Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ಸಂಪಾದಕೀಯ
  4. ಪರಿಸರ ಸಂರಕ್ಷಣೆ ಕಾನೂನು ಬಿಗಿಯಾಗಿರಬೇಕು

ಪರಿಸರ ಸಂರಕ್ಷಣೆ ಕಾನೂನು ಬಿಗಿಯಾಗಿರಬೇಕು

11 Jan 2023 9:39 AM IST
share
ಪರಿಸರ ಸಂರಕ್ಷಣೆ ಕಾನೂನು ಬಿಗಿಯಾಗಿರಬೇಕು

ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ 

ಅಭಿವೃದ್ಧಿಯ ಹೆಸರಿನಲ್ಲಿ ಪರಿಸರಕ್ಕೆ ಮಾರಕವಾಗುವ ಯೋಜನೆಗಳನ್ನು ಕೈಗೊಳ್ಳುವುದರಿಂದ ಎಂತಹ ಅನಾಹುತ ಉಂಟಾಗುತ್ತದೆ ಎಂಬುದಕ್ಕೆ ಉತ್ತರಾ ಖಂಡದ ಜೋಶಿಮಠ ಪಟ್ಟಣ ಕಣ್ಣ ಮುಂದಿನ ಉದಾಹರಣೆಯಾಗಿದೆ. ತೀವ್ರ ಭೂ ಕುಸಿತದಿಂದ ತತ್ತರಿಸಿರುವ ಈ ಊರಿನ ಮನೆಗಳು, ರಸ್ತೆಗಳು, ಮತ್ತಿತರ ಕಡೆ ಭೂಮಿ ಬಿರುಕು ಬಿಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ. ೬೦೦ಕ್ಕೂ ಹೆಚ್ಚು ಮನೆಗಳು ಬಿರುಕು ಬಿಟ್ಟಿರುವುದು ಉಪಗ್ರಹ ಸರ್ವೇಕ್ಷಣೆಯಲ್ಲಿ ಕಂಡು ಬಂದಿದೆ.ಸುಮಾರು ನಾಲ್ಕು ಸಾವಿರ ಸಂತ್ರಸ್ತರನ್ನು ಸುರಕ್ಷಿತ ತಾಣಗಳಿಗೆ ಸಾಗಿಸಲಾಗಿದೆ. ಇನ್ನೂ ಹಲವರನ್ನು ಸಾಗಿಸಬೇಕಾಗಿದೆ. ಹಿಮಾಲಯ ಪರ್ವತ ಶ್ರೇಣಿಯ ಕೆಳ ಭಾಗದಲ್ಲಿ ಇರುವ ಜೋಶಿಮಠ ಭಾರತದ ಹಲವಾರು ಧಾರ್ಮಿಕ ಕೇಂದ್ರಗಳಿಗೆ ಪ್ರವೇಶ ದ್ವಾರವೆಂದು ಹೆಸರಾಗಿದೆ. ಇದು ಚೀನಾ ಗಡಿಯ ಹತ್ತಿರದಲ್ಲಿ ಇರುವ ಆಯಕಟ್ಟಿನ ಜಾಗವಾಗಿದೆ. ಇಂತಹ ಪಟ್ಟಣ ಈಗ ಸಂಪೂರ್ಣ ನಾಶವಾಗಿ ಹೋಗುವ ಭೀತಿಯನ್ನು ಎದುರಿಸುತ್ತಿದೆ.

ಇದು  ಆಕಸ್ಮಿಕವಾಗಿ ಉಂಟಾದ ಅನಾಹುತವಲ್ಲ. ಈ ಸೂಕ್ಷ್ಮ ಪ್ರದೇಶದಲ್ಲಿ ಲಂಗು ಲಂಗಾಮಿಲ್ಲದ ನಿರ್ಮಾಣ ಚಟುವಟಿಕೆಗಳು ನಡೆಯುತ್ತಿರುವುದರಿಂದ ಪರಿಸ್ಥಿತಿ ಹದಗೆಡಬಹುದು ಎಂದು ಎರಡು ದಶಕಗಳ ಹಿಂದೆಯೇ ವಿಜ್ಞಾನಿಗಳು ಹಾಗೂ ಭೂಗರ್ಭ ಶಾಸ್ತ್ರಜ್ಞರು ಎಚ್ಚರಿಕೆ ನೀಡುತ್ತ ಬಂದಿದ್ದರು. ಈ ಕುರಿತು ಅಧ್ಯಯನ ನಡೆಸಿದ ಮಿಶ್ರಾ ಆಯೋಗ ನಿರ್ಮಾಣ ಚಟುವಟಿಕೆಗಳನ್ನು ನಿಷೇಧಿಸಲು ಶಿಫಾರಸು ಮಾಡಿತ್ತು. ಆದರೆ ವಿಜ್ಞಾನಿಗಳ ಎಚ್ಚರಿಕೆ ಮತ್ತು ಆಯೋಗದ ಶಿಫಾರಸುಗಳನ್ನು ಅಧಿಕಾರದಲ್ಲಿರುವವರು ನಿರ್ಲಕ್ಷ್ಯ ಮಾಡುತ್ತ ಬಂದರು. ರಾಷ್ಟ್ರೀಯ ಹೆದ್ದಾರಿಯ ಅಗಲೀಕರಣ ಮತ್ತು ವಿದ್ಯುತ್ ಉತ್ಪಾದನಾ ಯೋಜನೆಗಳು ಅವಿರತವಾಗಿ ನಡೆದವು. ಇಷ್ಟೇ ಅಲ್ಲ ಜೋಶಿಮಠದಲ್ಲಿ ಉಂಟಾಗಬಹುದಾದ ಅನಾಹುತಗಳ ಬಗ್ಗೆ ನ್ಯಾಶನಲ್ ರಿಮೋಟ್ ಸೆನ್ಸಿಂಗ್ ಎಜೆನ್ಸಿ (ಎಸ್.ಆರ್.ಎಸ್.ಎ.) ಸೇರಿದಂತೆ ಹನ್ನೆರಡು ಹೆಸರಾಂತ ವೈಜ್ಞಾನಿಕ ಸಂಸ್ಥೆಗಳು  ಎಚ್ಚರಿಕೆ ನೀಡಿದ್ದವು. ಆದರೆ ಸರಕಾರ ಕಿವುಡಾಗಿತ್ತು. ಕಣ್ಣಿಗೆ ಕಟ್ಟಿಕೊಂಡ ಅಭಿವೃದ್ಧಿಯ ಕಪ್ಪುಪಟ್ಟಿ ಅಂಧತ್ವವನ್ನು ತಂದಿತ್ತು

ಹಿಮಾಲಯ ಪರ್ವತ ಶ್ರೇಣಿಯ ಕೆಳಭಾಗದಲ್ಲಿ ಇರುವ ಜೋಶಿ ಮಠದಲ್ಲಿ  ಭಾರೀ ಪ್ರಮಾಣದ ನಿರ್ಮಾಣ ಕಾಮಗಾರಿಗಳನ್ನು ಕೈಗೊಂಡಿದ್ದರಿಂದ ಸೂಕ್ಷ್ಮ ಪರ್ವತ ಪ್ರದೇಶದ ಇಳಿಜಾರುಗಳಲ್ಲಿ ನೀರಿನ ಸಹಜ ಹರಿವಿಗೆ ಅಡ್ಡಿಯುಂಟಾಯಿತು. ಬ್ರಹತ್  ಪ್ರಮಾಣದ ಜಲ ವಿದ್ಯುತ್ ಯೋಜನೆ ಮಾತ್ರವಲ್ಲ ಚಾರಧಾಮ್ ಹೆದ್ದಾರಿ ಯೋಜನೆ  ಆ ಪ್ರದೇಶದ ಧಾರಣಾ ಸಾಮರ್ಥ್ಯಕ್ಕಿಂತ ಹೆಚ್ಚಿನ ಒತ್ತಡವನ್ನು ಸೃಷ್ಟಿಸಿತು. ಹೀಗಾಗಿ ಇತ್ತೀಚೆಗೆ ಪದೇ ಪದೇ  ಭೂ ಕುಸಿತ ಸಂಭವಿಸುತ್ತಲೇ ಬಂತು.

ಪ್ರಧಾನಿ ಕಚೇರಿ ಈ ಬಗ್ಗೆ ಆಸಕ್ತಿ ವಹಿಸಿದೆ. ಪರಿಹಾರ ಕಾರ್ಯಗಳು ನಡೆಯುತ್ತಿವೆ. ಇನ್ನೂ ಸಾವಿರಾರು ಜನರನ್ನು ಸ್ಥಳಾಂತರ ಮಾಡಬೇಕಿದೆ. ಜೋಶಿ ಮಠ ಮುಂದೆ ಮನುಷ್ಯ ವಾಸಕ್ಕೆ ಯೋಗ್ಯವಾಗಿ ಉಳಿಯಲಿದೆಯೇ ಎಂಬುದು ಸ್ಪಷ್ಟವಾಗಿಲ್ಲ. ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರಕಾರ ಧಾರ್ಮಿಕ ಕ್ಷೇತ್ರಗಳಿಗೆ ಹೋಗಲು ಅನುಕೂಲವಾಗಲಿ ಎಂದು  ಚಾರಧಾಮ್ ಹೆದ್ದಾರಿ ಯೋಜನೆಯನ್ನು ಕೈಗೊಂಡಿದ್ದು ನಿಸರ್ಗದ ಮೇಲೆ ಭಾರೀ ಹೊರೆಯಾಗಿ ಪರಿಣಮಿಸಿತು. ಇಂತಹ ಪರಿಸರ ಮಾರಕ ಯೋಜನೆಗಳ ಬಗ್ಗೆ ವಿರೋಧ ವ್ಯಕ್ತಪಡಿಸುತ್ತಲೇ ಬಂದ ಪರಿಸರವಾದಿಗಳನ್ನು ಅಭಿವೃದ್ಧಿ ವಿರೋಧಿಗಳು ಎಂದು ಬಿಂಬಿಸಲಾಯಿತು.ಇದೆಲ್ಲದರ ಪರಿಣಾಮ ಈಗ ಜೋಶಿಮಠ ಅಳಿವಿನ ಅಂಚಿಗೆ ತಲುಪಲು ಕಾರಣವಾಗಿದೆ.

ಕೇಂದ್ರದಲ್ಲಿ ನರೇಂದ್ರ ಮೋದಿಯವರ ಸರಕಾರ ಅಸ್ತಿತ್ವಕ್ಕೆ ಬಂದ ನಂತರ ಪರಿಸರ ಸಂರಕ್ಷಣೆಗೆ ಸಂಬಂಧಿಸಿದ ಕಾಯ್ದೆಗಳನ್ನು ದುರ್ಬಲಗೊಳಿಸುತ್ತ ಬರಲಾಗಿದೆ. ಇತ್ತೀಚೆಗೆ ಪರಿಸರ ಸಂರಕ್ಷಣೆಗೆ ಸಂಬಂಧಿಸಿದ ಮೂರು ಮಹತ್ವದ ಕಾಯ್ದೆಗಳಲ್ಲಿ  ಶಿಕ್ಷೆಗೆ ಸಂಬಂಧಿಸಿದ ಕೆಲವು ನಿಯಮಗಳನ್ನು ಕೈ ಬಿಡಲು ಸರಕಾರ ಮುಂದಾಗಿರುವುದು ಆತಂಕದ ಸಂಗತಿಯಾಗಿದೆ. ೧೯೮೬ರ ಜಲ ಮತ್ತು ವಾಯು ಕಾಯ್ದೆಗಳಿಂದ  ಶಿಕ್ಷೆಗೆ ಸಂಬಂಧಿಸಿದ ಕೆಲವು ನಿಯಮಗಳನ್ನು ತೆಗೆಯಲು ಹೊರಟಿದ್ದು ಸರಿಯಲ್ಲ. ಹೀಗೆ ಪರಿಸರ ಸಂರಕ್ಷಣಾ ಕಾಯ್ದೆಗಳನ್ನು ದುರ್ಬಲಗೊಳಿಸುತ್ತ ಹೋದರೆ ಜೋಶಿ ಮಠದಂತಹ ಅನಾಹುತಗಳನ್ನು ತಡೆಯಲು ಸಾಧ್ಯವಿಲ್ಲ.

ಸರಕಾರದ ಅವೈಜ್ಞಾನಿಕ ಅಭಿವೃದ್ಧಿ ಯೋಜನೆಗಳು ಮತ್ತು ಹಲವಾರು ಖಾಸಗಿ ಉದ್ಯಮಗಳ ಪರಿಣಾಮವಾಗಿ ಪರಿಸರದ ಮೇಲೆ  ಕೆಟ್ಟ ಪರಿಣಾಮ ಉಂಟಾಗುತ್ತಿದೆ. ಪರಿಸರ ಕಾಯ್ದೆಗಳನ್ನು ದುರ್ಬಲಗೊಳಿಸಿದರೆ ಯಾವ ಹೆದರಿಕೆಯೂ ಇಲ್ಲದೆ ಅರಣ್ಯ ನಾಶ ಅವ್ಯಾಹತವಾಗಿ ನಡೆಯಲಿದೆ. ಪರಿಸರ ರಕ್ಷಣೆಯ ವಿಷಯದಲ್ಲಿ ಶಿಕ್ಷೆಯ ಪ್ರಮಾಣವನ್ನು ಕಡಿಮೆ ಮಾಡಿ ಇಲ್ಲವೇ ರದ್ದು ಗೊಳಿಸುವುದರಿಂದ ಜೈಲು ಶಿಕ್ಷೆಯ ಭೀತಿ ತಪ್ಪಿಎಷ್ಟಾದರೂ ದಂಡ ಕಟ್ಟಿದರೆ ನಡೆಯುತ್ತದೆ ಎಂದಾದಾಗ ಪರಿಸರ ನಾಶಕ್ಕೆ ಕಡಿವಾಣ ಇಲ್ಲದಂತಾಗುತ್ತದೆ.

ಪರಿಸರ ಸಂರಕ್ಷಣಾ ಕಾಯ್ದೆಗಳನ್ನು ಹೀಗೆ ದುರ್ಬಲ ಗೊಳಿಸುತ್ತ ಹೋದರೆ ಉತ್ತರಾ ಖಂಡದ ಜೋಶಿ ಮಠದಂಥ ಅನಾಹುತಗಳು ದೇಶದ ಎಲ್ಲೆಡೆ ಸಂಭವಿಸುತ್ತವೆ. ಅದಕ್ಕೆ ಅವಕಾಶ ಮಾಡಿಕೊಡಬಾರದು. ಅಲ್ಲದೆ ಸರಕಾರ ಅವೈಜ್ಞಾನಿಕವಾದ ಅಭಿವೃದ್ಧಿ ಯೋಜನೆಗಳನ್ನು ಕೈ ಬಿಡಬೇಕು. ಕರ್ನಾಟಕದ ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಕೂಡ ಅಭಿವೃದ್ಧಿ ಯೋಜನೆಗಳ ಪರಿಣಾಮವಾಗಿ ಬರಲಿರುವ ದಿನಗಳಲ್ಲಿ ಸಾಕಷ್ಟು ದುಷ್ಪರಿಣಾಮ ಉಂಟಾಗಬಹುದು

ಜನಸಾಮಾನ್ಯರಿಗೆ ಮತ್ತು ಅರಣ್ಯ ನಿವಾಸಿಗಳಿಗೆ ಮೂಲಭೂತ ಸೌಕರ್ಯಗಳು ಬೇಕು. ಆದರೆ ಇದಕ್ಕಾಗಿ ಬಹುದೊಡ್ಡ ಅಭಿವೃದ್ಧಿ ಯೋಜನೆಗಳನ್ನು ಕೈಗೊಳ್ಳುವುದು ಸರಿಯಲ್ಲ. ವಾಸ್ತವವಾಗಿ ಜನರಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಹೆಸರಿನಲ್ಲಿ ಪರಿಸರ ಮಾರಕ ಉದ್ದಿಮೆಗಳನ್ನು, ರೆಸಾರ್ಟ್‌ಗಳನ್ನು ಮಾಡಲು ಅವಕಾಶ ಮಾಡಿಕೊಡುವುದರಿಂದ ನಿಸರ್ಗ ತತ್ತರಿಸಿ ಹೋಗಿದೆ. ಪರಿಸರ ಮಾಲಿನ್ಯ,ಜಲ ಮಾಲಿನ್ಯಗಳು ವಾತಾವರಣವನ್ನು ಅಸಹನೀಯಗೊಳಿಸುತ್ತಿವೆ. ಇಂತಹ ಅಪಾಯಕಾರಿ ಯೋಜನೆಗಳನ್ನು ವಿರೋಧಿಸುವವರನ್ನು ರಾಷ್ಟ್ರ ವಿರೋಧಿಗಳೆಂದು ಹೆಸರಿಸಿ ಬಾಯಿ ಮುಚ್ಚಿಸುವುದು ಈಗ ಅಧಿಕಾರದಲ್ಲಿ ಇರುವ ಪಕ್ಷದ ಚಾಳಿಯಾಗಿದೆ.ಇನ್ನು ಮುಂದಾದರೂ ಇಂತಹ ಪರಿಸರ ಮಾರಕ ಯೋಜನೆಗಳನ್ನು ಕೈ ಬಿಡುವುದು ಸೂಕ್ತ.

share
Next Story
X