Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎಲ್ಲೆಲ್ಲೂ ಸಿಟ್ಟು, ಭಯ ಮತ್ತು ಕಣ್ಣೀರು:...

ಎಲ್ಲೆಲ್ಲೂ ಸಿಟ್ಟು, ಭಯ ಮತ್ತು ಕಣ್ಣೀರು: ಭೂಕುಸಿತದಿಂದ ನೆಲಸಮವನ್ನು ಎದುರಿಸುತ್ತಿರುವ ಜೋಶಿಮಠ ನಿವಾಸಿಗಳು

10 Jan 2023 10:25 PM IST
share
ಎಲ್ಲೆಲ್ಲೂ ಸಿಟ್ಟು, ಭಯ ಮತ್ತು ಕಣ್ಣೀರು: ಭೂಕುಸಿತದಿಂದ ನೆಲಸಮವನ್ನು ಎದುರಿಸುತ್ತಿರುವ ಜೋಶಿಮಠ ನಿವಾಸಿಗಳು

ಡೆಹ್ರಾಡೂನ್, ಜ.10: ಪರಿಸರಸೂಕ್ಷ್ಮ ಪಟ್ಟಣವಾಗಿರುವ ಉತ್ತಾರಾಖಂಡದ ಜೋಶಿಮಠದಲ್ಲಿ ನಿರಂತರ ಭೂಕುಸಿತಗಳಿಂದಾಗಿ ಹೆಚ್ಚುತ್ತಿರುವ ಕಳವಳಗಳ ನಡುವೆಯೇ ಸ್ಥಳೀಯರು ತಾವು ದಶಕಗಳಿಂದಲೂ ಬಾಳಿ ಬದುಕಿದ್ದ ಮನೆಗಳನ್ನು ತೊರೆಯುವ ಅನಿವಾರ್ಯತೆಗೆ ಸಿಲುಕಿದ್ದಾರೆ.

ಅಧಿಕಾರಿಗಳು ನೆಲಸಮ ಕಾರ್ಯಾಚರಣೆಗೆ ಸಜ್ಜಾಗುತ್ತಿದ್ದು, ಪಟ್ಟಣವು ಭಾವನಾತ್ಮಕ ಸನ್ನಿವೇಶಗಳಿಗೆ ಸಾಕ್ಷಿಯಾಗುತ್ತಿದೆ. ಭೂಕುಸಿತಗಳನ್ನು ಜೋಶಿಮಠದಲ್ಲಿ ಮತ್ತು ಸುತ್ತುಮುತ್ತ ನಡೆಯುತ್ತಿರುವ ನಿರ್ಮಾಣ ಕಾಮಗಾರಿಗಳೊಂದಿಗೆ ತಳುಕು ಹಾಕಲಾಗಿದೆ. ಜೋಶಿಮಠ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಸರಣಿ ಸಭೆಗಳನ್ನು ನಡೆಸುತ್ತಿರುವ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿಯವರು, ಜನರ ಸುರಕ್ಷತೆಯು ಸರಕಾರದ ಅತ್ಯುನ್ನತ ಆದ್ಯತೆಯಾಗಿದೆ ಎಂದು ಒತ್ತಿ ಹೇಳಿದ್ದಾರೆ.

ಮಂಗಳವಾರ ಸರಕಾರಿ ಸ್ವಾಮ್ಯದ ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮ (ಎನ್‌ಟಿಪಿಸಿ)ದ ವಿರುದ್ಧ ಜೋಶಿಮಠದಲ್ಲಿ ಪ್ರತಿಭಟನೆಗಳು ನಡೆದಿದ್ದು,ಅದರ ತಪೋವನ-ವಿಷ್ಣುಗಡ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ನಿರ್ಮಾಣ ಕಾಮಗಾರಿಗಳು ಪರಿಸ್ಥಿತಿಯನ್ನು ಉಲ್ಬಣಿಸಿವೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ದೇಶದ ಅತ್ಯಂತ ದೊಡ್ಡ ವಿದ್ಯುತ್ ಉತ್ಪಾದಕನಾಗಿರುವ ಎನ್‌ಟಿಪಿಸಿ,ಜೋಶಿಮಠದಲ್ಲಿನ ಬಿರುಕುಗಳಿಗೆ ತನ್ನ ಸುರಂಗ ನಿರ್ಮಾಣ ಮತ್ತು ಇತರ ಕಾಮಗಾರಿಗಳನ್ನು ದೂಷಿಸುವಂತಿಲ್ಲ. ಸುರಂಗವು ಜೋಶಿಮಠದ ನೆಲದಡಿಯಿಂದ ಹಾದುಹೋಗಿಲ್ಲ ಎಂದು ತನ್ನ ಜ.5ರ ಹೇಳಿಕೆಯಲ್ಲಿ ಪ್ರತಿಪಾದಿಸಿತ್ತು.

ಅಂದಾಜು 20,000 ಜನಸಂಖ್ಯೆಯನ್ನು ಹೊಂದಿರುವ ಈ ಪುಟ್ಟ ಪಟ್ಟಣದಲ್ಲಿಯ ಕನಿಷ್ಠ 678 ಮನೆಗಳನ್ನು ಅಸುರಕ್ಷಿತವೆಂದು ಈವರೆಗೆ ಗುರುತಿಸಲಾಗಿದೆ. ಜಿಲ್ಲಾಡಳಿತವು ಇಂತಹ ಮನೆಗಳಿಗೆ ಕೆಂಪುಬಣ್ಣದ ಗುರುತುಗಳನ್ನು ಹಾಕುತ್ತಿದೆ.

ಹೋಟೆಲ್ ಮಲಾರಿ ಇನ್ ಮತ್ತು ಹೋಟೆಲ್ ಮೌಂಟ್ ವ್ಯೂಗಳನ್ನೂ ಗುರುತಿಸಲಾಗಿದ್ದು,ಈ ಪೈಕಿ ಮೊದಲ ಹೋಟೆಲ್‌ನ್ನು ಮಂಗಳವಾರ ಹಂತಹಂತವಾಗಿ ನೆಲಸಮಗೊಳಿಸಲಾಗಿದೆ.

ಪಟ್ಟಣದಲ್ಲಿಯ ಬಿರುಕು ಮೂಡಿರುವ ಮನೆಗಳು ಮತ್ತು ವಾಲಿ ನಿಂತಿರುವ ಕಟ್ಟಡಗಳ ಆಘಾತಕಾರಿ ದೃಶ್ಯಗಳು ಹೊರಹೊಮ್ಮುತ್ತಿವೆ. ಯಾತ್ರಿಕರು ಮಾತ್ರವಲ್ಲ,ಪ್ರವಾಸಿಗಳು ಮತ್ತು ಚಾರಣಿಗರೂ ಇಲ್ಲಿಗೆ ಭೇಟಿ ನೀಡುತ್ತಿರುತ್ತಾರೆ.

ಈ ನಡುವೆ,ಪ್ರಧಾನಿ ನರೇಂದ್ರ ಮೋದಿ ಸಂಕಷ್ಟ ಸ್ಥಿತಿಯ ಕುರಿತು ನಿಯಮಿತವಾಗಿ ಮಾಹಿತಿಗಳನ್ನು ಪಡೆದುಕೊಳ್ಳುತ್ತಿದ್ದಾರೆ ಎಂದು ಧಾಮಿ ತಿಳಿಸಿದ್ದಾರೆ.

ಪ್ರದೇಶದಲ್ಲಿಯ ಎಲ್ಲ ಒಂಭತ್ತು ಜಿಲ್ಲೆಗಳನ್ನು ಅಸುರಕ್ಷಿತ ಎಂದು ಸರಕಾರವು ರವಿವಾರ ಘೋಷಿಸಿತ್ತು. ಅದೇ ದಿನ ಪ್ರಧಾನಿ ಕಚೇರಿಯೂ ಪರಿಸ್ಥಿತಿಯ ಪುನರ್‌ಪರಿಶೀಲನೆಗೆ ಸಭೆಯನ್ನು ನಡೆಸಿತ್ತು. ಹಾಲಿ ಬೆಳವಣಿಗೆಯನ್ನು ಪ್ರತಿಕೂಲ ಹವಾಮಾನದ ಘಟನೆಗಳು ಮತ್ತು ಕ್ಷಿಪ್ರ ನಿರ್ಮಾಣ ಕಾಮಗಾರಿಗಳೊಂದಿಗೆ ತಳುಕು ಹಾಕಿರುವ ತಜ್ಞರು,ಈ ಎಲ್ಲ ವರ್ಷಗಳಲ್ಲಿ ಪರಿಸ್ಥಿತಿಯು ತೀವ್ರವಾಗಿ ಬಿಗಡಾಯಿಸಿದೆ ಎಂದು ಹೇಳಿದ್ದಾರೆ.

ಹೆಚ್ಚುತ್ತಿರುವ ಭೀತಿಯ ನಡುವೆಯೇ ಜೋಶಿಮಠ ಭೂಕುಸಿತವು ಸರ್ವೋಚ್ಚ ನ್ಯಾಯಾಲಯದ ಮೆಟ್ಟಿಲನ್ನೂ ಹತ್ತಿದೆ.

share
Next Story
X