Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ| ರಾಜ್ಯದ ಮೊದಲ ಸಮಗ್ರ ಕರ್ನಾಟಕ...

ಉಡುಪಿ| ರಾಜ್ಯದ ಮೊದಲ ಸಮಗ್ರ ಕರ್ನಾಟಕ ಯಕ್ಷಗಾನ ಸಮ್ಮೇಳನ: ಸಮ್ಮೇಳನಾಧ್ಯಕ್ಷರಾಗಿ ಡಾ.ಪ್ರಭಾಕರ ಜೋಷಿ ಆಯ್ಕೆ

ಸಚಿವ ಸುನೀಲ್ ಕುಮಾರ್ ಘೋಷಣೆ

9 Jan 2023 7:17 PM IST
share
ಉಡುಪಿ| ರಾಜ್ಯದ ಮೊದಲ ಸಮಗ್ರ ಕರ್ನಾಟಕ ಯಕ್ಷಗಾನ ಸಮ್ಮೇಳನ: ಸಮ್ಮೇಳನಾಧ್ಯಕ್ಷರಾಗಿ ಡಾ.ಪ್ರಭಾಕರ ಜೋಷಿ ಆಯ್ಕೆ
ಸಚಿವ ಸುನೀಲ್ ಕುಮಾರ್ ಘೋಷಣೆ

ಉಡುಪಿ: ಮುಂಬರುವ ಫೆಬ್ರವರಿ 11 ಮತ್ತು 12ರಂದು ಉಡುಪಿ ಎಂ.ಜಿ.ಎಂ.ಕಾಲೇಜಿನ ಆವರಣದಲ್ಲಿ ನಡೆಯಲಿರುವ ರಾಜ್ಯದ ಮೊದಲ ಸಮಗ್ರ ಕರ್ನಾಟಕ ಯಕ್ಷಗಾನ ಸಮ್ಮೇಳನದ ಅಧ್ಯಕ್ಷರಾಗಿ ಖ್ಯಾತ ಯಕ್ಷಗಾನ ವಿದ್ವಾಂಸ, ಯಕ್ಷ ಕಲಾವಿದ, ತಾಳೆಮದ್ದಳೆ ಅರ್ಥದಾರಿ ಡಾ.ಪ್ರಭಾಕರ ಜೋಷಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ರಾಜ್ಯ ಕನ್ನಡ ಮತ್ತು ಸಂಸ್ಕೃತಿ  ಇಲಾಖಾ ಸಚಿವ ವಿ.ಸುನಿಲ್‌ಕುಮಾರ್ ಘೋಷಿಸಿದ್ದಾರೆ.

ಸೋಮವಾರ ಸಂಜೆ ನಗರದ  ಎಂ.ಜಿ.ಎಂ. ಕಾಲೇಜಿನ ನೂತನ ರವೀಂದ್ರ ಮಂಟಪದ ಹಿಂಭಾಗದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿಯ ತಾತ್ಕಾಲಿಕ ಕಚೇರಿಯ ಉದ್ಘಾಟನೆ ನೆರವೇರಿಸಿ ರಾಜ್ಯಮಟ್ಟದ ಸಮಗ್ರ ಯಕ್ಷಗಾನ ಸಮ್ಮೇಳನದ ಸಲಹಾ ಸಮಿತಿ ಅಧ್ಯಕ್ಷರೂ ಆಗಿರುವ ವಿ.ಸುನಿಲ್‌ ಕುಮಾರ್ ಮಾತನಾಡುತಿದ್ದರು.

ಇದೇ ಸಂದರ್ಭದಲ್ಲಿ ಸಚಿವರು ಸಮ್ಮೇಳನದ ಆಕರ್ಷಕ ‘ಲಾಂಛನ’ವನ್ನೂ ಅನಾವರಣಗೊಳಿಸಿದರು.

ಹೊಸ ಪೀಳಿಗೆಯನ್ನು ಯಕ್ಷಗಾನದತ್ತ ಸೆಳೆಯುವ, ಯಕ್ಷಗಾನದಲ್ಲಿ ಪ್ರಸ್ತುತ ಇರುವ ಮತ್ತು ಮುಂದಿನ ದಿನದಲ್ಲಿ ಎದುರಾಗಬಹುದಾದ  ಹೊಸ ರೀತಿಯ ಸವಾಲುಗಳನ್ನು ಎದುರಿಸುವ ಕುರಿತೂ ಸೇರಿದಂತೆ ಯಕ್ಷಗಾನ ಬೆಳವಣಿಗೆಗೆ ಸಂಬಂಧಿಸಿದಂತೆ ಸಮ್ಮೇಳನದಲ್ಲಿ  ಸಮಗ್ರ ಚರ್ಚೆ ನಡೆಯಲಿದೆ ಎಂದು ಸಚಿವರು ತಿಳಿಸಿದರು.

ಎರಡು ದಿನಗಳ ಕಾಲ ನಡೆಯುವ ಈ ಸಮ್ಮೇಳನಕ್ಕಾಗಿ ರಾಜ್ಯ ಸರಕಾರ ದಿಂದ 2 ಕೋಟಿ ರೂ.ಗಳನ್ನು ಬಿಡುಗಡೆಗೊಳಿಸುವುದಾಗಿ ಹೇಳಿದ ಸಚಿವರು,  ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯವೈಖರಿಯಲ್ಲಿ ಸಾಕಷ್ಟು  ಬದಲಾವಣೆಯನ್ನು ಮಾಡಲಾಗುತ್ತಿದೆ. ಯಕ್ಷಗಾನವೂ ಸೇರಿದಂತೆ ವಿವಿಧ ಕಲೆಗಳ ಕುರಿತಂತೆ ಎದುರಾಗುವ ಹೊಸ ಸವಾಲು ಹಾಗೂ ಅದನ್ನು ಎದುರಿಸುವ ಕುರಿತೂ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ರಘುಪತಿ ಭಟ್, ರಾಜ್ಯದಲ್ಲೇ ಪ್ರಥಮ ಬಾರಿಗೆ ನಡೆಯುತ್ತಿರುವ ಸಮಗ್ರ ಕರ್ನಾಟಕ ಯಕ್ಷಗಾನ ಸಮ್ಮೇಳನದ ಅಭೂತಪೂರ್ವ ಯಶಸ್ಸಿಗೆ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾ ಗುವುದು. ಜಿಲ್ಲೆಯ ಹಿರಿಯ ಯಕ್ಷಗಾನ ಕಲಾವಿದರು, ಯಕ್ಷಗಾನ ಆಸಕ್ತರು  ಹಾಗೂ ಸಾರ್ವಜನಿಕರು ಮತ್ತು ಸಂಘ ಸಂಸ್ಥೆಗಳ ಸಹಕಾರ ಪಡೆಯಲಾ ಗುವುದು.ಎಲ್ಲರೂ ಇದರಲ್ಲಿ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ, ಯಕ್ಷಗಾನ ಸಮ್ಮೇಳನದ ಕಾರ್ಯಾಧ್ಯಕ್ಷ ಡಾ. ಜಿ.ಎಲ್.ಹೆಗಡೆ, ಯಕ್ಷಗಾನ ಸಮ್ಮೇಳನ ಎಂಬುದು ಒಂದರ್ಥದಲ್ಲಿ ಕನ್ನಡ ಸಮ್ಮೇಳನವೇ ಆಗಿದೆ. ಯಾಕೆಂದರೆ ಒಂದು ರೀತಿಯಲ್ಲಿ ನೋಡಿದರೆ ಯಾವುದೇ ಕಲೆಯೂ ಯಕ್ಷಗಾನದಂತೆ ಕನ್ನಡ ಭಾಷೆಯ ಸಮೃದ್ದ ಬೆಳವಣಿಗೆಗೆ ಕೊಡುಗೆಯನ್ನು ನೀಡಿಲ್ಲ ಎಂದು ವಿವರಿಸಿದರು.

ಇದುವರೆಗೆ 52 ಮಂದಿ ಯಕ್ಷಗಾನದ ವಿವಿಧ ವಿಷಯಗಳಿಗೆ ಸಂಬಂಧಿ ಸಿದಂತೆ ಪಿಹೆಚ್‌ಡಿ ಪಡೆದಿದ್ದಾರೆ. ಕರಾವಳಿ ಭಾಗದಲ್ಲಿ ಸುಮಾರು 52ರಷ್ಟು ಯಕ್ಷಗಾನ ಮೇಳಗಳಿವೆ. ಆಟದ ಮಟ್ಟ ಹಾಗೂ ಸ್ವರೂಪ ಬದಲಾಗಿರುವ  ದೂರುಗಳಿದ್ದರೂ, ಕಾಲಕ್ಕೆ ತಕ್ಕಂತೆ ಕನ್ನಡ ಸಂಸ್ಕೃತಿ ಹಾಗೂ ಸಾಹಿತ್ಯವನ್ನು ಉಳಿಸಿ ಬೆಳೆಸುವ ಯಕ್ಷಗಾನದಂಥ ಮತ್ತೊಂದು ಕಲೆ ಇಲ್ಲ ಎಂದರು.

ಕಾಯಕ್ರಮದಲ್ಲಿ ಯಕ್ಷಗಾನ ಅಕಾಡೆಮಿಯ ಮಾಜಿ ಅಧ್ಯಕ್ಷ ಪ್ರೊ.ಎಂ.ಎಲ್.ಸಾಮಗ,  ಸಾಲಿಗ್ರಾಮ ಸೇರಿದಂತೆ ಹಲವು ಮೇಳಗಳ ಮುಖ್ಯಸ್ಥ ಪಿ.ಕಿಶನ್ ಹೆಗ್ಡೆ, ಮಂದಾರ್ತಿ ಯಕ್ಷಗಾನ ಮೇಳದ ಅಧ್ಯಕ್ಷ  ಎಚ್. ಧನಂಜಯ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೈಸೂರು ವಿಭಾಗದ ಜಂಟಿ ನಿರ್ದೇಶಕ ವಿ.ಎನ್.ಮಲ್ಲಿಕಾರ್ಜುನ ಸ್ವಾಮಿ ಸ್ವಾಗತಿಸಿದರೆ, ಕರ್ನಾಟಕ ಯಕ್ಷಗಾನ ಅಕಾಡೆಮಿ ರಿಜಿಸ್ಟ್ರಾರ್ ಎಸ್.ಎಚ್. ಶಿವರುದ್ರಪ್ಪ ವಂದಿಸಿದರು. ಸಮ್ಮೇಳನ ಸಮಿತಿಯ ಸಂಚಾಲಕರಲ್ಲೊಬ್ಬರಾದ ಮುರಳಿ ಕಡೆಕಾರ್ ಕರ್ಯಕ್ರಮ ನಿರೂಪಿಸಿದರು.

ಯಕ್ಷಗಾನ ರಂಗದ ‘ಸರ್ವಜ್ಞ’ ಎಂ.ಪ್ರಭಾಕರ್ ಜೋಷಿ


ಯಕ್ಷಗಾನ ಹಾಗೂ ತಾಳಮದ್ದಳೆ ಕ್ಷೇತ್ರದ ವಿದ್ವಾಂಸ,  ಕಲಾವಿದ ಕಾರ್ಕಳ ತಾಲೂಕಿನ ಮಾಳ ಮೂಲದ ಡಾ. ಎಂ.ಪ್ರಭಾಕರ್ ಜೋಷಿ (76) ಅವರು ಉಡುಪಿಯಲ್ಲಿ ಮುಂದಿನ ತಿಂಗಳು ನಡೆಯುವ ಮೊತ್ತ ಮೊದಲ ರಾಜ್ಯ ಸಮಗ್ರ ಯಕ್ಷಗಾನ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. 

ಕಳೆದ ನವೆಂಬರ್ ತಿಂಗಳಲ್ಲಷ್ಟೇ ಯಕ್ಷಗಾನ ಹಾಗೂ ರಂಗಭೂಮಿ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಗಾಗಿ ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪಡೆದಿದ್ದ ಡಾ.ಜೋಷಿ ಅವರ ಕಿರೀಟಕ್ಕೆ ಇನ್ನೊಂದು ಗರಿಯಾಗಿದೆ.

ಮಂಗಳೂರಿನ ನಿವೃತ್ತ ಪ್ರಾಧ್ಯಾಪಕರೂ ಆಗಿರುವ ಪ್ರಭಾಕರ ಜೋಷಿ ಅವರ ತಂದೆ ನಾರಾಯಣ ಜೋಷಿ ಪ್ರಸಿದ್ಧ ವಿದ್ವಾಂಸರು ಹಾಗೂ ವಾಗ್ಮಿಗಳು. ಇವರು ಯಕ್ಷಗಾನ ಅರ್ಥಧಾರಿ ಅನಿರುದ್ಧ ಭಟ್ಟರಲ್ಲಿ ಯಕ್ಷಗಾನ ಕಲಿತರು. ಎಂ.ಕಾಂ ಪದವೀಧರಾದ ಜೋಷಿ, ಹಿಂದಿ ಸಾಹಿತ್ಯ ರತ್ನ ಹಾಗೂ ಯಕ್ಷಗಾನ ದಲ್ಲಿ ಕೃಷ್ಣ ಸಂಧಾನ ಪ್ರಸಂಗ ವಿಷಯದಲ್ಲಿ ಸಂಶೋಧನೆ ಮಾಡಿ ಡಾಕ್ಟರೇಟ್ ಸಹ ಪಡೆದರು.

ಕಲಾ ವಿಮರ್ಶಕರು ಆಗಿರುವ ಇವರು, ವಿದೇಶಗಳಲ್ಲೂ ಯಕ್ಷಗಾನದ ನೂರಾರು ಕಮ್ಮಟಗಳಲ್ಲಿ ಭಾಗವಹಿಸಿದ್ದಾರೆ. ಇವರು ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಹತ್ತಾರು ಕೃತಿಗಳನ್ನು ರಚಿಸಿದ್ದಾರೆ. 2016ರ ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿಯ ಪಾರ್ತಿಸುಬ್ಬ ಪ್ರಶಸ್ತಿ, ಶೇಣಿ ಪ್ರಶಸ್ತಿ, ಅಗರಿ ಪ್ರಶಸ್ತಿ, ಕುಬೆವೂರು ಪ್ರಶಸ್ತಿ, ಕುರಿಯ ಪ್ರಶಸ್ತಿ, ಯಕ್ಷ ಸಂಗಮ ಮೂಡಬಿದ್ರಿ ಪ್ರಶಸ್ತಿ ಡಾ.ಜೋಷಿ ಪಡೆದಿರುವ ಪ್ರಶಸ್ತಿಗಳ ಸರಮಾಲೆಯಲ್ಲಿ ಕೆಲವು.

ತಾಳಮದ್ದಳೆ ಕೂಟಗಳಲ್ಲಿ ಅರ್ಥಧಾರಿಗಳಾಗಿ ಇವರು ಹಿರಿಯ ಹಾಗೂ ಉದಯೋನ್ಮುಖ ಕಿರಿಯ ಕಲಾವಿದರೊಂದಿಗೆ ನಡೆಸುವ ‘ವಾಗ್ವಾದ’ಗಳು ಯಕ್ಷಪ್ರಿಯರಿಗೆ ಸದಾ ಸ್ಪೂರ್ತಿದಾಯವಾಗಿರುತ್ತವೆ.

share
Next Story
X