Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಬಲ್ಮಠ ಸರಕಾರಿ ಪ್ರಥಮ ದರ್ಜೆ...

ಮಂಗಳೂರು: ಬಲ್ಮಠ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ನ್ಯಾಕ್ ‘ಎ’ ಮಾನ್ಯತೆ

11 Jan 2023 7:40 PM IST
share
ಮಂಗಳೂರು: ಬಲ್ಮಠ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ನ್ಯಾಕ್ ‘ಎ’ ಮಾನ್ಯತೆ

ಮಂಗಳೂರು: ಉನ್ನತ ಶಿಕ್ಷಣ ಸಂಸ್ಥೆಗಳ ಗುಣಮಟ್ಟವನ್ನು ನಿರ್ಧರಿಸುವ ರಾಷ್ಟ್ರೀಯ ಮೌಲ್ಯಾಂಕನ ಮತ್ತು ಮಾನ್ಯತಾ ಮಂಡಳಿ (ನ್ಯಾಕ್)ಯು ನಗರದ ಬಲ್ಮಠದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿಗೆ ಸಿ.ಜಿ.ಪಿ.ಎ 3.07 ಅಂಕಗಳೊಂದಿಗೆ ನ್ಯಾಕ್ ‘ಎ’ ದರ್ಜೆಯ ಮಾನ್ಯತೆ ನೀಡಿದೆ.

ಕಾಲೇಜು ಶಿಕ್ಷಣ ಇಲಾಖೆಯ ಮಂಗಳೂರು ವಲಯದ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಇದು ಗರಿಷ್ಠ ಗ್ರೇಡ್ ಎಂದು ದಾಖಲಾಗಿದೆ. ಖ್ಯಾತ ಶಿಕ್ಷಣ ತಜ್ಞರನ್ನು ಒಳಗೊಂಡ ನ್ಯಾಕ್ ತಂಡವು ಜನವರಿ 6 ಮತ್ತು 7ರಂದು ಮೊದಲ ಸುತ್ತಿನ ಶೈಕ್ಷಣಿಕ ಮೌಲ್ಯಮಾಪನಕ್ಕಾಗಿ ಕಾಲೇಜಿಗೆ ಭೇಟಿ ನೀಡಿ,  ಶೈಕ್ಷಣಿಕ ಗುಣಮಟ್ಟ ಮತ್ತು ಪೂರಕ ವ್ಯವಸ್ಥೆಗಳನ್ನು ಕೂಲಂಕಷವಾಗಿ ಅಧ್ಯಯನ ಮಾಡಿ ಕಾಲೇಜಿನ ಅಭಿವೃದ್ದಿಯ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿತ್ತು.

ನ್ಯಾಕ್ ತಂಡದ ನೇತೃತ್ವವನ್ನು ಅಸ್ಸಾಂ ಮಹಿಳಾ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಅಜಂತಾ ರಾಜ್ಕೊನ್ವರ್ ವಹಿಸಿದ್ದರು.

ಗುಜರಾತಿನ ಹೇಮಚಂದ್ರಾಚಾರ್ಯ ವಿಶ್ವವಿದ್ಯಾನಿಲಯದ ಪ್ರೊ. ಸಂಗೀತ ಶರ್ಮ ಸಂಯೋಜಕ ಸದಸ್ಯರಾಗಿ ಹಾಗೂ ಮುಂಬೈಯ ಟೆಂಡಾರ‌್ಕರ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ಅನುರಾಧ ರಾನಡೆ ತಂಡದ ಸದಸ್ಯರಾಗಿದ್ದರು. 

ತಂಡವು ಕಾಲೇಜಿನ ಅಧ್ಯಾಪಕ ವೃಂದ ಹಾಗೂ ವಿದ್ಯಾರ್ಥಿನಿಯರ ಕ್ರಿಯಾಶೀಲತೆಯನ್ನೂ, ಕಾಲೇಜಿನ ಶೈಕ್ಷಣಿಕ ಗುಣಮಟ್ಟ ಹಾಗೂ ಲಭ್ಯವಿರುವ ಸೌಲಭ್ಯಗಳನ್ನು ನ್ಯಾಕ್ ಪರಿಶೀಲಿಸಿ ಮೆಚ್ಚಿಕೊಂಡಿತ್ತು. ಎರಡು ದಿನದ ಮೌಲ್ಯಮಾಪನದಲ್ಲಿ ಕಾಲೇಜಿನ ವಿವಿಧ ಭಾಗಗಳಿಗೆ ಭೇಟಿ ನೀಡಿ ಶೈಕ್ಷಣಿಕ ಗುಣಮಟ್ಟದ ಪರಿಶೀಲನೆಯನ್ನು ಮಾಡಿದೆ ಎಂದು ತಿಳಿದುಬಂದಿದೆ. 

ಕಾಲೇಜಿನ  ಗ್ರಂಥಾಲಯ ಕೇಂದ್ರಕ್ಕೆ, ಕ್ರೀಡಾ ವಿಭಾಗಕ್ಕೆ, ಗಣಕ ಜ್ಞಾನ, ಗಣಿತ ಪ್ರಯೋಗಾಲಯ, ರಸಾಯನ ಶಾಸ್ತ್ರ ಹಾಗೂ ಭೌತಶಾಸ್ತ್ರ ಪ್ರಯೋಗಾಲಯಕ್ಕೆ ಭೇಟಿ ನೀಡಿ ವಿದ್ಯಾರ್ಥಿನಿಯರಿಗೆ ನೀಡಿರುವ ಸೌಲಭ್ಯಗಳ ಬಗ್ಗೆ ತಂಡ ಪರಿಶೀಲಿಸಿದೆ ಎಂದು ಕಾಲೇಜು ಆಡಳಿತ ಮಂಡಳಿ ಮಾಹಿತಿ ನೀಡಿದೆ. 

ಕಾಲೇಜಿನ ಪ್ರಾಂಶುಪಾಲ ಡಾ. ಜಗದೀಶ ಬಾಳ ಮತ್ತು  ಐಕ್ಯೂಎಸಿ ಹಾಗೂ ನ್ಯಾಕ್ ಸಂಚಾಲಕ ಡಾ. ಚಂದ್ರಶೇಖರ ಕೆ. ನೇತೃತ್ವದ ಅಧ್ಯಾಪಕರ ತಂಡವು ನ್ಯಾಕ್ ಸಮಿತಿಗೆ ಪೂರಕ ದಾಖಲೆಗಳನ್ನು ಒದಗಿಸಿತ್ತು.

ನ್ಯಾಕ್ ಸಮಿತಿಯು ಕಾಲೇಜು ಅಭಿವೃದ್ದಿ ಸಮಿತಿಯ ಅಧ್ಯಕ್ಷ ಹಾಗೂ ಶಾಸಕ ಡಿ. ವೇದವ್ಯಾಸ ಕಾಮತ್ ಅವರನ್ನೊಳಗೊಂಡ ಸದಸ್ಯರೊಂದಿಗೆ, ಪೋಷಕರು ಮತ್ತು ಹಳೆ ವಿದ್ಯಾರ್ಥಿನಿಯರೊಂದಿಗೆ ಸಂವಾದ ನಡೆಸಿತ್ತು.

ನ್ಯಾಕ್ ತಂಡದ ಭೇಟಿಯ ಸಂದರ್ಭ ಕಾಲೇಜಿನ ಅಭಿವೃದ್ದಿ ಸಮಿತಿಯ ಉಪಾಧ್ಯಕ್ಷ ತೇಜೋಮಯ, ನಿಸರ್ಗದ ಮಂಜುನಾಥ, ಕಲ್ಕೂರ ಪ್ರತಿಷ್ಠಾನದ ಪ್ರದೀಪ್ ಕುಮಾರ್ ಕಲ್ಕೂರ, ಕಾಲೇಜು ಶಿಕ್ಷಣ ಇಲಾಖೆಯ ಮಂಗಳೂರು ವಲಯದ ಜಂಟಿ ನಿರ್ದೇಶಕ ಡಾ. ಜೆನಿಫರ್ ಲೋಲಿಟಾ, ವಿಶೇಷಾಧಿಕಾರಿ ದೇವಿಪ್ರಸಾದ್, ಕಾಲೇಜಿನ ನಿವೃತ್ತ ಪ್ರಾಂಶುಪಾಲ ರಮಾನಾಥ ಬಿ., ಕಾಲೇಜಿನ ನ್ಯಾಕ್‌ನ ಸಲಹೆಗಾರ  ಪ್ರೊ.ಶಶಿಕಲಾ. ಕೆ, ಹಾಗೂ ಐಕ್ಯೂಎಸಿ ಸಹ ಸಂಚಾಲಕ ಡಾ. ನಯನಾ ಎಲ್.ಎಂ.  ಮತ್ತಿತರರು ಉಪಸ್ಥಿತರಿದ್ದರು.

share
Next Story
X