Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. RSS ವಿರುದ್ಧ ಜಾಗೃತಿ ಮೂಡಿಸಲು...

RSS ವಿರುದ್ಧ ಜಾಗೃತಿ ಮೂಡಿಸಲು 'ರಾಷ್ಟ್ರೀಯ ದ್ರಾವಿಡ ಸಂಘ' ನಾಳೆ (ಜ.12) ಉದ್ಘಾಟನೆ: ಅಗ್ನಿ ಶ್ರೀಧರ್

11 Jan 2023 9:03 PM IST
share
RSS ವಿರುದ್ಧ ಜಾಗೃತಿ ಮೂಡಿಸಲು ರಾಷ್ಟ್ರೀಯ ದ್ರಾವಿಡ ಸಂಘ ನಾಳೆ (ಜ.12) ಉದ್ಘಾಟನೆ: ಅಗ್ನಿ ಶ್ರೀಧರ್

ಬೆಂಗಳೂರು, ಜ. 11: ಆರೆಸ್ಸೆಸ್ ಹಿಂದುತ್ವದ ಸಂಕೋಲೆಯಿಂದ ಹೊರಬಂದು ನೆಲದ ನೈಜ ಸಂಸ್ಕೃತಿಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ನಾಳೆ(ಜ.12) ರಾಷ್ಟ್ರೀಯ ದ್ರಾವಿಡ ಸಂಘ(ಆರ್‍ಡಿಎಸ್) ಉದ್ಘಾಟಿಸಲಾಗುತ್ತಿದೆ ಎಂದು ಚಿಂತಕ ಅಗ್ನಿ ಶ್ರೀಧರ್ ತಿಳಿಸಿದ್ದಾರೆ.

ಬುಧವಾರ ನಗರದ ಖಾಸಗಿ ಹೋಟೆಲ್‍ನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಪ್ರಸ್ತುತ ದೇಶದಲ್ಲಿ ಧರ್ಮದ ಹೆಸರಿನಲ್ಲಿ ದ್ವೇಷ, ದುರಂತ ನಡೆಯುತ್ತಿರುವ ಸಂದರ್ಭದಲ್ಲಿ ರಾಷ್ಟ್ರೀಯ ದ್ರಾವಿಡ ಸಂಘದ ಅನಿವಾರ್ಯತೆ ಇದೆ. ಅಲ್ಲದೆ, ಹಿಂದೆ ನಮ್ಮ ನೆಲದಲ್ಲಿ ಎಲ್ಲರನ್ನು ಒಳಗೊಳ್ಳುವ ಸಂಸ್ಕೃತಿ ಇತ್ತು. ಜಾತಿ, ಮತ, ಲಿಂಗ ತಾರತಮ್ಯ ಇರಲಿಲ್ಲ. ಎಲ್ಲರೂ ಎಲ್ಲರಿಗೋಸ್ಕರ ಬದುಕುತ್ತಿದ್ದರು. ಆದರೆ ಸದ್ಯ ದೇಶದಲ್ಲಿ ಹಿಂದುತ್ವ ಹೆಸರಲ್ಲಿ ಸಾಕಷ್ಟು ದುರಂತ ನಡೆಯುತ್ತಿದೆ ಎಂದು ಟೀಕಿಸಿದರು.

ಧರ್ಮದ ಹೆಸರಿನಲ್ಲಿ ಅಧರ್ಮವಿದ್ದು, ದ್ವೇಷ ಬಿತ್ತಲಾಗುತ್ತಿದೆ. ಇಂತಹ ಸಂದರ್ಭದಲ್ಲಿ ಯುವ ಜನತೆಯನ್ನು ಜಾಗೃತಗೊಳಿಸಲು ಎಲ್ಲ ರೀತಿಯ ಪ್ರಭುತ್ವವನ್ನು ಒಂದೆಡೆ ತರಲು ಸಂಘ ಆರಂಭಿಸುತ್ತಿದ್ದೇವೆ ಎಂದ ಅವರು, ಧರ್ಮದ ಮೂಲ ದಯೆಯೇ ಆಗಿದೆ. ನಮ್ಮ ವಂಶವಾಹಿಯಲ್ಲಿಯೇ ಎಲ್ಲರೂ ಒಂದೇ ಎಂಬ ಅಂಶವಿದೆ. ಆದರೆ, ಆರೆಸ್ಸೆಸ್ ದ್ವೇಷವನ್ನು ಹರಡುತ್ತಿದೆ ಎಂದು ಆರೋಪಿಸಿದರು. 

‘ನಾವೆಲ್ಲಾ ಹಿಂದು, ನಾವೆಲ್ಲ ಒಂದು’ ಎಂದು ಘೋಷಣೆ ಮಾಡುತ್ತಿದ್ದರೂ, ಸಮಾಜದಲ್ಲಿ ಅಸ್ಪೈಶ್ಯತೆ, ಜಾತಿ ತಾರತಮ್ಯ ಪಾಲಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಈ ದ್ರಾವಿಡ ಸಂಘವು ನಾಡಿನ ಪ್ರತಿಯೊಬ್ಬ ಯುವಜನರನ್ನು ತಲುಪಿ, ದ್ರಾವಿಡ ಸಂಸ್ಕøತಿ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ ಎಂದು ಅಗ್ನಿಶ್ರೀಧರ್ ನುಡಿದರು.

ಪತ್ರಿಕಾಗೋಷ್ಠಿಯಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಕಾರ್ಯದರ್ಶಿ ಜಿ.ಬಿ.ಪಾಟೀಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಆರ್ಯರು ಈ ದೇಶದ ಮೂಲ ನಿವಾಸಿಗಳೆಂದು ಸಾಕ್ಷೀಕರಿಸುವಲ್ಲಿ ವಿಫಲರಾಗಿದ್ದಾರೆ. ನಮ್ಮ ಸಂಸ್ಕೃತಿಯತ್ತ ಮರಳಲು ನೂತನ ಸಂಘ ಕಟ್ಟಲಾಗುತ್ತಿದೆ ಎಂದು ಜಾಗತಿಕ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಕಾರ್ಯದರ್ಶಿ ಜಿ.ಬಿ.ಪಾಟೀಲ್ ತಿಳಿಸಿದರು.

► ನಾಳೆ ಉದ್ಘಾಟನೆ ಸಮಾರಂಭ

ನಾಳೆ(ಜ.12) ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ರಾಷ್ಟ್ರೀಯ ದ್ರಾವಿಡ ಸಂಘದ ಉದ್ಘಾಟನಾ ಸಮಾರಂಭ ಬೆಳಗ್ಗೆ 10.30ಕ್ಕೆ ಜರುಗಲಿದೆ. ಕಾರ್ಯಕ್ರಮದಲ್ಲಿ ಸಾಹಿತಿ ಡಾ.ಬಂಜಗೆರೆ ಜಯಪ್ರಕಾಶ್, ಕೆಪಿಸಿಸಿ ಕಾಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಜಾಗತಿಕ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಕಾರ್ಯದರ್ಶಿ ಜಿ.ಬಿ.ಪಾಟೀಲ್, ಕ್ರಿಕೆಟ್ ಪಟುವೇದಾ ಕೃಷ್ಣಮೂರ್ತಿ, ಚಿತ್ರ ಸಾಹಿತಿ ಕವಿರಾಜ್ ಸೇರಿದಂತೆ ಪ್ರಮುಖರು ಭಾಗಿಯಾಗಲಿದ್ದಾರೆ.

share
Next Story
X