Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭೋಪಾಲ್‌ ಅನಿಲ ದುರಂತ: ಹೆಚ್ಚುವರಿ...

ಭೋಪಾಲ್‌ ಅನಿಲ ದುರಂತ: ಹೆಚ್ಚುವರಿ ಪರಿಹಾರ ಕೋರಿದ ಕೇಂದ್ರದ ಅರ್ಜಿ ಕುರಿತು ಸುಪ್ರೀಂ ತರಾಟೆ

11 Jan 2023 3:57 PM IST
share
ಭೋಪಾಲ್‌ ಅನಿಲ ದುರಂತ: ಹೆಚ್ಚುವರಿ ಪರಿಹಾರ ಕೋರಿದ ಕೇಂದ್ರದ ಅರ್ಜಿ ಕುರಿತು ಸುಪ್ರೀಂ ತರಾಟೆ

ಹೊಸದಿಲ್ಲಿ: ಭೋಪಾಲ್‌ ಅನಿಲ ದುರಂತದ (Bhopal Gas Tragedy) ಸಂತ್ರಸ್ತರಿಗೆ ಪರಿಹಾರ ನೀಡುವ ಸಲುವಾಗಿ ಯೂನಿಯನ್‌ ಕಾರ್ಬೈಡ್‌ ಕಾರ್ಪೊರೇಷನ್‌ ನಂತರ ಅದನ್ನು ನಡೆಸುತ್ತಿರುವ ಸಂಸ್ಥೆಗಳಿಂದ ಹೆಚ್ಚುವರಿ ರೂ. 7,844 ಕೋಟಿ ಕೋರಿರುವ ಕೇಂದ್ರದ ಅರ್ಜಿಯ ಕುರಿತಂತೆ ಸುಪ್ರೀಂ ಕೋರ್ಟ್‌ (Supreme Court) ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ನ್ಯಾಯಾಲಯವು ತನ್ನ ಕಾರ್ಯವ್ಯಾಪ್ತಿಯ ಕುರಿತಂತೆ ಬದ್ಧವಾಗಿದೆ ಹಾಗೂ ಕಂಪೆನಿಯೊಂದಕ್ಕೆ ಒಮ್ಮೆ ಒಂದು ಒಪ್ಪಂದಕ್ಕೆ ಬಂದ ನಂತರ 30 ವರ್ಷಗಳ ನಂತರ ಅದನ್ನು ಮರುಪರಿಶೀಲಿಸಲು ಸಾಧ್ಯವಿಲ್ಲ ಎಂದು ಹೇಳಿದೆ.

"ಅನುಮತಿ ಸಾಧ್ಯವಿಲ್ಲದ ಒಂದು ವಿಚಾರಕ್ಕೆ ಕೈಹಾಕಲು ನ್ಯಾಯಾಲಯಕ್ಕೆ ಸಾಧ್ಯವಿಲ್ಲ. ಎರಡೂ ಕಡೆಗಳು ಒಂದು ಒಪ್ಪಂದಕ್ಕೆ ಬಂದಿವೆ ಹಾಗೂ ನ್ಯಾಯಾಲಯ ಅದನ್ನು ಅನುಮೋದಿಸಿದೆ. ಆದರೆ ಈಗ ಅದನ್ನು ಮರುಪರಿಶೀಲಿಸಲು ಅನುಮತಿಸುವುದು ಸರಿಯಾಗದು. ಒಂದು ಪ್ರಕರಣದಲ್ಲಿ ನಮ್ಮ ತೀರ್ಮಾನ ವ್ಯಾಪಕ ಪರಿಣಾಮ ಬೀರಬಹುದು. ಎಂದು ಜಸ್ಟಸ್‌ ಸಂಜಯ್‌ ಕಿಶನ್‌ ಕೌಲ್‌ ಅವರ ನೇತೃತ್ವದ ಪಂಚ ಸದಸ್ಯರ ಸಂವಿಧಾನಿಕ ಪೀಠ ಹೇಳಿದೆ.

ಕೇಂದ್ರ ತನ್ನ ಕ್ಯುರೇಟಿವ್‌ ಅರ್ಜಿಯನ್ನು ಡಿಸೆಂಬರ್‌ 2010 ರಲ್ಲಿ ಉನ್ನತ ನ್ಯಾಯಾಲಯದಲ್ಲಿ ಸಲ್ಲಿಸಿ ಹೆಚ್ಚಿನ ಪರಿಹಾರ ಕೋರಿತ್ತು.

ಇದಕ್ಕೂ ಮೊದಲು ಜೂನ್‌ 7, 2010 ರಲ್ಲಿ ಭೋಪಾಲದ ನ್ಯಾಯಾಲಯವು ಯೂನಿಯನ್‌ ಕಾರ್ಬೈಡ್‌ ಸಂಸ್ಥೆಯ ಏಳು ಅಧಿಕಾರಿಗಳಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿತ್ತು.

 ಆಗಿನ ಯುನಿಯನ್‌ ಕಾರ್ಬೈಡ್‌ ಅಧ್ಯಕ್ಷ ವಾರೆನ್‌ ಆಂಡರ್ಸನ್‌  ಪ್ರಕರಣದ ಪ್ರಮುಖ ಆರೋಪಿಯಾಗಿದ್ದರೂ ಅತ ವಿಚಾರಣೆಗೆ ಹಾಜರಾಗಿರಲಿಲ್ಲ.

ಫೆಬ್ರವರಿ 1, 1992 ರಲ್ಲಿ ಭೋಪಾಲದ ಸಿಜೆಎಂ ನ್ಯಾಯಾಲಯ ಆತನನ್ನು ತಲೆಮರೆಸಿಕೊಂಡ ಆರೋಪಿ ಎಂದು ಘೋಷಿಸಿತ್ತು. ಆಂಡರ್ಸನ್‌ 2014 ರಲ್ಲಿ ಸಾವನ್ನಪ್ಪುವುದಕ್ಕಿಂತ ಮೊದಲು 1992 ಹಾಗೂ 2009 ರಲ್ಲಿ  ಆತನ ವಿರುದ್ಧ ಎರಡು ಬಾರಿ ಜಾಮೀನುರಹಿತ ವಾರಂಟ್‌ ಜಾರಿಯಾಗಿತ್ತು.

ಇದನ್ನೂ ಓದಿ: ಮಂಗಳೂರು | ಗಾಂಜಾ ಮಾರಾಟ: ಖಾಸಗಿ ವೈದ್ಯಕೀಯ ಕಾಲೇಜಿನ ವೈದ್ಯರು, ವಿದ್ಯಾರ್ಥಿಗಳು ಸಹಿತ 10 ಮಂದಿಯ ಬಂಧನ

share
Next Story
X