Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪುತ್ತೂರು ನಗರಸಭೆ ಸಾಮಾನ್ಯ ಸಭೆ: ಜನನ...

ಪುತ್ತೂರು ನಗರಸಭೆ ಸಾಮಾನ್ಯ ಸಭೆ: ಜನನ ಮರಣ ಇತರ ಪರವಾನಿಗೆ ಅರ್ಜಿ ಸಮರ್ಪಕ ವಿಲೇ ಅಗುತ್ತಿಲ್ಲ; ಸದಸ್ಯರ ಆರೋಪ

10 Jan 2023 4:47 PM IST
share
ಪುತ್ತೂರು ನಗರಸಭೆ ಸಾಮಾನ್ಯ ಸಭೆ: ಜನನ ಮರಣ ಇತರ ಪರವಾನಿಗೆ ಅರ್ಜಿ ಸಮರ್ಪಕ ವಿಲೇ ಅಗುತ್ತಿಲ್ಲ; ಸದಸ್ಯರ ಆರೋಪ

ಪುತ್ತೂರು: ಜನನ, ಮರಣ, ಕಟ್ಟಡ ಪರವಾನಿಗೆ ಇನ್ನಿತರ ಅರ್ಜಿ ಸಲ್ಲಿಸಿದವರನ್ನು ಸಿಬ್ಬಂದಿಗಳು ಸತಾಯಿಸುತ್ತಿದ್ದಾರೆ. ಸಮರ್ಪಕವಾಗಿ ಅರ್ಜಿಗಳ ವಿಲೇವಾರಿಯನ್ನು ಮಾಡುತ್ತಿಲ್ಲ. ತುಂಬಾ ಅರ್ಜಿಗಳು ಪೆಂಡಿಂಗ್ ಇದೆ ಎಂದು ನಗರಸಭಾ ಸದಸ್ಯರು ಆರೋಪಿಸಿದರು. 

ಪುತ್ತೂರು ನಗರಸಭಾ ಸಾಮಾನ್ಯ ಸಭೆಯು ಮಂಗಳವಾರ ನಗರಸಭಾ ಅಧ್ಯಕ್ಷ ಕೆ. ಜೀವಂಧರ್ ಜೈನ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಮಹಮ್ಮದ್ ರಿಯಾಝ್ ಅವರು,  ಜನನ, ಮರಣ ಅರ್ಜಿ ಸಲ್ಲಿಸಿದ ಸಾರ್ವಜನಿಕರಿಗೆ ಸಮಸ್ಯೆ ಕ್ಲಿಷ್ಟಗೊಳಿಸಿ ಗೊಂದಲ ಮೂಡಿಸಲಾಗುತ್ತಿದೆ. ಉದ್ಯಮ ಪರವಾನಿಗೆ ಅರ್ಜಿಗಳನ್ನೂ ವಿಲೇ ಮಾಡದೆ ಜನರಿಗೆ ತೊಂದರೆ ನೀಡಲಾಗುತ್ತಿದೆ. ಅರ್ಜಿ ಸಲ್ಲಿಸಿದ ಜನರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಈ ಬಗ್ಗೆ ಉತ್ತರಿಸಿದ ಅಧ್ಯಕ್ಷರು ಸಕಾಲದಲ್ಲಿ ಸಲ್ಲಿಸಲಾಗಿರುವ ಅರ್ಜಿಗಳು ಯಾವುದೂ ಪೆಂಡಿಂಗ್ ಉಳಿದಿಲ್ಲ. ಅಲ್ಲದೆ ತಾನು ಪ್ರತಿಯೊಂದು ಸಭೆಯಲ್ಲಿಯೂ ಅರ್ಜಿಗಳ ವಿಲೇವಾರಿ ಬಗ್ಗೆ ಸಿಬ್ಬಂದಿಗಳೊಂದಿಗೆ ಪ್ರಗತಿ ಪರಿಶೀಲನೆ ನಡೆಸುತ್ತಿದ್ದೇನೆ. ಅಲ್ಲದೆ ಪೌರಾಯುಕ್ತರೂ ಈ ಬಗ್ಗೆ ನಿರಂತರ ಪರಿಶೀಲನೆ ನಡೆಸುತ್ತಿದ್ದಾರೆ. ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಪೌರಾಯುಕ್ತ ಮಧು ಎಸ್ ಮನೋಹರ್ ಅವರು ಸ್ಪಷ್ಟನೆ ನೀಡಿ, ತಾಂತ್ರಿಕ ತೊಂದರೆಗಳ ಹೊರತುಪಡಿಸಿ ಉಳಿದಂತೆ ಅರ್ಜಿಗಳ ವಿಲೇವಾರಿ ಸಮರ್ಪಕವಾಗಿ ನಡೆಸಲಾಗುತ್ತಿದೆ. ಸಕಾಲದಲ್ಲಿನ 17 ಸೇವೆಗಲ ಬಗ್ಗೆ ಕಚೇರಿಯ ಮುಂಬಾಗದಲ್ಲಿ ಬೋರ್ಡ್ ಹಾಕಿ ವಿಲೇವಾರಿ ದಿನಾಂಕದ ಬಗ್ಗೆ ಮಾಹಿತಿ ನೀಡಲಾಗುತ್ತಿದೆ ಎಂದು ತಿಳಿಸಿದರು. 

ಸದಸ್ಯರು ಸಮಸ್ಯೆಗಳ ಬಗ್ಗೆ ಸಿಬ್ಬಂದಿಗಳಿಗೆ ಮೊಬೈಲ್ ಕರೆ ಮಾಡಿ ತಿಳಿಸಲು ಹೋದರೆ ಅವರು ನಮ್ಮ ಮೊಬೈಲ್‍ನ ಕರೆ ಸ್ವೀಕರಿಸುತ್ತಿಲ್ಲ. ನಮ್ಮ ಕರೆಗೆ ಬೆಲೆ ನೀಡುತ್ತಿಲ್ಲ ಎಂದು ಸದಸ್ಯೆ ಶೈಲಾ ಪೈ ಅವರು ಆರೋಪಿಸಿದರು.

ಇದಕ್ಕೆ ಉತ್ತರಿಸಿದ ಅಧ್ಯಕ್ಷರು ಸದಸ್ಯರು ಸಮಸ್ಯೆಗಳ ಬಗ್ಗೆ ಸಂಬಂಧಿಸಿದ ಅಧಿಕಾರಿಗಳ ಜೊತೆಗೆ ಮಾತನಾಡಿ ಅವರಿಂದ ಸಿಬ್ಬಂದಿಗಳಿಗೆ ಸೂಚನೆ ನೀಡುವಂತೆ ತಿಳಿಸುವುದು ಉತ್ತಮ ಎಂದು ಸಲಹೆ ನೀಡಿದರು.ಮುಂದೆ ಯಾವುದೇ ಸದಸ್ಯರು ಕರೆ ಮಾಡಿದಾಗ ಅಗೌರವ ತೋರಿಸಬಾರದು. ಈ ಬಗ್ಗೆ ಸಿಬ್ಬಂದಿಗಳಿಗೆ ಸೂಚನೆ ನೀಡಬೇಕು ಎಂದು ಅಧ್ಯಕ್ಷರು ಸೂಚನೆ ನೀಡಿದರು.

ನಗರಸಭಾ ವ್ಯಾಪ್ತಿಯಲ್ಲಿ ಪ್ರಸ್ತುತ 24753 ಆಸ್ತಿಗಳಿದ್ದು, ಈ ಆಸ್ತಿಗಳನ್ನು ಪರಿವೀಕ್ಷಣೆ ನಡೆಸಿ ನಿಗದಿತ ನಮೂನೆಯಲ್ಲಿ ವಿವರಗಳನ್ನು ಅಳವಡಿಕೊಳ್ಳಬೇಕಾಗಿದೆ. ಇದಕ್ಕೆ ಅವಶ್ಯವಿರುವ ನಮೂನೆಗಳನ್ನು ಸ್ಥಳೀಯವಾಗಿ ಕೊಟೇಶನ್ ಅಹ್ವಾನಿಸಿ ಮುದ್ರಿಸಲು ಒಟ್ಟು ರೂ. 25 ಸಾವಿರ ವೆಚ್ಚವನ್ನು ನಿಗದಿಪಡಿಸಲಾಗಿದೆ. ಈ ಅನುದಾನಕ್ಕೆ ಅನುಮೋದನೆ ನೀಡುವಂತೆ ಪೌರಾಯುಕ್ತರು ಸಭೆಗೆ ತಿಳಿಸಿದರು. ಸಭೆಯು ಒಪ್ಪಿಗೆ ಸೂಚಿಸಿತು. 

ನಗರಸಭಾ ವ್ಯಾಪ್ತಿಯ ರಸ್ತೆಗಳನ್ನು ಅಗೆತ ಮಾಡುವ ಸಂದರ್ಭದಲ್ಲಿ ನಗರಸಭೆಯಿಂದ ಎಸ್‍ಆರ್ ದರ ನಿಗದಿಪಡಿಸಲಾಗುತ್ತಿದ್ದು, ಪ್ರತೀ ಮೀಟರ್‍ಗೆ ಮಣ್ಣಿನ ರಸ್ತೆಗೆ ರೂ. 280, ಡಾಮರು ರಸ್ತೆಗೆ ರೂ. 1292, ಕಾಂಕ್ರಿಟ್ ರಸ್ತೆಗೆ ರೂ. 1786, ಇಂಟರ್‍ಲಾಕ್ ರಸ್ತೆಗೆ ರೂ. 700 ನಿಗದಿ ಪಡಿಸುವ ಬಗ್ಗೆ ಅಧ್ಯಕ್ಷರು ಸಭೆಯಲ್ಲಿ ಮಂಡಿಸಿದರು. ಮಣ್ಣು ರಸ್ತೆಗೆ ದರ ವಿಧಿಸುವುದು ಬೇಡ. ಅದನ್ನು ಹೊರತುಪಡಿಸಿ ಉಳಿದ ರಸ್ತೆಗಳಿಗೆ ದರ ವಿಧಿಸೋಣ ಎಂದು ಸದಸ್ಯ ಸುಂದರ ಪೂಜಾರಿ ಅವರು ಸಲಹೆ ನೀಡಿದರು. ಇದಕ್ಕೆ ಇತರ ಸದಸ್ಯರೂ ಧ್ವನಿಗೂಡಿಸಿದರು. ಅದರಂತೆ ಮಣ್ಣು ರಸ್ತೆ ಹೊರತುಪಡಿಸಿ ಉಳಿದ ರಸ್ತೆಗಳಿಗೆ ನಿಗದಿತ ಎಸ್‍ಆರ್ ದರ ವಿಧಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. 

ನಗರಸಭೆಯ ಘನತ್ಯಾಜ್ಯ ಸಂಸ್ಕರಣಾ ಘಟಕದಲ್ಲಿನ ಪಾರಂಪರಿಕ ತ್ಯಾಜ್ಯವನ್ನು ರಾಜ್ಯ ಮಾಲಿನ್ಯ ನಿಯಂತ್ರಣದ ಮಾರ್ಗಸೂಚಿಯಂತೆ ವಿಲೇವಾರಿಗೊಳಿಸಬೇಕಾಗಿದೆ. ಈ ಬಗ್ಗೆ ರೂ. 1.96 ಕೋಟಿಯ ಅಂದಾಜು ಪಟ್ಟಿಯನ್ನು ತಯಾರಿಸಲಾಗಿದೆ. ಈ ಪೈಕಿ ಒಟ್ಟು ಮೊತ್ತದ 16% ನಗರಸಭೆಯಿಂದ ಭರಿಸಬೇಕಾಗಿದ್ದು, 50% ಕೇಂದ್ರ ಸರ್ಕಾರ ಭರಿಸಲಿದೆ. ಉಳಿದ ಹಣವನ್ನು ರಾಜ್ಯ ಸರ್ಕಾರವು ಭರಿಸಲಿದೆ. ತ್ಯಾಜ್ಯದ ಪ್ರಮಾಣವನ್ನು ಗುರುತಿಸಲು ಡ್ರೋನ್ ಮ್ಯಾಪಿಂಗ್ ಸಮೀಕ್ಷೆ ನಡೆಸುವುದು ಅವಶ್ಯಕವಾಗಿದೆ. ಇದಕ್ಕಾಗಿ ದರಪಟ್ಟಿ ಆಹ್ವಾನಿಸಲಾಗಿದೆ. ಕಡಿಮೆ ದರಪಟ್ಟಿ ಸಲ್ಲಿಸಿದವರಿಗೆ ಅನುಮೋದನೆ ನೀಡಲಾಗುವುದು ಎಂದು ಪೌರಾಯುಕ್ತರು ಸಭೆಗೆ ತಿಳಿಸಿದರು.

ಕಡಿಮೆ ದರಪಟ್ಟಿ ನೀಡಿದವರಿಗೆ ಸಮೀಕ್ಷೆ ನಡೆಸಲು ಅನುಮೋದನೆ ನೀಡಲಾಯಿತು. 

ವೇದಿಕೆಯಲ್ಲಿ ನಗರಸಭಾ ಉಪಾಧ್ಯಕ್ಷೆ ವಿದ್ಯಾ ಆರ್ ಗೌಡಿ, ಸ್ಥಾಯಿ ಸಮಿತಿ ಅಧ್ಯಕ್ಷ ಬಾಲಚಂದ್ರ ಕೆ ಉಪಸ್ಥಿತರಿದ್ದರು. ಪೌರಾಯುಕ್ತ ಮಧು ಎಸ್ ಮನೋಹರ್ ಸ್ವಾಗತಿಸಿ ಕಲಾಪ ನಿರ್ವಹಿಸಿದರು. 

share
Next Story
X