Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸ್ಯಾಂಟ್ರೋ ರವಿ ಪ್ರಕರಣದಲ್ಲಿ ಗೃಹಸಚಿವರೇ...

ಸ್ಯಾಂಟ್ರೋ ರವಿ ಪ್ರಕರಣದಲ್ಲಿ ಗೃಹಸಚಿವರೇ ನಂಬರ್ 1 ಆರೋಪಿ: ಕಿಮ್ಮನೆ ರತ್ನಾಕರ್

12 Jan 2023 6:50 PM IST
share
ಸ್ಯಾಂಟ್ರೋ ರವಿ ಪ್ರಕರಣದಲ್ಲಿ ಗೃಹಸಚಿವರೇ ನಂಬರ್ 1 ಆರೋಪಿ: ಕಿಮ್ಮನೆ ರತ್ನಾಕರ್

ಶಿವಮೊಗ್ಗ (ಜ.12): ತೀರ್ಥಹಳ್ಳಿಯಲ್ಲಿ ನಡೆದ ಈಡಿ ದಾಳಿಯನ್ನೂ ಬಿಜೆಪಿ ರಾಜಕೀಯ ಪ್ರೇರಿತವಾಗಿ ಬಿಂಬಿಸಲಾಗಿದೆ ಎಂದು ಮಾಜಿ ಸಚಿವ ಹಾಗೂ ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತೀರ್ಥಹಳ್ಳಿಯಲ್ಲಿ ನಡೆದ ಘಟನೆ ಕೆಲವು ಮಾಧ್ಯಮಗಳಲ್ಲಿ ಸ್ವಯಂ ಘೋಷಿತ ಹೇಳಿಕೆ ಆಗಿದೆ. ತೀರ್ಥಹಳ್ಳಿಗೆ ಬುಧವಾರ  ಈಡಿ ಬಂದಿದ್ದರು. ಕಚೇರಿಗೆ ಬಂದು ಕರೆಮಾಡಿದ್ದರು. 2015 ರಲ್ಲಿ 10 ಲಕ್ಷ ರೂ. ಹಣವನ್ನು  ಕಟ್ಟಡದ ಅಡ್ವಾನ್ಸ್ ನೀಡಲಾಗಿದೆ. ಇದನ್ನ  ರಾಜಕೀಯವಾಗಿ ಈಡಿ ದಾಳಿ ಎಂದು ಬಣ್ಣಿಸಲಾಗುತ್ತಿದೆ ಎಂದರು.

10 ವರ್ಷ ಶಾಸಕನಾಗಿದ್ದೇನೆ. ಇದರಿಂದ ಹೆದರುವುದಿಲ್ಲ. ರಾಜಕೀಯಕ್ಕೆ ಬಂದಿದ್ದು ಸಮಾಜ ಸೇವೆಗಾಗಿ. ಇದನ್ನ ಸವಾಲಾಗಿ ಸ್ವೀಕರಿಸುವುದಾದರೆ ಸವಾಲಾಗಿ ಸ್ವೀಕರಿಸುವೆ. ಆರಗ ಜ್ಞಾನೇಂದ್ರರವರಿಗೆ ಈ ಬಗ್ಗೆ ಸವಾಲು ಎಸೆಯುವೆ. ಅಮಿತ್ ಶಾ ಮತ್ತು ಜ್ಞಾನೇಂದ್ರ ಇಬ್ಬರೂ  ನನ್ನ ವಿರುದ್ಧ ಈ ವಿಚಾರದಲ್ಲಿ ಸಿಬಿಐ ತನಿಖೆ ನಡೆಸಲಿ ಎಂದು ಸವಾಲು ಹಾಕಿದರು.

ಗೃಹಸಚಿವರೇ  ನಂಬರ್ ಒನ್ ಆರೋಪಿ:

ಸ್ಯಾಂಟ್ರೋ ರವಿ ವಿಚಾರದಲ್ಲಿ ಫೆಬ್ರವರಿ ಒಳಗೆ ಗೃಹ ಸಚಿವ ಸ್ಥಾನಕ್ಕೆ  ಆರಗ ಜ್ಞಾನೇಂದ್ರ ರಾಜೀನಾಮೆ ನೀಡದಿದ್ದರೆ ಬೃಹತ್ ಪ್ರತಿಭಟನೆ ನಡೆಸಲಾಗುವುದು. ಯಾವ ಅಧಿಕಾರಿಯನ್ನ ಎಲ್ಲಿ ಹಾಕಬೇಕು ಎಂದು ಸ್ಯಾಂಟ್ರೋ ರವಿ ಬಳಿ ಪಟ್ಟಿ ಇತ್ತು. ಅದರಂತೆ ವರ್ಗಾವಣೆ ಆಗಿದೆ. ಈ ವಿಚಾರದಲ್ಲಿ ಆರಗನನ್ನು ಅರೆಸ್ಟ್ ಮಾಡಬೇಕು ಪಿಎಸ್‌ಐ ಮತ್ತು ಸ್ಯಾಂಟ್ರೋ ರವಿ ಪ್ರಕರಣದಲ್ಲಿ ಗೃಹಸಚಿವರೇ ನಂಬರ್1ಆರೋಪಿ  ಎಂದು ವಿವರಿಸಿದರು.

ಅಡಿಕೆಯ ಟಾಸ್ಕ್ ಫೋರ್ಸ್ ಅಧ್ಯಕ್ಷರಾಗಿ ಪರ್ಯಾಯ ಬೆಳೆ ಬೆಳೆಯಲು ಅಧಿವೇಶನದಲ್ಲಿ ತಿಳಿಸಿದ್ದಾರೆ. ಈ ದೇಶದಲ್ಲಿ ಮೊದಲನೇ ಉಗ್ರ ಯಾರು ಎಂದರೆ ನಾಥುರಾಮ್ ಗೋಡ್ಸೆ. ಆತ ಕೊಂದಿರುವುದು ಸತ್ಯವನ್ನ, ಅಹಿಂಸೆಯನ್ನ, ಇವೆಲ್ಲದಕ್ಕೂ ಹೋರಾಟ ಮಾಡಲಾಗುವುದು ಎಂದರು.

ತೀರ್ಥಹಳ್ಳಿ -ಹೊಸನಗರ ಗಳಲ್ಲಿನ ಪಿಡಬ್ಲ್ಯೂಡಿ ಕಾಮಗಾರಿಗಳೆಲ್ಲವನ್ನು ಗೃಹಸಚಿವರು ಅವರ ಸಂಬಂಧಿ ಸಿ.ವಿ.ಚಂದ್ರಶೇಖರ್ ಅವರಿಗೆ ನೀಡಿದ್ದಾರೆ. ಶೇ.50ರಷ್ಟು ಪಾಲುದಾರಿಕೆಯೂ ಇದೆ. ಸರ್ಕಾರಿ ಭೂಮಿಯನ್ನು ಖಾಸಗಿ ಭೂಮಿಯಾಗಿ ದಾಖಲೆ ಮಾಡಿಸಿ ಲೇಔಟ್‌ಗಳನ್ನು ಮಾಡುತ್ತಿದ್ದು. ಮಗನೇ ಇದಕ್ಕೆ ಬಂಡವಾಳ ಹೂಡಿದ್ದಾನೆ. ಮಗನ ಲೇಔಟ್‌ಗೆ ಸರ್ಕಾರಿ ದುಡ್ಡಿನಲ್ಲಿ ಕಾಂಕ್ರೀಟ್ ರಸ್ತೆಯಾಗುತ್ತದೆ ಎಂದು ಗಂಭೀರ ಆರೋಪ ಮಾಡಿದ ಕಿಮ್ಮನೆ ರತ್ನಾಕರ್, ಮುಖ್ಯಮಂತ್ರಿಗಳು ಆರಗ ಜ್ಞಾನೇಂದ್ರ ಅವರನ್ನು ಸಂಪುಟದಿಂದ ಕೈಬಿಡದಿದ್ದರೆ ಫೆಬ್ರವರಿಯಲ್ಲಿ ಎಲ್ಲಾ ದಾಖಲೆಗಳನ್ನು ಬಿಡುಗಡೆ ಮಾಡಿ ತೀವ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಬಿಜೆಪಿ ಒಂದು ಕೆಟ್ಟ ಸಿದ್ಧಾಂತ. ದೇಶದ ಜನರನ್ನು ಮಂಗ ಮಾಡುತ್ತಿದೆ. ಅಲ್ಪಸಂಖ್ಯಾತರೇ ಬಿಜೆಪಿಗೆ ಆಕ್ಸಿಜೆನ್. ಅಲ್ಪಸಂಖ್ಯಾತರನ್ನು ಹೊರತುಪಡಿಸಿ ಬಿಜೆಪಿ ಮಾಡಿದ ಯಾವುದಾದರೂ ಭಾಷಣವಿದೆಯಾ? ಜನರಿಗೆ ಇಂದಿರಾ ಆವಾಸ್ ಯೋಜನೆಯ ಬಿಲ್, ಬಿಪಿಎಲ್ ಕಾರ್ಡು, ಅಕ್ಕಿ, ಬೇಳೆ, ಎಣ್ಣೆ ಕೊಡಲಾಗುತ್ತಿಲ್ಲ ಬಿಜೆಪಿ ಸರ್ಕಾರಕ್ಕೆ ಬಿಜೆಪಿ ಸರ್ಕಾರದಲ್ಲಿ ಗುತ್ತಿಗೆದಾರರು ನೇಣು ಹಾಕಿಕೊಳ್ಳುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ   ಮಾಜಿ ವಿಧಾನ ಪರಿಷತ್ ಸದಸ್ಯ ಆರ್ ಪ್ರಸನ್ನ ಕುಮಾರ್ , ಎನ್ ರಮೇಶ್, ಸಂತೇಕಡೂರ ವಿಜಯ್(ಧನಿ), ಪಾಲಿಕೆ ಸದಸ್ಯ ರಮೇಶ್, ಮುಖಂಡರಾದ ಜಿ.ಡಿ ಮಂಜುನಾಥ್ ಮೊದಲಾದವರು ಉಪಸ್ಥಿತರಿದ್ದರು.

share
Next Story
X