ಯುವ ದೇಹದಾರ್ಢ್ಯಪಟು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಯುವ ದೇಹದಾರ್ಢ್ಯಪಟುವೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಕೆ.ಆರ್.ಪುರಂ ಬಳಿಯ ಹೀರಂಡಹಳ್ಳಿಯಲ್ಲಿ ಎಂಬಲ್ಲಿ ನಡೆದಿರುವುದಾಗಿ ವರದಿಯಾಗಿದೆ.
ಕೋಲಾರದ ಶ್ರೀನಿವಾಸಪುರದ ನಿವಾಸಿ ಶ್ರೀನಾಥ್ ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ.
ಶ್ರೀನಾಥ್ ಅವರು ಈಸ್ಟ್ ಪಾಯಿಂಟ್ ಕಾಲೇಜಿನಲ್ಲಿ ಓದುತ್ತಿದ್ದರು. ಜೊತೆಗೆ ದೇಹದಾರ್ಢ್ಯ ಸ್ಪರ್ಧೆಗಳಲ್ಲೂ ಭಾಗಿಯಾಗುತ್ತಿದ್ದರು. ಆದರೆ, ತಾನು ವಾಸವಿದ್ದ ಕೊಠಡಿಯಲ್ಲಿ ಮಂಗಳವಾರ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಶ್ರೀನಾಥ್ ಪೋಷಕರು ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ಪೊಲೀಸ್ ದೂರು ನೀಡಿದ್ದಾರೆ.
ಈ ಸಂಬಂಧ ಅವಲಹಳ್ಳಿ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
Next Story





