Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಜ.16ರಂದು 'ನಾ ನಾಯಕಿ' ಸಮಾವೇಶಕ್ಕೆ...

ಜ.16ರಂದು 'ನಾ ನಾಯಕಿ' ಸಮಾವೇಶಕ್ಕೆ ಪ್ರಿಯಾಂಕಾ ಗಾಂಧಿ ಆಗಮನ: ಡಿ.ಕೆ. ಶಿವಕುಮಾರ್

9 Jan 2023 4:46 PM IST
share
ಜ.16ರಂದು ನಾ ನಾಯಕಿ ಸಮಾವೇಶಕ್ಕೆ ಪ್ರಿಯಾಂಕಾ ಗಾಂಧಿ ಆಗಮನ: ಡಿ.ಕೆ. ಶಿವಕುಮಾರ್

ಬೆಂಗಳೂರು: 'ರಾಜ್ಯದ ಮಹಿಳೆಯರ ಸಬಲೀಕರಣಕ್ಕೆ ಕಾಂಗ್ರೆಸ್ ಪಕ್ಷದ ವತಿಯಿಂದ ಜನವರಿ 16ರಂದು ಅರಮನೆ ಮೈದಾನದಲ್ಲಿ 'ನಾ ನಾಯಕಿ' ಸಮಾವೇಶವನ್ನು ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮದಲ್ಲಿ ಪಕ್ಷದ ರಾಷ್ಟ್ರ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಭಾಗವಹಿಸಲಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ  ಬಿಜೆಪಿ, ಜೆಡಿಎಸ್ ಪಕ್ಷಗಳ ನಾಯಕರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡ ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು,  ' ಜ.16ರಂದು ಅರಮನೆ ಮೈದಾನದಲ್ಲಿ ಮಹಿಳೆಯರ 'ನಾ ನಾಯಕಿ' ಸಮಾವೇಶವನ್ನು ಹಮ್ಮಿಕೊಂಡಿದ್ದೇವೆ. ಈ ಸಮಾವೇಶದಲ್ಲಿ ಪಂಚಾಯತ್, ಸಹಕಾರ ಸಂಘಗಳಲ್ಲಿ ಸ್ಪರ್ಧೆ ಮಾಡಿದ ಮಹಿಳಾ ನಾಯಕಿಯರು ಭಾಗವಹಿಸುತ್ತಾರೆ ಎಂದು ತಿಳಿಸಿದರು.

'ರಾಜ್ಯದ ಮೂಲೆ ಮೂಲೆಗಳಿಂದ ಪ್ರತಿ ಬೂತ್, ಪಂಚಾಯತ್ ಗಳಿಂದ ಕನಿಷ್ಠ 3-10 ಹೆಣ್ಣು ಮಕ್ಕಳು ಈ ಸಮಾವೇಶಕ್ಕೆ ಆಗಮಿಸಬೇಕು ಎಂದು ಕರೆ ನೀಡುತ್ತಿದ್ದೇನೆ. ಹೆಣ್ಣು ಸಮಾಜದ ಕಣ್ಣು ಅವರು ಒಂದು ಶಕ್ತಿಯಾಗಿದ್ದು, ಅವರ ಸಬಲೀಕರಣಕ್ಕೆ ಸಮಾವೇಶ ಹಮ್ಮಿಕೊಂಡಿದ್ದೇವೆ. ಈ ಸಮಾವೇಶಕ್ಕೆ ರಾಷ್ಟ್ರೀಯ ನಾಯಕರನ್ನು ಆಹ್ವಾನಿಸಿದ್ದೇವೆ. ಈಗಾಗಲೇ ಸಾವಿರಾರು ಸಲಹೆಗಳು ಬಂದಿದ್ದು, ಇವುಗಳನ್ನು ಒಂದು ಸಮಿತಿ ಪರಿಶೀಲನೆ ನಡೆಸುತ್ತಿವೆ. ಈ ಸಮಾವೇಶಕ್ಕೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಆಗಮಿಸಲಿದ್ದಾರೆ. ಪ್ರಿಯಾಂಕಾ ಅವರು ಸಮಾವೇಶದಲ್ಲಿ ಕಾಂಗ್ರೆಸ್ ಪಕ್ಷ ಮಹಿಳೆಯರಿಗೆ ನೀಡುವ ಭರವಸೆಗಳನ್ನು ಘೋಷಣೆ ಮಾಡಲಿದ್ದಾರೆ. ಮಹಿಳೆಯರಿಗೆ ರಾಜಕೀಯವಾಗಿ ಪ್ರಿಯಾಂಕಾ ಗಾಂಧಿ ಅರು ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸಿ ಮಹಿಳೆಯರ ಧ್ವನಿಯಾಗಿ ಸಂದೇಶ ನೀಡುತ್ತಿದ್ದಾರೆ' ಎಂದು ಹೇಳಿದರು. 

'ರಾಜ್ಯ ಹಾಗೂ ದೇಶದ ಜನಸಂಖ್ಯೆಯಲ್ಲಿ ಶೇ.50ರಷ್ಟು ಮಹಿಳೆಯರಿದ್ದಾರೆ. ಹೀಗಾಗಿ ಮಹಿಳೆಯರಿಗೆ ಪ್ರತ್ಯೇಕ ಪ್ರಣಾಳಿಕೆ ಮಾಡಲು ಕಾಂಗ್ರೆಸ್ ನಿರ್ಧರಿಸಿದೆ. ಅವರ ಬದುಕಿನಲ್ಲಿ ಕಾಂಗ್ರೆಸ್ ಪಕ್ಷ ಕೊಡುಗೆ ನೀಡಿ, ಸಮಸ್ಯೆಗಳಿಗೆ ಪರಿಹಾರ ನೀಡಬೇಕು. ಕಾಂಗ್ರೆಸ್ ಪಕ್ಷ  ಮಹಿಳೆಯರಿಗೆ ನಾಯಕತ್ವ, ಶಕ್ತಿ ನೀಡುತ್ತಾ ಬಂದಿದೆ. ಈ ಹಿಂದೆ ಅಂಗನವಾಡಿ ಕಾರ್ಯಕ್ರಮ, ಆಶಾಕಾರ್ಯಕರ್ತರು, ಸ್ತ್ರೀಶಕ್ತಿ ಸ್ವಸಹಾಯ ಕಾರ್ಯಕ್ರಮಗಳನ್ನು ಕಾಂಗ್ರೆಸ್ ಪಕ್ಷ ಮಾತ್ರ ಮಾಡಿಕೊಂಡು ಬಂದಿದೆ' ಎಂದರು.

share
Next Story
X