ಕಾರ್ಕಳ: ಪ್ರತ್ಯೇಕ ಪ್ರಕರಣ ಇಬ್ಬರು ಆತ್ಮಹತ್ಯೆ
ಕಾರ್ಕಳ: ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.ಕಾರ್ಕಳ ಸೂಡ ಗ್ರಾಮದ ಲಾಜರಸ್ ಡಿಸೋಜ (78) ಆತ್ಮಹತ್ಯೆ ಮಾಡಿಕೊಂಡಿದ್ದು, ಇವರು ಎರಡು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.
ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮತ್ತೊಂದು ಘಟನೆಯಲ್ಲಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಕಾರ್ಕಳ ಮುಂಡ್ಕೂರು ನಿವಾಸಿ ಸುಮತಿ (56) ಎಂಬವರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದು, ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





