Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಹಿರಿಯ ಸಾಹಿತಿ ಡಾ.ಸಾರಾ ಅಬೂಬಕರ್ ನಿಧನ

ಹಿರಿಯ ಸಾಹಿತಿ ಡಾ.ಸಾರಾ ಅಬೂಬಕರ್ ನಿಧನ

10 Jan 2023 2:02 PM IST
share
ಹಿರಿಯ ಸಾಹಿತಿ ಡಾ.ಸಾರಾ ಅಬೂಬಕರ್ ನಿಧನ

ಮಂಗಳೂರು, ಜ.10: ಹಿರಿಯ ಸಾಹಿತಿ, ಲೇಖಕಿ ಡಾ.ಸಾರಾ ಅಬೂಬಕರ್(87) ಮಂಗಳವಾರ ಮಧ್ಯಾಹ್ನ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ನಾಲ್ವರು ಪುತ್ರರು ಹಾಗೂ ಅಪಾರ ಬಂಧುಬಳಗ, ಅಭಿಮಾನಿಗಳನ್ನು ಅಗಲಿದ್ದಾರೆ.

ಮೂಲತಃ ಕಾಸರಗೋಡಿನ ಚಂದ್ರಗಿರಿ ತೀರದವರಾದ ಸಾರಾ ವಿವಾಹವಾದ ಬಳಿಕ ಮಂಗಳೂರಿನ ಹ್ಯಾಟ್ ಹಿಲ್ ಬಳಿ ವಾಸವಾಗಿದ್ದರು. 'ಚಂದ್ರಗಿರಿ ತೀರದಲ್ಲಿ‌' ಕಾದಂಬರಿಯ ಮೂಲಕ ಪ್ರಸಿದ್ಧಿಗೆ ಬಂದಿದ್ದ ಸಾರಾ ಅಬೂಬಕರ್ ಅನೇಕ ಕೃತಿಗಳನ್ನು ರಚಿಸಿ ಖ್ಯಾತರಾಗಿದ್ದರು. ಅನೇಕ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.

ಮಂಗಳವಾರ ರಾತ್ರಿ ‌8 ಗಂಟೆ ಸುಮಾರಿಗೆ ಮಂಗಳೂರಿನ ಬಂದರ್ ಝೀನತ್ ಬಕ್ಷ್ ಮಸೀದಿ ಆವರಣದ ದಫನ ಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಮಹಿಳಾ ಧ್ವನಿಯಾಗಿದ್ದ ಸಾರಾ ಅಬೂಬಕರ್ ಅವರು 1936ರ ಜೂನ್ 30ರಂದು ಕಾಸರಗೋಡಿನ ಚಂದ್ರಗಿರಿ ತೀರದ ಗ್ರಾಮವೊಂದರಲ್ಲಿ ಜನಿಸಿದರು. ನ್ಯಾಯವಾದಿ ಪಿ.ಅಹ್ಮದ್ ಮತ್ತು ಜೈನಾಬಿ ದಂಪತಿಯ ಪುತ್ರಿಯಾಗಿರುವ ಅವರು ಹುಟ್ಟೂರಲ್ಲೇ ಪ್ರಾಥಮಿಕ ವಿದ್ಯಾಭ್ಯಾಸ ಮಾಡಿದ್ದರು. ಕಾಸರಗೋಡಿನಲ್ಲಿ ಹೈಸ್ಕೂಲ್ ಪೂರೈಸಿದ ಸಾರಾ ತನ್ನ ಅಜ್ಜಿ ಹೇಳುತ್ತಿದ್ದ ಕಥೆಗಳಿಂದಾಗಿ ಅವರು ಎಳೆಯದರಲ್ಲೇ ಸಾಹಿತ್ಯ ಕ್ಷೇತ್ರದತ್ತ ಆಕರ್ಷಿತರಾಗಿದ್ದರು. ಇಂಜಿನಿಯರ್ ಆಗಿದ್ದ ಅಬೂಬಕರ್ ಅವರೊಡನೆ ವಿವಾಹವಾದ ಬಳಿಕ ಅವರ ಶಿಕ್ಷಣ ಅರ್ಧದಲ್ಲೇ ಮೊಟಕುಗೊಂಡಿತು.

ಸಾರಾ ಅಬೂಬಕರ್ ಅವರ ಪ್ರಥಮ ಕಾದಂಬರಿ ‘ಚಂದ್ರಗಿರಿಯ ತೀರದಲ್ಲಿ’ ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಇದು ಲಂಕೇಶ್ ಪತ್ರಿಕೆಯಲ್ಲಿ ಧಾರಾವಾಹಿಯಾಗಿ ಪ್ರಕಟಗೊಂಡಿತ್ತು.

ಕೃತಿಗಳು: ಸಾರಾ ಅಬೂಬಕರ್ ಸಹನಾ, ವಜ್ರಗಳು, ಕದನವಿರಾಮ, ಸುಳಿಯಲ್ಲಿ ಸಿಕ್ಕವರು, ಪ್ರವಾಹ-ಸುಳಿ ತಳ ಒಡೆದ ದೋಣಿ, ಪಂಜರ, ಇಳಿಜಾರು, ಕಾಣಿಕೆ ಇತ್ಯಾದಿ ಕಾದಂಬರಿಗಳನ್ನು ಅವರು ಬರೆದಿದ್ದಾರೆ. ಚಪ್ಪಲಿಗಳು, ಪಯಣ ಮತ್ತು ಇತರ ಕಥೆಗಳು, ಅರ್ಧರಾತ್ರಿಯಲ್ಲಿ ಹುಟ್ಟಿದ ಕೂಸು, ಖೆಡ್ಡ ಮುಂತಾದ ಕಥಾ ಸಂಕಲನ, ಕಮರಿದ ಕನಸು, ಮಗಳು ಹುಟ್ಟಿದಳು, ತೇಲಾಡುವ ಮೋಡಗಳು, ತಾಳ, ಹೀಗೂ ಒಂದು ಬದುಕು ಮುಂತಾದ ಬಾನುಲಿ ನಾಟಕಗಳನ್ನು ರಚಿಸಿದ್ದಾರೆ. ಲೇಖನ ಗುಚ್ಛ, ಮನೋಮಿ, ಬಲೆ, ನಾನಿನ್ನು ನಿದ್ರಿಸುವೆ ಇತ್ಯಾದಿ ಅನುವಾದಗಳನ್ನು ರಚಿಸಿರುವ ಅವರು, 'ಐಷಾರಾಮದಲ್ಲಿ' ಎಂಬ ಪ್ರವಾಸ ಕಥನವನ್ನೂ ಬರೆದಿದ್ದಾರೆ. ಅವರು ಮಲಯಾಳಂನ ಅನೇಕ ಕೃತಿಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ.

*ಪ್ರಶಸ್ತಿಗಳು: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ನಾಡೋಜ ಸೇರಿದಂತೆ ಅನೇಕ ಪ್ರಶಸ್ತಿಗಳು ಸಾರಾ ಅಬೂಬಕರ್ ಅವರನ್ನು ಅರಸಿ ಬಂದಿವೆ.

 ಕರ್ನಾಟಕ ಸಾಹಿತ್ಯ ಅಕಾಡಮಿಯ ಗೌರವ ಪ್ರಶಸ್ತಿ, ದಾನ ಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ, ಕನ್ನಡ ಸಾಹಿತ್ಯ ಪರಿಷತ್ತಿನ ಬಿ. ಸರೋಜಾದೇವಿ ಪ್ರಶಸ್ತಿ, ವರ್ಧಮಾನ ಪ್ರಶಸ್ತಿ, ಮಾತೋಶ್ರೀ ರತ್ನಮ್ಮ ಹೆಗ್ಗಡೆ ಪ್ರಶಸ್ತಿ, ಸಂದೇಶ ಪ್ರಶಸ್ತಿ, ಅನುಪಮ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಮಾಸ್ತಿ ಪ್ರಶಸ್ತಿ, ನೃಪತುಂಗ ಪ್ರಶಸ್ತಿ, ಹಂಪಿ ವಿಶ್ವವಿದ್ಯಾನಿಲಯದ ನಾಡೋಜ ಹೀಗೆ ಅನೇಕ ಪ್ರಶಸ್ತಿ, ಗೌರವಗಳಿಗೆ ಅವರು ಪಾತ್ರರಾಗಿದ್ದಾರೆ.

share
Next Story
X