‘ಸಿದ್ದು ನಿಜ ಕನಸುಗಳು’ ಪುಸ್ತಕ ಬಿಡುಗಡೆ ಕಾರ್ಯಕ್ರಮ ರದ್ದುಪಡಿಸುವಂತೆ ಕಾಂಗ್ರೆಸ್ ದೂರು

ಬೆಂಗಳೂರು: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿ ಬರೆಯಲಾಗಿರುವ ‘ಸಿದ್ದು ನಿಜ ಕನಸುಗಳು’ ಎನ್ನುವ ಪುಸ್ತಕ ಬಿಡುಗಡೆಯನ್ನು ತಡೆಯುವಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ನ ಕಾನೂನು ಘಟಕ ದೂರು ನೀಡಿದೆ.
ಬೆಂಗಳೂರಿನ ಎಸ್.ಜೆ ಪಾರ್ಕ್ ಪೊಲೀಸ್ ಠಾಣೆಗೆ ಕೆಪಿಸಿಸಿ ಕಾನೂನು ವಿಭಾಗದ ಪರವಾಗಿ ಸೂರ್ಯ ಮುಕುಂದರಾಜ್ ದೂರು ನೀಡಿದ್ದಾರೆ.
ನಾಳೆ ಬೆಂಗಳೂರಿನ ಪುರಭವನದಲ್ಲಿ ಸಿದ್ದು ನಿಜ ಕನಸು ಪುಸ್ತಕ ಬಿಡುಗಡೆಯಾಗಲಿದೆ. ಆದರೆ, ಈ ಪುಸ್ತಕ ಬಿಡುಗಡೆ ಹಿಂದೆ ದುರುದ್ದೇಶವಿದೆ. ಸಿದ್ದರಾಮಯ್ಯ ಅವರ ಭಾವಚಿತ್ರ ವಿರೂಪಗೊಳಿಸಿ ಸಾಮರಸ್ಯ ಕದಡುವ ಹುನ್ನಾರ ಹೊಂದಿದ್ದು, ಇದರಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟಾಗುತ್ತದೆ. ಆದ್ದರಿಂದ ಕಾರ್ಯಕ್ರಮಕ್ಕೆ ಅನುಮತಿ ನೀಡಿದ್ದರೆ ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಪುಸ್ತಕ ಬಿಡುಗಡೆ ರದ್ದುಪಡಿಸಿ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ನಾಳೆ (ಜನವರಿ 9) ಬೆಂಗಳೂರಿನ ಪುರಭವನದಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಆಯೋಜಕರು ನಿರ್ಧರಿಸಿದ್ದಾರೆ.

Next Story





