ಮಂಗಳೂರು ಲೋಕಾಯುಕ್ತ ಎಸ್ಪಿ ವರ್ಗಾವಣೆ

ಮಂಗಳೂರು: ಮಂಗಳೂರು ಲೋಕಾಯುಕ್ತ (ದ.ಕ. ಮತ್ತು ಉಡುಪಿ ಜಿಲ್ಲೆಯನ್ನು ಒಳಗೊಂಡ) ಎಸ್ಪಿಯಾಗಿದ್ದ ಲಕ್ಷ್ಮಿ ಗಣೇಶ್ ಕೆ. ಅವರನ್ನು ಬೆಂಗಳೂರು ನಗರ ಲೋಕಾಯುಕ್ತದ ಪ್ರಧಾನ ಕಚೇರಿಗೆ ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಲಕ್ಷ್ಮಿಗಣೇಶ್ ಅವರ ಸ್ಥಾನಕ್ಕೆ ಬೆಂಗಳೂರಿನ ಲೋಕಾಯುಕ್ತದ ಪ್ರಧಾನ ಕಚೇರಿಯಲ್ಲಿ ಎಸ್ಪಿಯಾಗಿರುವ ಕಾಸರಗೋಡು ಮೂಲದ ಸಿ.ಎ. ಸೈಮನ್ ಅವರನ್ನು ನಿಯುಕ್ತಿಗೊಳಿಸಲಾಗಿದೆ. ಸೈಮನ್ ಅವರು ಅಧಿಕಾರ ಸ್ವೀಕರಿಸುವವರೆಗೆ ಲೋಕಾಯುಕ್ತ ಡಿವೈಸ್ಪಿ ಚೆಲುವರಾಜ್ ಅವರಿಗೆ ಪ್ರಭಾರ ವಹಿಸಲಾಗಿದೆ.
ಸೈಮನ್ ಮೂಲತಃ ಕಾಸರಗೋಡಿನವರಾಗಿದ್ದು, ಉಪ್ಪಿನಂಗಡಿಯಲ್ಲಿ ಪ್ರಾಥಮಿಕ, ಪ್ರೌಢ, ಕಾಲೇಜು ಶಿಕ್ಷಣ ಪೂರೈಸಿದರು. ಬಳಿಕ ಮಂಗಳೂರಿನ ಎಸ್‌ಡಿಎಂ ಕಾನೂನು ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿದ್ದರು.
ಜ.12ರಂದು ಇವರು ಲೋಕಾಯುಕ್ತ ಎಸ್ಪಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
Next Story