Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2040ರ ವೇಳೆಗೆ ಜಾಗತಿಕ ಇಂಧನ...

2040ರ ವೇಳೆಗೆ ಜಾಗತಿಕ ಇಂಧನ ಬೇಡಿಕೆಯಲ್ಲಿ ಭಾರತದ ಪಾಲು ಶೇ.25ರಷ್ಟಿರಲಿದೆ: ಕೇಂದ್ರ ಸಚಿವ

10 Jan 2023 10:32 PM IST
share
2040ರ ವೇಳೆಗೆ ಜಾಗತಿಕ ಇಂಧನ ಬೇಡಿಕೆಯಲ್ಲಿ ಭಾರತದ ಪಾಲು ಶೇ.25ರಷ್ಟಿರಲಿದೆ: ಕೇಂದ್ರ ಸಚಿವ

ಹೊಸದಿಲ್ಲಿ, ಜ.10: 2040ರ ವೇಳೆಗೆ ಜಾಗತಿಕ ಇಂಧನ ಬೇಡಿಕೆಯಲ್ಲಿ ಭಾರತದ ಪಾಲು ಶೇ.25ರಷ್ಟಿರಲಿದೆ ಮತ್ತು 2025ರ ವೇಳೆಗೆ ಪೆಟ್ರೋಲ್‌ನಲ್ಲಿ ಶೇ.20ರಷ್ಟು ಈಥೆನಾಲ್ ಮಿಶ್ರಣವನ್ನು ಸಾಧಿಸಲಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಮಂಗಳವಾರ ಹೇಳಿದರು.

2013-14ರಲ್ಲಿ ಪೆಟ್ರೋಲ್‌ನಲ್ಲಿ ಶೇ.1.53ರಷ್ಟಿದ್ದ ಈಥೆನಾಲ್ ಮಿಶ್ರಣ ಪ್ರಮಾಣವನ್ನು 2022ರಲ್ಲಿ ಶೇ.10.17ಕ್ಕೆ ಹೆಚ್ಚಿಸಿರುವುದಕ್ಕೆ ಒತ್ತು ನೀಡಿದ ಅವರು,2030ರಲ್ಲಿ ಶೇ.20ರಷ್ಟು ಈಥೆನಾಲ್ ಮಿಶ್ರಣವನ್ನು ಸಾಧಿಸುವ ತನ್ನ ಗುರಿಯನ್ನು ಸರಕಾರವು 2025-26ಕ್ಕೆ ಪರಿಷ್ಕರಿಸಿದೆ ಎಂದು ತಿಳಿಸಿದರು.

 2006-07ರಲ್ಲಿ 27 ದೇಶಗಳು ಭಾರತಕ್ಕೆ ಕಚ್ಚಾತೈಲವನ್ನು ಪೂರೈಸುತ್ತಿದ್ದವು,ಸರಕಾರವು 2021-22ರಲ್ಲಿ ಅವುಗಳ ಸಂಖ್ಯೆಯನ್ನು 39ಕ್ಕೆ ಹೆಚ್ಚಿಸಿದೆ. ಕೊಲಂಬಿಯಾ,ರಶ್ಯಾ,ಲಿಬಿಯಾ, ಗಬನ್ ಮತ್ತು ಇಕ್ವೆಟೋರಿಯಲ್ ಗಿನಿಯಂತಹ ದೇಶಗಳು ಕಚ್ಚಾತೈಲ ಪೂರೈಕೆಯ ಹೊಸ ದೇಶಗಳಾಗಿವೆ ಎಂದು ಹೇಳಿದ ಪುರಿ,ಇದೇ ವೇಳೆ ಭಾರತವು ಅಮೆರಿಕ ಮತ್ತು ರಶ್ಯಾದಂತಹ ದೇಶಗಳೊಂದಿಗೆ ತನ್ನ ಸಂಬಂಧವನ್ನು ಇನ್ನಷ್ಟು ಬಲಗೊಳಿಸಿಕೊಂಡಿದೆ ಎಂದು ಹೇಳಿದರು.

ಹರ್ಯಾಣದ ಪಾನಿಪತ್,ಪಂಜಾಬಿನ ಬಠಿಂಡಾ,ಒಡಿಶಾದ ಬರಗಡ,ಅಸ್ಸಾಮಿನ ನುಮಾಲಿಗಡ ಮತ್ತು ಕರ್ನಾಟಕದ ದಾವಣಗೆರೆಗಳಲ್ಲಿ 2ಜಿ ಈಥೆನಾಲ್ ಬಯೊರಿಫೈನರಿಗಳನ್ನು ಸರಕಾರವು ಸ್ಥಾಪಿಸಲಿದೆ ಎಂದರು.

ಇ20 ಇಂಧನದ ಕುರಿತು ಮಾಹಿತಿ ನೀಡಿದ ಅವರು,ಇ20 ಇಂಧನವು 2023,ಎ.1ರಿಂದ ಹಂತ ಹಂತವಾಗಿ ಬಿಡುಗಡೆಯಾಗಲಿದೆ. ಇ20 ಇಂಧನವು ಶೇ.20ರಷ್ಟು ಈಥೆನಾಲ್ ಮತ್ತು ಶೇ.80ರಷ್ಟು ಪಳೆಯುಳಿಕೆ ಆಧಾರಿತ ತೈಲದ ಮಿಶ್ರಣವಾಗಿದೆ. ಇ20 ಇಂಧನದ ಯೋಜಿತ ಬಿಡುಗಡೆಯು ಪಳೆಯುಳಿಕೆ ಆಧಾರಿತ ಇಂಧನಗಳ ಮೇಲಿನ ಅವಲಂಬನೆಯನ್ನು ಹಾಗು ವಾಹನಗಳಿಂದ ವಾಯುಮಾಲಿನ್ಯವನ್ನು ತಗ್ಗಿಸುವ ಉದ್ದೇಶವನ್ನು ಹೊಂದಿದೆ ಎಂದು ತಿಳಿಸಿದರು.

share
Next Story
X