ವಿಟ್ಲ: ಎರಡು ಬೈಕ್ ಮುಖಾಮುಖಿ ಢಿಕ್ಕಿ; ಓರ್ವ ಗಂಭೀರ

ವಿಟ್ಲ: ಎರಡು ಬೈಕ್ ಗಳು ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಒಂದು ಬೈಕಿನ ಸವಾರ ಗಂಭೀರ ಗಾಯಗೊಂಡ ಘಟನೆ ವಿಟ್ಲ ಸಮೀಪದ ಉಕ್ಕುಡ ಎಂಬಲ್ಲಿ ಸಂಭವಿಸಿದೆ.
ವಿಟ್ಲ ಕಡೆಯಿಂದ ಕುದ್ದುಪದವು ಕಡೆಗೆ ತೆರಳುತ್ತಿದ್ದ ಬೈಕ್ ಮತ್ತು ಕುದ್ದುಪದವು ಕಡೆಯಿಂದ ಬರುತ್ತಿದ್ದ ಇನ್ನೊಂದು ಬೈಕ್ ನ ನಡುವೆ ಅಪಘಾತ ಸಂಭವಿಸಿದೆ.
ಒಂದು ಬೈಕಿನಲ್ಲಿ ಕುದ್ದುಪದವು ವೈದ್ಯರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.
ಸದ್ಯ ಅವರು ಪ್ರಾಣಾಪಾಯದಿಂಡ ಪಾರಾಗಿದ್ದಾರೆ. ಇನ್ನೊಂದು ಬೈಕಿನಲ್ಲಿದ್ದವರನ್ನು ಬಳ್ಳೂರು ನಿವಾಸಿಗಳೆಂದು ತಿಳಿದು ಬಂದಿದ್ದು, ಇಬ್ಬರ ಪೈಕಿ ಸಹಸವಾರ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
Next Story





