಇರುತ್ತದೆ ಅಲ್ಲಿಯವರೆಗೆ ಮೀಸಲಾತಿ ಇರಬೇಕು ಎಂದು ಅವರು ಹೇಳಿದ್ದಾರೆ. ಮೇಲ್ಜಾತಿಯಲ್ಲಿ ಆರ್ಥಿಕವಾಗಿ ದುರ್ಬಲರಾಗಿರುವವರಿಗೆ 10% ಮೀಸಲಾತಿ ನೀಡಿದ್ದಾರೆ. ಸಂವಿಧಾನದಲ್ಲಿ ಇದಕ್ಕೆ ಅವಕಾಶ ಇಲ್ಲ' ಎಂದು ಆಕ್ಷೇಪ ವ್ಯಕ್ತಪಡಿಸಿದರು.

'ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದವರಿಗೆ ಮಾತ್ರ ಮೀಸಲಾತಿ ನೀಡಬೇಕು ಎಂದು 14, 15 ಮತ್ತು 16ನೇ ಆರ್ಟಿಕಲ್‌ ಗಳು ಹೇಳಿವೆ. ಕೇಂದ್ರ ಸರ್ಕಾರ ಮೇಲ್ಜಾತಿಯ ಬಡವರಿಗೆ 10% ಮೀಸಲಾತಿಯನ್ನು ನೀಡಿ ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ ಒಂದೇ ದಿನ ತರಾತುರಿಯಲ್ಲಿ ಬಿಲ್ ಪಾಸ್‌ ಮಾಡಿತು'. 

'ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ವರ್ಗದ ಮೀಸಲಾತಿ ಹೆಚ್ಚಳ ಸಂಬಂಧ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್‌ ದಾಸ್‌ ಅವರ ಸಮಿತಿಯನ್ನು ರಚನೆ ಮಾಡಿದ್ದು ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಸಚಿವರಾಗಿದ್ದ ಪ್ರಿಯಾಂಕ್‌ ಖರ್ಗೆ ಅವರು. ಈ ಸಮಿತಿ 2020ರ ಫೆಬ್ರವರಿ ತಿಂಗಳಿನಲ್ಲಿ ವರದಿಯನ್ನು ನೀಡಿತ್ತು. ಎರಡು ವರ್ಷ ಹತ್ತು ತಿಂಗಳು ವರದಿ ಇಟ್ಟುಕೊಂಡು ಬಿಜೆಪಿ ನಿದ್ದೆ ಮಾಡುತ್ತಿತ್ತು. ವರದಿ ಜಾರಿಗೆ ಮತ್ತೆ ಹೋರಾಟ ಮಾಡಿದವರು ಕಾಂಗ್ರೆಸ್‌ ನ ಎಸ್‌,ಸಿ ಮತ್ತು ಎಸ್,ಟಿ ಜನಾಂಗಕ್ಕೆ ಸೇರಿದ ಶಾಸಕರುಗಳು. ಇದಕ್ಕೆ ಬಿಜೆಪಿಯಿಂದ ಆಯ್ಕೆಯಾಗಿರುವ ಒಬ್ಬನೇ ಒಬ್ಬ ಎಸ್‌,ಸಿ ಮತ್ತು ಎಸ್‌,ಟಿ ಸಮುದಾಯದ ಶಾಸಕ ಬೆಂಬಲ ನೀಡಲಿಲ್ಲ. ನಮ್ಮವರು ಹೋರಾಟ ಮಾಡಿದ ಕಾರಣ ಮತ್ತು ಚುನಾವಣೆ ಹತ್ತಿರ ಬಂದಿರುವುದರಿಂದ ಬಿಜೆಪಿ ಬೇರೆ ದಾರಿ ಇಲ್ಲದೆ ಎಸ್‌,ಸಿ ಮೀಸಲಾತಿಯನ್ನು 15 ರಿಂದ 17% ಮತ್ತು ಎಸ್‌,ಟಿ ಮೀಸಲಾತಿಯನ್ನು 3 ರಿಂದ 7% ಗೆ ಹೆಚ್ಚಳ ಮಾಡಿದ್ದೇವೆ ಎಂದು ಹೇಳುತ್ತಿದ್ದಾರೆ. ಇದು ಆಗಲು ನಾಗಮೋಹನ್‌ ದಾಸ್‌ ಅವರ ಸಮಿತಿಯ ಶಿಫಾರಸು ಕಾರಣ' ಎಂದು ಹೇಳಿದರು.

'ರಾಜ್ಯ ಸರ್ಕಾರ ಸರ್ವಪಕ್ಷ ಸಭೆ ನಡೆಸಿ ಒಂದು ಸುಗ್ರೀವಾಜ್ಞೆಯನ್ನು ಜಾರಿಗೆ ತಂದಿದೆ. ರಾಜ್ಯದಲ್ಲಿ ಎಸ್‌,ಸಿ ಮತ್ತು ಎಸ್‌,ಟಿ ಮೀಸಲಾತಿ ಹೆಚ್ಚಳ ಆಗಬೇಕಾದರೆ ಸಂವಿಧಾನದ ತಿದ್ದುಪಡಿ ಆಗಲೇಬೇಕು. ಈಗ ಮೀಸಲಾತಿ ಹೆಚ್ಚು ಮಾಡಿರುವುದರಿಂದ ಒಟ್ಟು ಮೀಸಲಾತಿ ಪ್ರಮಾಣ 50% ಮೀರುತ್ತದೆ, ಇದರಿಂದ ಸುಪ್ರೀಂ ಕೋರ್ಟ್‌ ನ ತೀರ್ಪಿನ ಉಲ್ಲಂಘನೆಯಾಗುತ್ತದೆ, ಇದಕ್ಕೆ ಸಂವಿಧಾನಾತ್ಮಕ ರಕ್ಷಣೆ ಸಿಗಬೇಕಾದರೆ ಸಂವಿಧಾನದ 9ನೇ ಶೆಡ್ಯೂಲ್‌ ಗೆ ಸೇರಿಸಬೇಕು' ಎಂದು ಆಗ್ರಹಿಸಿದರು.

'ಇಂದಿನ ಸಭೆಯಲ್ಲಿ ನಮ್ಮ ಪಕ್ಷದ ನಾಯಕರಾದ ಪರಮೇಶ್ವರ ಅವರು 10 ಅಂಶಗಳ ನಿರ್ಣಯಗಳನ್ನು ನಿಮ್ಮೆಲ್ಲರ ಮುಂದಿಟ್ಟಿದ್ದಾರೆ. ಅದಕ್ಕೆ ತಾವು ಕೂಡ ಬೆಂಬಲ ಸೂಚಿಸಿದ್ದೀರಿ. ಈ ನಿರ್ಣಯಗಳ ಪ್ರಕಾರ ಜನವರಿ 31ರ ಒಳಗೆ ಕೇಂದ್ರ ಸರ್ಕಾರ ಸಂವಿಧಾನ ತಿದ್ದುಪಡಿ ಮಾಡಿ, 9ನೇ ಶೆಡ್ಯೂಲ್‌ ಗೆ ಸೇರಿಸುವ ಕೆಲಸ ಮಾಡಬೇಕು ಇಲ್ಲದಿದ್ದರೆ ಕಾಂಗ್ರೆಸ್‌ ಪಕ್ಷ ಬೀದಿಗಿಳಿದು ಪರಿಶಿಷ್ಟ ಜಾತಿ ಮತ್ತು ವರ್ಗದ ಜನರ ಪರವಾಗಿ ಹೋರಾಟ ಮಾಡಲಿದೆ' ಎಂದು ಭತವಸೆ ನೀಡಿದರು. 

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಐಕ್ಯತಾ ಸಮಾವೇಶವನ್ನು ಒಂದೇ ವೇದಿಕೆಯಲ್ಲಿ ಆಯೋಜಿಸಿವುದು ಪ್ರಶಂಸನೀಯ ಮತ್ತು ಸ್ವಾಗತಾರ್ಹವಾದುದ್ದು. ಅವಕಾಶ ವಂಚಿತ, ಸಾಮಾಜಿಕ ನ್ಯಾಯದಿಂದ ವಂಚಿತವಾದ ಶೋಷಿತ ಜನರು ಇಂದು ಒಗ್ಗೂಡಿ ಹೋರಾಟವನ್ನು ಮಾಡಬೇಕಾದ ಅನಿವಾರ್ಯತೆ ಇದೆ. ಕಾಂಗ್ರೆಸ್‌ ಪಕ್ಷ ಸಮಾಜದ ಎಲ್ಲಾ ಜನರಿಗೂ ನ್ಯಾಯವನ್ನು ಕೊಡಬೇಕು ಎಂಬ ವಿಷಯದಲ್ಲಿ ಬದ್ಧತೆ ಹೊಂದಿರುವ ಪಕ್ಷ. ಬಿಜೆಪಿಯವರು ಸಾಮಾಜಿಕ ನ್ಯಾಯ, ಮೀಸಲಾತಿಯಲ್ಲಿ ನಂಬಿಕೆ ಮತ್ತು ಬದ್ಧತೆಯಿಲ್ಲದವರು. ಅಂಬೇಡ್ಕರ್‌ ಅವರ ನೇತೃತ್ವದಲ್ಲಿ ರಚನೆಯಾದ ಸಂವಿಧಾನವನ್ನು ಮಾನಸಿಕವಾಗಿ ಒಪ್ಪದಿರುವವರು ಯಾರಾದರೂ ಇದ್ದರೆ ಅದು ಸಂಘಪರಿವಾದವರು.

- ಸಿದ್ದರಾಮಯ್ಯ 

share
Next Story
X