ಮಂಗಳೂರು: ತನಿಖಾ ಕೌಶಲ್ಯ ಅಭಿವೃದ್ಧಿ ಕುರಿತು ಕಾರ್ಯಾಗಾರ

ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವತಿಯಿಂದ ತನಿಖಾ ಕೌಶಲ್ಯ ಅಭಿವೃದ್ಧಿ ಕುರಿತು ಮಂಗಳವಾರ
ಪೊಲೀಸ್ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಕಾರ್ಯಾಗಾರ ನಡೆಯಿತು.
ಪುತ್ತೂರು ಪೊಕ್ಸೊ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ಪುಷ್ಪರಾಜ್ ಅಡ್ಯಂತಾಯ, ಕಾನೂನು ಅಧಿಕಾರಿ ಮೋಹನ್ ಕುಮಾರ್, ಫಾರೆನ್ಸಿಕ್ ತಜ್ಞ ಬಿ.ಸಿ.ರವೀಂದ್ರ, ತಜ್ಞರಾದ ಡಾ. ಬಾಲಾಜಿ, ಪ್ರಮೋದ್ ಆರ್. ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡಿದ್ದರು.
ಮಂಗಳೂರು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ದಿನೇಶ್ ಕುಮಾರ್ ಮತ್ತಿತರ ಅಧಿಕಾರಿ, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Next Story





