Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿದ್ಯುತ್ ಉತ್ಪಾದನೆ ಮಾಡುವ ತಂತ್ರಜ್ಞಾನ...

ವಿದ್ಯುತ್ ಉತ್ಪಾದನೆ ಮಾಡುವ ತಂತ್ರಜ್ಞಾನ ರಾಜ್ಯಕ್ಕೆ ವಿಸ್ತರಣೆ: ಸಚಿವ ಸುನಿಲ್ ಕುಮಾರ್

ಸುಳ್ಯದಲ್ಲಿ ತ್ಯಾಜ್ಯ ನಿರ್ವಹಣಾ ಘಟಕದ ಗ್ಯಾಸಿಫಿಕೇಶನ್ ಯಂತ್ರ ಉದ್ಘಾಟನೆ

10 Jan 2023 8:02 PM IST
share
ವಿದ್ಯುತ್ ಉತ್ಪಾದನೆ ಮಾಡುವ ತಂತ್ರಜ್ಞಾನ ರಾಜ್ಯಕ್ಕೆ ವಿಸ್ತರಣೆ: ಸಚಿವ ಸುನಿಲ್ ಕುಮಾರ್
ಸುಳ್ಯದಲ್ಲಿ ತ್ಯಾಜ್ಯ ನಿರ್ವಹಣಾ ಘಟಕದ ಗ್ಯಾಸಿಫಿಕೇಶನ್ ಯಂತ್ರ ಉದ್ಘಾಟನೆ

ಸುಳ್ಯ: ಹಲವು ಮೂಲಗಳಿಂದ ವಿದ್ಯುತ್ ಉತ್ಪಾದನೆ ಮಾಡುವ ಬಗ್ಗೆ ತಿಳಿದ್ದಿದ್ದೇವೆ. ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಮಾಡುವ ತಂತ್ರಜ್ಞಾನ ಅಭಿವೃದ್ದಿಪಡಿಸಲಾಗಿದ್ದು, ಇದನ್ನು ಸರಕಾರದ ಮಟ್ಟದಲ್ಲಿ ಚರ್ಚೆ ನಡೆಸಿ ರಾಜ್ಯಕ್ಕೆ ವಿಸ್ತರಣೆ ಮಾಡುವ ಯೋಜನೆ ರೂಪಿಸಲಾಗುವುದು ಎಂದು ಎಂದು ಇಂಧನ ಹಾಗು ಕನ್ನಡ ಸಂಸ್ಕೃತಿ ಇಲಾಖೆ ಹಾಗು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸುನಿಲ್ ಕುಮಾರ್ ತಿಳಿಸಿದ್ದಾರೆ.

ಸುಳ್ಯ ನಗರ ಪಂಚಾಯಿತಿಯ ಕಲ್ಚರ್ಪೆ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಅಳವಡಿಸಲಾದ ಗ್ಯಾಸಿಫಿಕೇಶನ್ ಯಂತ್ರದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಅಭಿವೃದ್ಧಿಯ ವೇಗಕ್ಕೆ ತಕ್ಕಂತೆ ತ್ಯಾಜ್ಯವು ಅತೀ ಹೆಚ್ಚು ಉತ್ಪಾದನೆಯಾಗುತ್ತದೆ. ಈ ರೀತಿ ಉತ್ಪಾದನೆಯಾದ ತ್ಯಾಜ್ಯವನ್ನು ವಿಲೇವಾರಿ ಮಾಡುವುದು ದೊಡ್ಡ ಸಮಸ್ಯೆ ಮತ್ತು ಸವಾಲು. ಇದೀಗ ಒಣ ಕಸದಿಂದ ವಿದ್ಯುತ್ ಉತ್ಪಾದನೆ ಮಾಡುವುದು ಅತ್ಯಂತ ಉತ್ತಮ ಬೆಳವಣಿಗೆ. ಯಾವ ರೀತಿ ಈ ತಂತ್ರಜ್ಞಾನವನ್ನು ಬಳಸಿಕೊಳ್ಳಬಹುದು ಎಂಬುದರ ಬಗ್ಗೆ ಇಲಾಖೆಗಳ ಅಧಿಕಾರಿಗಳ ಬಗ್ಗೆ ಚರ್ಚೆ ನಡೆಸುವುದಾಗಿ ಸಚಿವರು ಹೇಳಿದರು. ಈ ರೀತಿಯ ಕೌಶಲ್ಯ ಅಗತ್ಯ ಇದೆ. ಪ್ಲಾಸ್ಟಿಕ್ ಸಮಸ್ಯೆ,ತ್ಯಾಜ್ಯ ನಿರ್ವಹಣೆ ಬಲು ದೊಡ್ಡ ಸಮಸ್ಯೆಯಾಗಿದೆ ಇದಕ್ಕೆ ಪರಿಹಾರ ಹುಡುಕುವ ನಿಟ್ಟಿನಲ್ಲಿ ಸುಳ್ಯ ನಗರ ಪಂಚಾಯಿತಿ ನಡೆಸಿದ ಪ್ರಯತ್ನ ಅತ್ಯಂತ ಶ್ಲಾಘನೀಯ ಎಂದು ಅವರು ಹೇಳಿದರು.

ಬಂದರು,ಮೀನುಗಾರಿಕೆ ಮತ್ತು ಒಳನಾಡು ಜಲ ಸಾರಿಗೆ ಸಚಿವ ಎಸ್.ಅಂಗಾರ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಸುಳ್ಯ ನಗರ ಪಂಚಾಯಿತಿ ಅಧ್ಯಕ್ಷ ವಿನಯಕುಮಾರ್ ಕಂದಡ್ಕ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.

ಗ್ಯಾಸಿಫಿಕೇಶನ್ ಯಂತ್ರ ಅಳವಡಿಸಿದ ಪೆಟ್ರಿಕೋರ್ ಇಕೋ ಇನ್ನೇವೇಷನ್ಸ್ ಪ್ರೈ.ಲಿಮಿಟೆಡ್‍ನ ತಾಂತ್ರಿಕ ನಿರ್ದೇಶಕರಾದ ವೀರಪ್ಪ ವಿ.ಪಟ್ಟಣ ಶೆಟ್ಟಿ ಗ್ಯಾಸಿಫಿಕೇಶನ್ ಯಂತ್ರದ ಬಗ್ಗೆ ಮಾಹಿತಿ ನೀಡಿದರು.

ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್, ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ವಿ.ತೀರ್ಥರಾಮ, ಪರಿಸರ ತಜ್ಞ, ಗ್ರೀನ್ ಹೀರೋ ಆಪ್ ಇಂಡಿಯಾ ಡಾ.ಆರ್.ಕೆ.ನಾಯರ್, ತಹಶೀಲ್ದಾರ್ ಅನಿತಾಲಕ್ಷ್ಮಿ,ಸುಳ್ಯ ನಗರ ಪಂಚಾಯಿತಿ ಉಪಾಧ್ಯಕ್ಷೆ ಸರೋಜಿನಿ ಪೆಲ್ತಡ್ಕ, ಸ್ಥಾಯಿ ಸಮಿತಿ ಅಧ್ಯಕ್ಷೆ ಶೀಲಾ ಅರುಣ ಕುರುಂಜಿ, ನಗರ ಪಂಚಾಯಿತಿ ವಿಪಕ್ಷ ನಾಯಕ ಬಾಲಕೃಷ್ಣ ಭಟ್, ಮುಖ್ಯಾಧಿಕಾರಿ ಎಂ.ಎಚ್. ಸುಧಾಕರ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ನಗರ ಪಂಚಾಯಿತಿ ಸದಸ್ಯರಾದ ಎಂ.ವೆಂಕಪ್ಪ ಗೌಡ, ಬುದ್ಧ ನಾಯ್ಕ್, ಸುಧಾಕರ. ಕೆ, ಶಶಿಕಲಾ ನೀರಬಿದಿರೆ, ಬಾಲಕೃಷ್ಣ ರೈ, ಧೀರಾ ಕ್ರಾಸ್ತಾ, ಶಿಲ್ಪಾ ಸುದೇವ್, ಪ್ರವಿತಾ ಪ್ರಶಾಂತ್,ಸುಶೀಲಾ ಜಿನ್ನಪ್ಪ ಪೂಜಾರಿ, ನಾರಾಯಣ ಶಾಂತಿನಗರ,ಕಿಶೋರಿ ಶೇಠ್, ನಾಮನಿರ್ದೆಶಿತ ಸದಸ್ಯ ರೋಹಿತ್ ಕೊಯಿಂಗೋಡಿ,ಪ್ರಮುಖರಾದ ಹರೀಶ್ ಕಂಜಿಪಿಲಿ, ಶ್ರೀಪತಿ ಭಟ್, ಜಯಪ್ರಕಾಶ್ ಕುಂಚಡ್ಕ, ಸುನಿಲ್ ಕೇರ್ಪಳ, ವಿನೋದ್ ಲಸ್ರಾದೋ ಮತ್ತಿತರರು ಭಾಗವಹಿಸಿದ್ದರು. 

share
Next Story
X