Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಚಹಾ ಮಾಡುವ ವೀಡಿಯೊದೊಂದಿಗೆ 'ಇದು...

ಚಹಾ ಮಾಡುವ ವೀಡಿಯೊದೊಂದಿಗೆ 'ಇದು ನನ್ನನ್ನು ಎಲ್ಲಿಗೆ ಕೊಂಡೊಯುತ್ತದೆ ಯಾರಿಗೆ ಗೊತ್ತು' ಎಂದ ಟಿಎಂಸಿ ಸಂಸದೆ ಮೊಯಿತ್ರಾ

12 Jan 2023 10:35 AM IST
share
ಚಹಾ ಮಾಡುವ ವೀಡಿಯೊದೊಂದಿಗೆ ಇದು ನನ್ನನ್ನು ಎಲ್ಲಿಗೆ ಕೊಂಡೊಯುತ್ತದೆ ಯಾರಿಗೆ ಗೊತ್ತು ಎಂದ ಟಿಎಂಸಿ ಸಂಸದೆ ಮೊಯಿತ್ರಾ

ಕೋಲ್ಕತಾ: ಪ್ರಧಾನಿ ನರೇಂದ್ರ ಮೋದಿ ಹಾಗೂ  ಬಿಜೆಪಿ ವಿರುದ್ಧ ಕಟು ಟೀಕೆಗೆ ಹೆಸರುವಾಸಿಯಾಗಿರುವ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರು ಬಂಗಾಳದ ರಸ್ತೆ ಬದಿಯ ಟೀ ಸ್ಟಾಲ್‌ನಲ್ಲಿ ತಾನು ಚಹಾ ಮಾಡುತ್ತಿರುವ ವೀಡಿಯೊವನ್ನು ಟ್ವೀಟ್ ಮಾಡಿದ್ದಾರೆ.

“ಚಹಾ ಮಾಡಲು ಪ್ರಯತ್ನಿಸುತ್ತಿರುವೆ. ಇದು ನನ್ನನ್ನು ಎಲ್ಲಿಗೆ ಕೊಂಡೊಯ್ಯಬಹುದೆಂದು  ಯಾರಿಗೆ ಗೊತ್ತು'' ಎಂದು ವೀಡಿಯೊದೊಂದಿಗೆ  ಫೈರ್‌ಬ್ರಾಂಡ್ ನಾಯಕಿ ಬರೆದಿದ್ದಾರೆ.

ಬಾಲ್ಯದಲ್ಲಿ ಚಹಾವನ್ನು ಮಾರಾಟ ಮಾಡುತ್ತಿದ್ದೆ ಎಂದು ಆಗಾಗ ಹೇಳುತ್ತಿರುವ  ಪ್ರಧಾನ ಮಂತ್ರಿಯನ್ನು ಉಲ್ಲೇಖಿಸಿ ಮೊಯಿತ್ರಾ ಟ್ವೀಟಿಸಿದರು.

ಮೊಯಿತ್ರಾ ಅವರು ತಮ್ಮ ಲೋಕಸಭಾ ಕ್ಷೇತ್ರವಾದ ಕೃಷ್ಣಾನಗರದಲ್ಲಿ ಟೀ ಸ್ಟಾಲ್ ನಲ್ಲಿ ಚಹಾ ಪಾತ್ರಕ್ಕೆ ಸಕ್ಕರೆ ಸೇರಿಸುವುದು. ಚಹಾ ಕುದಿದ ಬಳಿಕ  ಅಂಗಡಿಯವನು ಮೊಯಿತ್ರಾಗೆ  ಸಹಾಯ ಮಾಡುತ್ತಿರುವುದು ವೀಡಿಯೊದಲ್ಲಿ ಕಂಡುಬಂದಿದೆ.

ತೃಣಮೂಲ ಕಾಂಗ್ರೆಸ್ ನಾಯಕಿ ಈ ವರ್ಷದ ನಿರ್ಣಾಯಕ ಪಂಚಾಯತ್ ಚುನಾವಣೆಗೆ ಮುನ್ನ ಅವರ ಪಕ್ಷದ ಹೊಸ 'ದೀದಿ ಸುರಕ್ಷಾ ಕವಚ' ಪ್ರಚಾರಕ್ಕಾಗಿ ತಮ್ಮ ಕ್ಷೇತ್ರದಲ್ಲಿ ಪ್ರವಾಸ ಕೈಗೊಂಡಿದ್ದಾರೆ.

ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಬಳಕೆದಾರರು ಪ್ರಧಾನಿ ಮೋದಿಯವರ ಬಗ್ಗೆ ಉಲ್ಲೇಖಗಳನ್ನು ಮಾಡಿದ್ದಾರೆ.

ಬಳಕೆದಾರರಲ್ಲಿ ಒಬ್ಬರು ಹೀಗೆ ಬರೆದಿದ್ದಾರೆ: “ದೇಶಕ್ಕೆ ಓರ್ವ ಚಾಯ್‌ವಾಲಾ ಸಾಕು. ದೇಶವು ಇನ್ನೊಂದು ಚಾಯ್ ವಾಲಿಯನ್ನು ಹೊಂದಬಹುದೇ ಎಂದು ತಿಳಿದಿಲ್ಲ...”,ಎಂದು ಬರೆದಿದ್ದಾರೆ.

ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಮೊಮ್ಮಗ ಹಾಗೂ  ಮಾಜಿ ಬಿಜೆಪಿ ನಾಯಕ ಚಂದ್ರ ಕುಮಾರ್ ಬೋಸ್ ಈ ಕುರಿತು ಪ್ರತಿಕ್ರಿಯಿಸುತ್ತಾ: "ಅದು ನಿಮ್ಮನ್ನು ಎಲ್ಲಿಗೆ ಕರೆದೊಯ್ಯುತ್ತದೆ ಎಂದು ನಿಮಗೆ ತಿಳಿದಿದೆ ಎಂದು ನಾನು ಬಾಜಿ ಕಟ್ಟುತ್ತೇನೆ" ಎಂದಿದ್ದಾರೆ.

ಕಳೆದ ರಾತ್ರಿ ಈ ವೀಡಿಯೊವನ್ನು ಪೋಸ್ಟ್ ಮಾಡಿದ ನಂತರ ಸುಮಾರು 8,000 ಬಾರಿ 'ಲೈಕ್' ಮಾಡಿದ್ದು,  600 ಕ್ಕೂ ಹೆಚ್ಚು ಬಾರಿ ರಿ ಟ್ವೀಟ್ ಮಾಡಲಾಗಿದೆ.

Tried my hand at making chai… who knows where it may lead me :-) pic.twitter.com/iAQxgw61M0

— Mahua Moitra (@MahuaMoitra) January 11, 2023
share
Next Story
X