Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಗಾಂಧಿ ಶಿಲ್ಪ ಬಝಾರ್ ಕರಕುಶಲ...

ಮಂಗಳೂರು: ಗಾಂಧಿ ಶಿಲ್ಪ ಬಝಾರ್ ಕರಕುಶಲ ಕಲೆಗಳ ಪ್ರದರ್ಶನಕ್ಕೆ ಸಂಸದರಿಂದ ಚಾಲನೆ

10 Jan 2023 8:29 PM IST
share
ಮಂಗಳೂರು: ಗಾಂಧಿ ಶಿಲ್ಪ ಬಝಾರ್ ಕರಕುಶಲ ಕಲೆಗಳ ಪ್ರದರ್ಶನಕ್ಕೆ ಸಂಸದರಿಂದ ಚಾಲನೆ

ಮಂಗಳೂರು: ಕೇಂದ್ರ ಸರಕಾರದ  ಜವಳಿ ಮಂತ್ರಾಲಯ ಹಾಗೂ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ ದೇಶದ ವಿವಿಧ ರಾಜ್ಯಗಳ ಕರಕುಶಲ ಕರ್ಮಿಗಳ ಕರಕುಶಲ ಕಲೆಗಳ ಗಾಂಧಿ ಶಿಲ್ಪ ಬಝಾರ್ ಪ್ರದರ್ಶನ ಮತ್ತು ಮಾರಾಟ ಮಳಿಗೆಯನ್ನು ಮಂಗಳವಾರ ನಗರದ ವುಡ್‌ಲ್ಯಾಂಡ್ ಹೋಟೆಲ್ ಆವರಣದಲ್ಲಿ ಸಂಸ ನಳಿನ್ ಕುಮಾರ್ ಕಟೀಲ್ ಅವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ  ಮಾತನಾಡಿದ ಅವರು, ಭಾರತ ದೇಶದಲ್ಲಿ ಪರಂಪರಾಗತವಾಗಿ ಬಂದಿರುವ ಕುಶಲಕರ್ಮಿ ವೃತ್ತಿಗಳು ಹಲವಿವೆ, ನಮ್ಮ ಪೂರ್ವಿಕರು ವಂಶಪಾರಂಪರ್ಯವಾಗಿ ಬೆಳೆಸಿಕೊಂಡು ಬಂದಿರುವ ಕರಕುಶಲ ವೃತ್ತಿಗಳು ಇಂದು ದೇಶದಿಂದ ದೇಶಕ್ಕೆ, ರಾಜ್ಯದಿಂದ ರಾಜ್ಯಕ್ಕೆ ಪರಿಚಯವಾಗಬೇಕೆಂಬ ದೃಷ್ಟಿಯಿಂದ ಈ ರೀತಿಯ ವಸ್ತು ಪ್ರದರ್ಶನವನ್ನು ಕೇಂದ್ರ ಹಾಗೂ ರಾಜ್ಯ ಸರಕಾರಗಳು  ಜೊತೆಯಾಗಿ ಆಯೋಜಿಸಿವೆ ಎಂದರು.

ಈ ಮೂಲಕ ಪ್ರಧಾನಮಂತ್ರಿಯವರ ’ಏಕ್ ಭಾರತ್ ಶ್ರೇಷ್ಠ ಭಾರತ್’ ಪರಿಕಲ್ಪನೆಯಡಿ ಇಂತಹ ವೃತ್ತಿ ಕೌಶಲಗಳನ್ನು ಬೇರೆ ಬೇರೆ ರಾಜ್ಯಗಳಲ್ಲಿ ಪರಿಚಯಿಸುವಂತಹ ಕಾರ್ಯ   ನಾವಿಂದು ಜಿ20 ಕಾಲಘಟ್ಟದಲ್ಲಿದ್ದು, ಪ್ರಧಾನಮಂತ್ರಿಯವರು ಲೋಕಲ್ ಫಾರ್ ವೋಕಲ್‌ಗೆ ಹೆಚ್ಚು ಆದ್ಯತೆ ನೀಡುತ್ತಿದ್ದಾರೆ. ಈ ಮೂಲಕ ಅವರು ಸ್ಥಳೀಯ ಪ್ರತಿಭೆಗಳ ನಿಪುಣತೆ ಮಾನ್ಯತೆ ನೀಡಿ, ಅವರ ಕರಕುಶಲ ವಸ್ತುಗಳಿಗೆ ಮಾರುಕಟ್ಟೆ ಒದಗಿಸುವ ಕಾರ್ಯ ಮಾಡಲಾಗುತ್ತಿದೆ ಎಂದು ಹೇಳಿದರು.

ರಾಜ್ಯ ಕರಕುಶಲ ಅಭಿವೃದ್ಧಿ ನಿಗಮ ನಿಯಮಿತ ವ್ಯವಸ್ಥಾಪಕ ನಿರ್ದೇಶಕಿ ರೂಪಾ ಮೌದ್ಗಿಲ್ ಮಾತನಾಡಿ, ದೇಶಾದ್ಯಂತ ವಿವಿಧ ರಾಜ್ಯಗಳ ನೂರು ಮಂದಿ ಕರಕುಶಲ ಕರ್ಮಿಗಳ ಮಳಿಗೆಗಳನ್ನು ಇಲ್ಲಿ ಹಾಕಲಾಗಿದೆ, ಅವುಗಳಲ್ಲಿ ರಾಜ್ಯದ 30 ಮಳಿಗೆಗಳಿವೆ. ಮಳಿಗೆಯನ್ನು ಸಂಪೂರ್ಣ ಉಚಿತವಾಗಿ ನೀಡಲಾಗಿದೆ. ಅಲ್ಲದೆ ಕರಕುಶಲ ಕರ್ಮಿಗಳಿಗೆ ವಸತಿ, ವಿದ್ಯುತ್  ವ್ಯವಸ್ಥೆಯನ್ನು ಉಚಿತವಾಗಿ ಒದಗಿಸಲಾಗಿದೆ ಎಂದರು.

ಜ.9 ರಿಂದ 18ರ ವರೆಗೆ ಬೆಳಗ್ಗೆ 10ರಿಂದ ರಾತ್ರಿ 8.30ವರೆಗೆ ಈ ಪ್ರದರ್ಶನ ಮತ್ತು ಮಾರಾಟ ಮಳಿಗೆ ತೆರೆದಿರುತ್ತದೆ. 10 ದಿನಗಳ ಕಾಲ ಕರಕುಶಲ ಪ್ರದರ್ಶನ ನಡೆಯುವ ಈ ಮಾರಾಟ ಮಳಿಗೆಯಲ್ಲಿ ಕರಕುಶಲ ಅಲಂಕಾರಿಕ ವಸ್ತುಗಳು, ಹ್ಯಾಂಡ್ ವರ್ಕ್ ಸೀರೆಗಳು, ಸೋಲಾಪುರ ಚಪ್ಪಲಿ, ಚೆನ್ನರಾಯಪಟ್ಟಣದ ಗೊಂಬೆಗಳು, ಹ್ಯಾಂಡ್ ಮೇಡ್ ಪೇಪರ್ ಕವರ್‌ಗಳು ಸೇರಿದಂತೆ ಹಲವಾರು ಕರಕುಶಲ ವಸ್ತುಗಳು ಈ ಪ್ರದರ್ಶನ ಮಳಿಗೆಯಲ್ಲಿದೆ.

share
Next Story
X