Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿಮಾನ ನಿಲ್ದಾಣದಿಂದ ವಾಪಸ್‌ ಕಳುಹಿಸಿದ್ದ...

ವಿಮಾನ ನಿಲ್ದಾಣದಿಂದ ವಾಪಸ್‌ ಕಳುಹಿಸಿದ್ದ ಘಟನೆಗೆ ಪ್ರಧಾನಿ ಕ್ಷಮೆಯಾಚಿಸಿದ್ದರು ಎಂದ ದರ್ಶನ್‌ ಸಿಂಗ್‌ ಧಲಿವಾಲ್‌

ಪ್ರತಿಭಟನಾ ನಿರತ ರೈತರಿಗೆ ಸಹಾಯ ಮಾಡಿದ್ದ ಅನಿವಾಸಿ ಭಾರತೀಯ

11 Jan 2023 5:42 PM IST
share
ವಿಮಾನ ನಿಲ್ದಾಣದಿಂದ ವಾಪಸ್‌ ಕಳುಹಿಸಿದ್ದ ಘಟನೆಗೆ ಪ್ರಧಾನಿ ಕ್ಷಮೆಯಾಚಿಸಿದ್ದರು ಎಂದ ದರ್ಶನ್‌ ಸಿಂಗ್‌ ಧಲಿವಾಲ್‌
ಪ್ರತಿಭಟನಾ ನಿರತ ರೈತರಿಗೆ ಸಹಾಯ ಮಾಡಿದ್ದ ಅನಿವಾಸಿ ಭಾರತೀಯ

ಹೊಸದಿಲ್ಲಿ: ಕೃಷಿ ಕಾಯಿದೆಯ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ರೈತರಿಗೆ ಲಂಗರ್‌ ಅಥವಾ ಸಮುದಾಯ ಪಾಕಶಾಲೆ ನಿರ್ಮಿಸಿ ಸಹಾಯ ಮಾಡಿದ್ದಕ್ಕಾಗಿ ಅಮೆರಿಕಾ ಮೂಲದ ಎನ್ನಾರೈ ದರ್ಶನ್‌ ಸಿಂಗ್‌ ಧಲಿವಾಲ್‌ (Darshan Singh Dhaliwal) ಅವರನ್ನು ಅಕ್ಟೋಬರ್‌ 23- 24, 2021 ರಂದು ದಿಲ್ಲಿ ವಿಮಾನ ನಿಲ್ದಾಣದಿಂದ ವಾಪಸ್‌ ಕಳುಹಿಸಿದ್ದು ಆ ಸಂದರ್ಭ ವ್ಯಾಪಕ ಸುದ್ದಿಯಾಗಿತ್ತು.

ಇದೀಗ ಅದೇ ಧಲಿವಾಲ್‌ ಅಚ್ಚರಿಯ ಮಾಹಿತಿಯೊಂದನ್ನು ನೀಡಿದ್ದಾರೆ. ಆ ಘಟನೆಗಾಗಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಕಳೆದ ಎಪ್ರಿಲ್‌ ತಿಂಗಳಿನಲ್ಲಿ "150 ಜನರ ಮುಂದೆ" ತಮ್ಮಿಂದ "ಕ್ಷಮೆಯಾಚಿಸಿದ್ದಾರೆ," ಎಂದು ಮಂಗಳವಾರ ಪ್ರವಾಸಿ ಭಾರತೀಯ ಸಮ್ಮಾನ್‌ ಪ್ರಶಸ್ತಿ ಸ್ವೀಕರಿಸಿದ ಧಲಿವಾಲ್‌ ಹೇಳಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪ್ರಶಸ್ತಿ ಸ್ವೀಕರಿಸಿದ ನಂತರ ಮಾಧ್ಯಮವೊಂದಕ್ಕೆ ಮಾತನಾಡಿದ ಧಲಿವಾಲ್‌,  ಕಳೆದ ಎಪ್ರಿಲ್‌ ತಿಂಗಳಿನಲ್ಲಿ ದಿಲ್ಲಿಯ ತಮ್ಮ ಅಧಿಕೃತ ನಿವಾಸದಲ್ಲಿ ದೊಡ್ಡ ಸಿಖ್‌ ಗುಂಪೊಂದರ ಜೊತೆ ಮೋದಿ ಸಂವಹನ ನಡೆಸುತ್ತಿದ್ದಾಗ ಈ ಘಟನೆ ನಡೆದಿದೆ ಎಂದಿದ್ದಾರೆ.

"ಹಮ್ಸೆ ಬಡೀ ಗಲ್ತಿ ಹೋ ಗಯಿ, ಆಪ್ಕೋ ಭೇಜ್‌ ದಿಯಾ, ಪರ್‌ ಆಪ್ಕಾ ಬಹುತ್‌ ಬಡಾ ಬಡಪ್ಪನ್‌ ಹೈ ಜೋ ಆಪ್‌ ಹಮಾರೆ ಕೆಹನೆ ಪೆ ಫಿರ್‌ ಭೀ ಆ ಗಯೇ" (ನಿಮ್ಮನ್ನು ವಾಪಸ್‌ ಕಳುಹಿಸಿದ್ದು ನಮ್ಮ ದೊಡ್ಡ ತಪ್ಪು, ಆದರೂ ನಮ್ಮ ಮನವಿಯಂತೆ ಇಂದು ಬಂದಿರುವುದು ನಿಮ್ಮ ಹೃದಯ ವೈಶಾಲ್ಯತೆಯನ್ನು ತೋರಿಸುತ್ತದೆ) ಎಂದು  ಧಲಿವಾಲ್‌ ಹೇಳಿದರು.

ಆ ನಿರ್ದಿಷ್ಟ ಸಭೆಯಲ್ಲಿ ಜಗತ್ತಿನಾದ್ಯಂತದ ಸಿಖ್‌ ಉದ್ಯಮಿಗಳು ಭಾಗವಹಿಸಿದ್ದರು ಎಂದು ಅವರು ಹೇಳಿದರು.

share
Next Story
X