ಕಲಬುರಗಿ | ಪಿಕ್ಅಪ್ ವಾಹನ ಪಲ್ಟಿ; 8 ವಿದ್ಯಾರ್ಥಿಗಳ ಸ್ಥಿತಿ ಗಂಭೀರ
ಕಲಬುರಗಿ: ಪಿಕ್ ಅಪ್ ವಾಹನವೊಂದು ಮಗುಚಿ 8 ಶಾಲಾ ವಿದ್ಯಾರ್ಥಿಗಳು ಗಂಭೀರ ಗಾಯಗೊಂಡಂತಹ ಘಟನೆ ಜಿಲ್ಲೆಯ ಕಮಲಾಪುರ ತಾಲೂಕಿನ ಮಡಕಿ ಬಳಿ ನಡೆದಿದೆ.
ಸಂಜನಾ, ಸ್ಪೂರ್ತಿ, ಸಚೀನ್, ಶಾಲಿನಿ, ಪಾಯಲ್ ಸೇರಿದಂತೆ ಇನ್ನೂ 8 ವಿದ್ಯಾರ್ಥಿಗಳಿಗೆ ಗಂಭೀರವಾಗಿ ಗಾಯಗೊಂಡಿದ್ದು, ತುರ್ತು ಚಿಕಿತ್ಸೆಗಾಗಿ ಕಲಬುರಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.
ಸರ್ಕಾರಿ ಬಸ್ ಸರಿಯಾದ ಸಮಯಕ್ಕೆ ಬಾರದ ಹಿನ್ನೆಲೆ ಶಾಲೆ ಮುಗಿಸಿ ಮಹಗಾಂವ್ನಿಂದ ಮಡಕಿ ತಾಂಡಾಕ್ಕೆ ವಿದ್ಯಾರ್ಥಿಗಳು ಪಿಕ್ಅಪ್ ವಾಹನದಲ್ಲಿ ತೆರಳುತ್ತಿದ್ದರು. ಈ ವೇಳೆ ದಾರಿ ಮಧ್ಯೆ ಪಿಕ್ಅಪ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಕೂಡಲೇ ಸ್ಥಳೀಯರ ಸಹಾಯದಿಂದ ಗಾಯಾಳು ಶಾಲಾ ವಿದ್ಯಾರ್ಥಿಗಳನ್ನು ಕಲಬುರಗಿ ಜಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಈ ಸಂಬಂಧ ನರೋಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story