Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರೈತರ ಆತ್ಮಹತ್ಯೆ ಪ್ರಕರಣದಲ್ಲಿ ಕರ್ನಾಟಕ...

ರೈತರ ಆತ್ಮಹತ್ಯೆ ಪ್ರಕರಣದಲ್ಲಿ ಕರ್ನಾಟಕ 2ನೇ ಸ್ಥಾನದಲ್ಲಿದೆ: ಸಿದ್ದರಾಮಯ್ಯ

10 Jan 2023 7:18 PM IST
share
ರೈತರ ಆತ್ಮಹತ್ಯೆ ಪ್ರಕರಣದಲ್ಲಿ ಕರ್ನಾಟಕ 2ನೇ ಸ್ಥಾನದಲ್ಲಿದೆ: ಸಿದ್ದರಾಮಯ್ಯ

ಬೆಂಗಳೂರು, ಜ.10: ಬಿಜೆಪಿ ಸರಕಾರದ ದ್ವೇಷ ರಾಜಕೀಯದಿಂದ ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರು, ಬಡವರು, ರೈತರು ಆತಂಕದಿಂದ ಬದುಕುತ್ತಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇಲ್ಲವಾಗಿದೆ. ದೇಶದಲ್ಲಿ ರೈತರ ಆತ್ಮಹತ್ಯೆ ಪ್ರಕರಣದಲ್ಲಿ ಕರ್ನಾಟಕ ಇಂದು ಎರಡನೇ ಸ್ಥಾನದಲ್ಲಿದೆ. ಅಭಿವೃದ್ಧಿ ವಿಚಾರದಲ್ಲಿ ರಾಜ್ಯ ಎರಡು ದಶಕಗಳಷ್ಟು ಹಿಂದಕ್ಕೆ ಹೋಗಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಮಂಗಳವಾರ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು,  ಇಂದು ಕಾಂಗ್ರೆಸ್ ಪಕ್ಷದ ವತಿಯಿಂದ ಬಿಜೆಪಿಯ ಪಾಪದ ಪುರಾಣ ಎಂಬ ಆರೋಪಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದೇವೆ. ಆಪರೇಷನ್ ಕಮಲದ ಮೂಲಕ ಅನೈತಿಕ ಮಾರ್ಗದಲ್ಲಿ ಈ ಸರಕಾರ ರಾಜ್ಯದ ಮೇಲೆ ವಕ್ಕರಿಸಿಕೊಂಡಿದೆ ಎಂದರು.

ಕೋಟ್ಯಾಂತರ ರೂಪಾಯಿ ಪಾಪದ ಹಣವನ್ನು ಖರ್ಚು ಮಾಡಿ, ಶಾಸಕರನ್ನು ಕೊಂಡುಕೊಂಡು ಸರಕಾರ ರಚನೆ ಮಾಡಿದ್ದಾರೆ. ಬಿಜೆಪಿ ಸರಕಾರ ಭ್ರಷ್ಟಾಚಾರದ ಸಾಗರದಲ್ಲಿ ಮುಳುಗಿಹೋಗಿದೆ. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದ ಮೇಲಂತೂ ರಾಜ್ಯಕ್ಕೆ ದೊಡ್ಡ ಕಳಂಕವನ್ನು ತಂದಿದ್ದಾರೆ ಎಂದು ಸಿದ್ದರಾಮಯ್ಯ ಟೀಕಿಸಿದರು.

ರಾಜ್ಯ ಕಂಡಂತಹ ಅತ್ಯಂತ ದುರ್ಬಲ ಮುಖ್ಯಮಂತ್ರಿ ಎಂದರೆ ಬಸವರಾಜ ಬೊಮ್ಮಾಯಿ. ಇವರು ಬರೀ ಭ್ರಷ್ಟ ಮಾತ್ರವಲ್ಲ, ಕೇಂದ್ರ ಸರಕಾರದ ಮುಂದೆ ಹೇಡಿತನದಿಂದ ವರ್ತಿಸುವ ದುರ್ಬಲ ವ್ಯಕ್ತಿ. 15ನೆ ಹಣಕಾಸು ಅಯೋಗದ ಮಧ್ಯಂತರ ವರದಿಯಲ್ಲಿ ರಾಜ್ಯಕ್ಕೆ 5495 ಕೋಟಿ ರೂ.ವಿಶೇಷ ಅನುದಾನ ನೀಡುವಂತೆ ಶಿಫಾರಸ್ಸು ಮಾಡಿತ್ತು. ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅದನ್ನು ತಿರಸ್ಕರಿಸಿದರು ಎಂದು ಅವರು ಹೇಳಿದರು.

ರಾಜ್ಯದ 25 ಜನ ಬಿಜೆಪಿ ಸಂಸದರಾಗಲಿ, ಬಿಜೆಪಿ ಸರಕಾರವಾಗಲಿ ಕೇಂದ್ರದ ಮೇಲೆ ಒತ್ತಡ ಹೇರಿ ಆ ಅನುದಾನ ಪಡೆಯುವ ಕೆಲಸ ಮಾಡಿಲ್ಲ. ರಾಜ್ಯದ ತೆರಿಗೆ ಪಾಲನ್ನು ಶೇ.1.07ರಷ್ಟು ಕಡಿತ ಮಾಡಲಾಗಿದೆ. ಇದರಿಂದ ರಾಜ್ಯ ಸಾಲ ಮಾಡಬೇಕಾಗಿ ಬಂದಿದೆ. ಸ್ವಾತಂತ್ರ್ಯ ನಂತರದಿಂದ ನಮ್ಮ ಸರಕಾರದ ಕೊನೆಯ ಬಜೆಟ್ ವರೆಗೆ ರಾಜ್ಯದ ಮೇಲಿದ್ದ ಒಟ್ಟು ಸಾಲ 2 ಲಕ್ಷದ 42 ಸಾವಿರ ಕೋಟಿ. ಇದು ಈ ವರ್ಷದ ಮಾರ್ಚ್ ಅತ್ಯಂದ ವೇಳೆಗೆ 5 ಲಕ್ಷದ 40 ಸಾವಿರ ಕೋಟಿ ದಾಟಲಿದೆ ಎಂದು ಅವರು ಹೇಳಿದರು.

ಇಂದು ಪ್ರತಿ ಕನ್ನಡಿಗನ ಮೇಲೆ 86 ಸಾವಿರ ರೂ.ಸಾಲ ಇದೆ. ಹೀಗಾದರೆ ರಾಜ್ಯ ಉಳಿಯುತ್ತಾ? ಈ ರಾಜ್ಯವನ್ನು ಉಳಿಸಲು, ಜನರ ಕಷ್ಟವನ್ನು ಪರಿಹಾರ ಮಾಡಲು, ರಾಜ್ಯವನ್ನು ಭ್ರಷ್ಟಾಚಾರ ಮುಕ್ತ ಮಾಡಲು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬೇಕು. ಈ ಹಿನ್ನೆಲೆಯಲ್ಲಿ ನಾವು ಜನರನ್ನು ಭೇಟಿ ಮಾಡಿ ಅವರ ಸಮಸ್ಯೆಗಳಿಗೆ, ಆಶೋತ್ತರಗಳಿಗೆ ಧ್ವನಿಯಾಗಬೇಕು ಎಂದು ಪ್ರಜಾಧ್ವನಿ ಯಾತ್ರೆಯನ್ನು ಹಮ್ಮಿಕೊಂಡಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದರು.

ಮೊದಲ ಹಂತದಲ್ಲಿ ಜಿಲ್ಲಾ ಮಟ್ಟದಲ್ಲಿ ಯಾತ್ರೆ ಮಾಡಿ, ನಂತರ ಸಮಯದ ಅಭಾವ ಇರುವುದರಿಂದ 2 ತಂಡಗಳಾಗಿ ವಿಂಗಡಿಸಿ ಯಾತ್ರೆ ಮಾಡಲಿದ್ದೇವೆ. ಶಿವಕುಮಾರ್ ಹಾಗೂ ಇತರೆ ಹಿರಿಯ ನಾಯಕರ ನೇತೃತ್ವದಲ್ಲಿ ಒಂದು ತಂಡ ಮತ್ತು ನಾನು ಹಾಗೂ ಪಕ್ಷದ ಹಿರಿಯ ನಾಯಕರನ್ನು ಒಳಗೊಂಡ ಇನ್ನೊಂದು ತಂಡ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಭೇಟಿ ನೀಡುತ್ತೇವೆ ಎಂದು ಅವರು ಹೇಳಿದರು.

ಮೊದಲ ಹಂತದಲ್ಲಿ ಹೈದ್ರಾಬಾದ್ ಕರ್ನಾಟಕ ಭಾಗಕ್ಕೆ ಭೇಟಿ ನೀಡಲಿದೆ. ಡಿ.ಕೆ.ಶಿವಕುಮಾರ್ ಅವರ ತಂಡ ಹಳೆ ಮೈಸೂರು ಭಾಗದಲ್ಲಿ ಯಾತ್ರೆ ನಡೆಸಲಿದೆ. ಎರಡನೆ ಹಂತದ ಪ್ರವಾಸದಲ್ಲಿ ನಮ್ಮ ತಂಡ ಹಳೆ ಮೈಸೂರು ಭಾಗದಲ್ಲಿ ಯಾತ್ರೆ ಮಾಡಲಿದೆ. ಶಿವಕುಮಾರ್ ಅವರ ತಂಡ ಉತ್ತರ ಕರ್ನಾಟಕ ಭಾಗಕ್ಕೆ ಹೋಗಲಿದೆ. ಹೀಗೆ ರಾಜ್ಯದ ಮೂಲೆ ಮೂಲೆಗಳಿಗೆ ಭೇಟಿ ನೀಡಿ ರಾಜ್ಯ ಸರಕಾರದ ಭ್ರಷ್ಟಾಚಾರದ ಪುರಾಣ, ಸಾಲದ ಹೊರೆ, ದ್ವೇಷ ರಾಜಕಾರಣವನ್ನು ಜನರ ಮುಂದಿಡುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು.

share
Next Story
X