Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕನ್ನಡ ಸಾಹಿತ್ಯ ಸಮ್ಮೇಳನ | ಅನಿವಾಸಿ...

ಕನ್ನಡ ಸಾಹಿತ್ಯ ಸಮ್ಮೇಳನ | ಅನಿವಾಸಿ ಕನ್ನಡಿಗರಿಗಾಗಿ ಪ್ರತ್ಯೇಕ ಸಚಿವಾಲಯ, ಮಂತ್ರಿ ನೇಮಕಕ್ಕೆ ಮನವಿ

8 Jan 2023 10:54 PM IST
share
ಕನ್ನಡ ಸಾಹಿತ್ಯ ಸಮ್ಮೇಳನ | ಅನಿವಾಸಿ ಕನ್ನಡಿಗರಿಗಾಗಿ ಪ್ರತ್ಯೇಕ ಸಚಿವಾಲಯ, ಮಂತ್ರಿ ನೇಮಕಕ್ಕೆ ಮನವಿ

ಹಾವೇರಿ, ಜ.8: ಕೇರಳ ಮಾದರಿಯಲ್ಲಿ ರಾಜ್ಯದಲ್ಲೂ ಅನಿವಾಸಿ ಕನ್ನಡಿಗರಿಗಾಗಿ ಪ್ರತ್ಯೇಕ ಸಚಿವಾಲಯ ತೆರೆದು ಮಂತ್ರಿಗಳನ್ನು ನೇಮಕ ಮಾಡುವಂತೆ ದುಬೈ ಕನ್ನಡ ಸಂಘಟನೆಯ ಅಧ್ಯಕ್ಷ ಸರ್ವೊತ್ತಮ ಶೆಟ್ಟಿ ರಾಜ್ಯ ಸರಕಾರಕ್ಕೆ ಮನವಿ ಮಾಡಿದ್ದಾರೆ.  

ರವಿವಾರ 86ನೆ ಕನ್ನಡ ಸಾಹಿತ್ಯ ಸಮ್ಮೇಳನದ ಪಾಪು ಚಂಪಾ ವೇದಿಕೆಯಲ್ಲಿ ನಡೆದ ‘ವಿದೇಶದಲ್ಲಿ ಕನ್ನಡ ಡಿಂಡಿಮ’ ಗೋಷ್ಠಿಯಲ್ಲಿ ಆಶಯ ನುಡಿಗಳನ್ನಾಡಿದ ಅವರು, ಅನಿವಾಸಿ ಭಾರತೀಯ ಕನ್ನಡಿಗರ ಸಮಿತಿಗೆ ಮುಖ್ಯಮಂತ್ರಿಗಳೇ ಅಧ್ಯಕ್ಷರಾಗಿದ್ದಾರೆ. ಇವರೊಂದಿಗೆ ಉಪಾಧ್ಯಕ್ಷರನ್ನು ಸರಕಾರ ನೇಮಿಸಬೇಕು. ಇದರಿಂದಾಗಿ ಅನಿವಾಸಿ ಕನ್ನಡಿಗರಿಗೆ ತಮ್ಮ ಅಹವಾಲುಗಳನ್ನು ಸಲ್ಲಿಸಲು ಅವಕಾಶವಾಗುತ್ತದೆ ಎಂದು ತಿಳಿಸಿದರು.

ಅನಿವಾಸಿ ಕನ್ನಡಿಗರಿಂದ ವಿಧಾನ ಪರಿಷತ್‍ಗೆ ಶಾಸಕರನ್ನು ಚುನಾಯಿಸಲು ಅವಕಾಶ ನೀಡಬೇಕು. ಸರಕಾರ ವಿದೇಶದಿಂದ ಮರಳಿ ತಾಯ್ನಾಡಿಗೆ ಬರುವರಿಗೆ ಯೋಜನೆಗಳನ್ನು ಜಾರಿಗೊಳಸಬೇಕು. ಸ್ವಂತ ಉದ್ಯೋಗ ಅವಕಾಶಕ್ಕೆ ಸಹಾಯ, ಬಡ್ಡಿ ರಹಿತ ಸಾಲ, ಆರೋಗ್ಯ ವಿಮೆಗಳನ್ನು ನೀಡಬೇಕು. ಅನಿವಾಸಿ ಕನ್ನಡಿಗರಿಗೆ ಸೇರಿದ ಆಸ್ತಿಗಳನ್ನು ಸರಕಾರ ರಕ್ಷಿಸಬೇಕು ಎಂದರು.  

ವಿದೇಶದಲ್ಲಿ ಬದುಕು ಕಟ್ಟಿಕೊಂಡವರಿಗೆ ಕನ್ನಡದ ಮೇಲೆ ಪ್ರೀತಿ ಹುಟ್ಟಿದ್ದು ಕನ್ನಡ ನಾಡು ಬಿಟ್ಟುಹೋದ ಮೇಲೆ. ವಿದೇಶದಲ್ಲಿ ಇರುವರು ಎಲ್ಲರೂ ಸ್ಥಿತಿವಂತರಲ್ಲ. ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಹಬ್ಬ, ರಜೆ ಸಂದರ್ಭದಗಳಲ್ಲಿ ದೇಶಕ್ಕೆ ಆಗಮಿಸುವ ವಿಮಾನ ದರವನ್ನು ದುಪ್ಪಟ್ಟುಗೊಳಿಸಲಾಗುತ್ತಿದೆ. ಇದಕ್ಕೆ ಸರಕಾರ ಕಡಿವಾಣ ಹಾಕಬೇಕು ಎಂದು ತಿಳಿಸಿದರು.

ದುಬೈನ, ಸೌದಿ ಅರೇಬಿಯಾ ಹೊರತು ಪಡಿಸಿ ಮಧ್ಯ ಪ್ರಾಚ್ಯದ ಎಲ್ಲ ರಾಷ್ಟ್ರಗಳಲ್ಲಿಯೂ ಕನ್ನಡ ಸಂಘಟನೆಗಳು ಇವೆ. ಅಬುದಾಬಿ, ಶಾರ್ಜಾ, ಬೆಹರೇನ್, ಕುವೈತ್, ಕತಾರ್, ಒಮನ್ ಸಂಘಟನೆಗಳು ಸಕ್ರಿಯವಾಗಿ ಕನ್ನಡದ ಕೆಲಸಗಳನ್ನು ನಿರ್ವಹಿಸುತ್ತಿವೆ. ಬೆಹರೇನಲ್ಲಿ ಮೊಟ್ಟ ಮೊದಲ ಬಾರಿಗೆ 12 ಕೋಟಿ ರೂ.ವೆಚ್ಚದಲ್ಲಿ ಸ್ವಂತ ಜಾಗದಲ್ಲಿ ಕನ್ನಡ ಭವನ ನಿರ್ಮಿಸಲಾಗಿದೆ. ಮುಖ್ಯಮಂತ್ರಿ ಈ ಭವನ ಉದ್ಘಾಟಿಸಿಬೇಕು ಎನ್ನುವುದು ಅನಿವಾಸಿ ಕನ್ನಡಿಗರ ಆಸೆಯಾಗಿದೆ. ಅಮೇರಿಕಾ, ಯುರೋಪ್, ಆಫ್ರಿಕಾ, ಆಸ್ಟ್ರೇಲಿಯಾ ಖಂಡಗಳಲ್ಲಿಯೂ ಕೂಡ ಕನ್ನಡ ಸಂಘಟನೆಗಳು ಕಾರ್ಯ ನಿರತವಾಗಿವೆ. ಕುವತ್ ಕನ್ನಡ ಸಂಘ ಬೆಂಗಳೂರಿನ 8 ಸರಕಾರಿ ಶಾಲೆಗಳನ್ನು ದತ್ತು ಪಡೆದಿದೆ. ಇಟಲಿ, ಥೈಲ್ಯಾಂಡ್, ನ್ಯೂಜಿಲ್ಯಾಂಡ್, ಹಾಂಕಾಂಗ್ ಹಾಗೂ ನ್ಯೂಯಾರ್ಕ್ ಕನ್ನಡ ಸಂಘಟನೆಗಳು ಕೆಲಸ ನಿರ್ವಹಿಸುತ್ತಿವೆ ಎಂದು ತಿಳಿಸಿದರು.

ಗೋಷ್ಠಿಯಲ್ಲಿ ಎನ್.ಬಿ.ಕಾಳೆ ಸ್ವಾಗತಿಸಿ ನಿರೂಪಿಸಿದರು. ಮ.ಕೃ.ಮೇಘಾಡಿ ವಂದಿಸಿದರು. ಡಿ.ರಾಜೇಶ್ ಪದ್ಮನಾಭ ನಿರ್ವಹಿಸಿದರು. ಇದೇ ಸಂದರ್ಭದಲ್ಲಿ ಅನಿವಾಸಿ ಭಾರತೀಯ ಕರ್ನಾಟಕ ಸಮಿತಿ ವತಿಯಿಂದ ವಿದೇಶಿ ಕನ್ನಡಿಗರ ಮಾಹಿತಿಗಾಗಿ ಕಿರುಹೊತ್ತಿಗೆಗಳನ್ನು ಬಿಡುಗಡೆ ಮಾಡಲಾಯಿತು.

ಅನಿವಾಸಿ ಭಾರತೀಯರಿಗಾಗಿ ಪ್ರತ್ಯೇಕ ನೀತಿ ಜಾರಿಗೆ ಕೋರಿಕೆ:

‘50 ಲಕ್ಷ ಅನಿವಾಸಿ ಕನ್ನಡಿಗರು ವಿವಿಧ ದೇಶಗಳಲ್ಲಿ ನೆಲೆಸಿದ್ದಾರೆ. ಇವರಿಗಾಗಿಯೇ ಸರಕಾರ ಪ್ರತ್ಯೇಕ ನೀತಿಯನ್ನು ಜಾರಿಗೆ ತರಬೇಕು. ಸರಕಾರ ಎಲ್ಲಾ ವಿದೇಶಿಯರನ್ನು ಒಂದೇ ರೀತಿ ಕಾಣಬಾರದು. ಅಮೇರಿಕಾ ಹಾಗೂ ಯೂರೋಪ್ ದೇಶಗಳಲ್ಲಿ ನೆಲೆಸಿರುವ ಅನಿವಾಸಿ ಕನ್ನಡಿಗರಿಗಿಂತ ಮದ್ಯ ಪ್ರಾಚ್ಯ ರಾಷ್ಟ್ರಗಳಲ್ಲಿ ನೆಲೆಸಿರುವ ಕನ್ನಡಿಗರ ಪರಿಸ್ಥಿತಿ ಭಿನ್ನವಾಗಿದೆ. ಹಾಗಾಗಿ ಇವರಿಗಾಗಿ ಪ್ರತ್ಯೇಕ ನೀತಿಗಳನ್ನು ಜಾರಿಗೊಳಿಸಬೇಕು’

-ಡಾ.ಆರತಿ ಕೃಷ್ಣ, ಅಂತರಾಷ್ಟ್ರೀಯ ಘಟಕಗಳ ಸಮಿತಿ ಸದಸ್ಯೆ, ಕಸಾಪ

share
Next Story
X