Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾಂಗ್ರೆಸ್ ವಕ್ತಾರ ಲಕ್ಷ್ಮಣ್‍ ವಿರುದ್ಧ...

ಕಾಂಗ್ರೆಸ್ ವಕ್ತಾರ ಲಕ್ಷ್ಮಣ್‍ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಶಾಸಕ ಸಿ.ಟಿ.ರವಿ

12 Jan 2023 7:49 PM IST
share
ಕಾಂಗ್ರೆಸ್ ವಕ್ತಾರ ಲಕ್ಷ್ಮಣ್‍ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಶಾಸಕ ಸಿ.ಟಿ.ರವಿ

ಚಿಕ್ಕಮಗಳೂರು, ಜ.12: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಸಿ.ಟಿ.ರವಿ ಅವರು ಅಕ್ರಮವಾಗಿ ಸಾವಿರಾರು ಕೋ. ರೂ. ಆಸ್ತಿ ಸಂಪಾದಿಸಿದ್ದಾರೆಂದು ಇತ್ತೀಚೆಗೆ ಆರೋಪ ಮಾಡಿದ್ದ ಕೆಪಿಸಿಸಿ ವಕ್ತಾರ ಮೈಸೂರಿನ ಲಕ್ಷ್ಮಣ್ ವಿರುದ್ಧ ಗುರುವಾರ ನಗರದ 2ನೇ ಜೆಎಂಎಫ್‍ಸಿ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿದೆ.

ಗುರುವಾರ ತಮ್ಮ ವಕೀಲರೊಂದಿಗೆ ನ್ಯಾಯಾಲಯಕ್ಕೆ ತೆರಳಿದ ಸಿ.ಟಿ.ರವಿ, ತನ್ನ ಮೇಲೆ ಸುಳ್ಳು ಆರೋಪ ಹೊರಿಸಿ ಮಾನನಷ್ಟ ಮಾಡಿದ್ದಾರೆಂದು ಆರೋಪಿಸಿ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದರು. ಪ್ರಕರಣ ದಾಖಲಿಸಿಕೊಂಡ ನ್ಯಾಯಾಲಯ ಜ.21ರಂದು ಸಿ.ಟಿ.ರವಿ ಹಾಗೂ ಸಾಕ್ಷಿದಾರರಿಂದ ಹೇಳಿಕೆ ಪಡೆಯಲು ದಿನ ನಿಗಧಿ ಮಾಡಿದೆ. 

ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಅವರು ಹಲವು ಬಾರಿ ಶಾಸಕ ಸಿ.ಟಿ.ರವಿ ಅವರು ಅಕ್ರಮ ಆಸ್ತಿ ಸಂಪಾದಿಸಿದ್ದಾರೆ. ಸರಕಾರಿ ಕಾಮಗಾರಿಗಳ ಗುತ್ತಿಗೆಯನ್ನು ಸಿ.ಟಿ.ರವಿಯವರ ಸಂಬಂಧಿಯೊಬ್ಬರು ಪಡೆದುಕೊಂಡು ಕಳಪೆ ಕಾಮಗಾರಿ ನಡೆಸಿ ಹಣ ಕೊಳ್ಳೆ ಹೊಡೆಯುತ್ತಿದ್ದಾರೆಂದು ಬಹಿರಂಗವಾಗಿ ಆರೋಪ ಮಾಡಿದ್ದರು. ಸದ್ಯ ಸಿ.ಟಿ.ರವಿ ಅವರು ತಮ್ಮ ಮೇಲಿನ ಆರೋಪಕ್ಕೆ ಪ್ರತಿಯಾಗಿ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ವಿರುದ್ಧ ಕಾನೂನು ಹೋರಾಟಕ್ಕಿಳಿದಿದ್ದು, ಈ ವಿಚಾರ ಯಾವ ಹಂತಕ್ಕೆ ಮುಟ್ಟಲಿದೆ ಎಂಬುದು ಸಾರ್ವಜನಿಕರಲ್ಲಿ ವ್ಯಾಪಕ ಕುತೂಹಲಕ್ಕೆ ಕಾರಣವಾಗಿದೆ.

ಗುರುವಾರ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಿ ಹೊರಬಂದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ.ರವಿ, ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಅವರು ಹಿಟ್ ಅಂಡ್ ರನ್ ಮಾಡುತ್ತಿದ್ದಾರೆ. ಯಾರ ಮೇಲೆ ಏನು ಬೇಕಾದರೂ ಹೇಳಬಹುದು ಅನ್ನುವಂತಹ ಮನಸ್ಥಿತಿಗೆ ಕೆಲವರು ಬಂದಿದ್ದಾರೆ. ಸುಳ್ಳು ಆರೋಪ ಮಾಡಿದ ಮೇಲೂ ಭಂಡತನದಿಂದ ಅದನ್ನು ಸಮರ್ಥಿಸಿಕೊಳ್ಳುವ ಕೆಟ್ಟ ಮನಸ್ಥಿತಿ ಅವರಲ್ಲಿದೆ. ಅವರ ಹೇಳಿಕೆಯಿಂದ ಸಾರ್ವಜನಿಕರಲ್ಲಿ ತನ್ನ ಮೇಲೆ ತಪ್ಪು ಅಭಿಪ್ರಾಯ ಮೂಡಿದ್ದು, ಇದಕ್ಕೆ ಕಾನೂನು ಹೋರಾಟದ ಮೂಲಕ ನ್ಯಾಯ ಪಡೆಯಲು ಮುಂದಾಗಿದ್ದೇನೆ ಎಂದರು.

ಯಾರ ಮೇಲೆ ಏನು ಬೇಕಾದರೂ ಆರೋಪ ಮಾಡಬಹುದು ಎಂಬುದು ಈ ವ್ಯವಸ್ಥೆಯಲ್ಲಿ ಸಾಧ್ಯವಿಲ್ಲ ಎನ್ನುವುದನ್ನು ನಿರೂಪಿಸಬೇಕಾಗಿರುವುದರಿಂದ ನನ್ನ ಮೇಲೆ ಸುಳ್ಳು ಆರೋಪ ಮಾಡಿರುವವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದೇನೆ ಎಂದ ಅವರು, ಚಿಕ್ಕಮಗಳೂರಿನ ಜನತೆ ನನ್ನ ಮೇಲೆ ವಿಶ್ವಾಸವಿಟ್ಟು ನಾಲ್ಕು ಬಾರಿ ಗೆಲ್ಲಿಸಿ ಎಂಎಲ್‍ಎ ಮಾಡಿದ್ದಾರೆ. ಸುಳ್ಳು ಆರೋಪ ಮಾಡಿ ರಾಜ್ಯದ ಜನತೆಯಲ್ಲಿ ತಪ್ಪು ಅಭಿಪ್ರಾಯ ಮೂಡುವಂತೆ ಚಾರಿತ್ರ್ಯವಧೆ ಮಾಡುವ ಕೆಲಸವನ್ನು ಕಾಂಗ್ರೆಸ್‍ನವರು ಮಾಡಿದ್ದಾರೆ. ಆರೋಪ ಮಾಡಿದ್ದವರಿಗೆ ಈ ಹಿಂದೆ ವಕೀಲರಿಂದ ನೋಟಿಸ್ ನೀಡಲಾಗಿತ್ತು. ಅದಕ್ಕೆ ಸಮರ್ಪಕ ಉತ್ತರ ನೀಡಿಲ್ಲ. ಇದನ್ನೆಲ್ಲ ಆಧರಿಸಿ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿದೆ. ನನ್ನ ವಿರುದ್ಧ ಸುಳ್ಳು ಆರೋಪ ಮಾಡುತ್ತಿರುವವರನ್ನು ಕಾನೂನು ಹೋರಾಟದ ಮೂಲಕ ಎದುರಿಸುತ್ತೇವೆ ಎಂದರು.

ಹೈಕೋರ್ಟ್ ವಕೀಲ ಮಹೇಂದ್ರ ಮಾತನಾಡಿ, ಲಕ್ಷ್ಮಣ್ ಅವರು ಮೈಸೂರಿನಲ್ಲಿ ಸಿ.ಟಿ.ರವಿ ವಿರುದ್ಧ ಅನೇಕ ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸಿ.ಟಿ.ರವಿಯವರು ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. 2022 ಎಪ್ರಿಲ್ 20ರಂದು ಮೈಸೂರಿನಲ್ಲಿ ಸಿ.ಟಿ.ರವಿ ವಿರುದ್ಧ ಅವರು ಹಲವಾರು ಆರೋಪಗಳನ್ನು ಮಾಡಿದ್ದಾರೆ. ಲಕ್ಷ್ಮಣ್ ಅವರ ಆರೋಪಗಳಲ್ಲಿ ಹುರುಳಿಲ್ಲ ಎನ್ನುವುದು ಮೇಲ್ನೋಟಕ್ಕೆ ಕಂಡು ಬರುತ್ತಿದ್ದು, ಸಂಬಂಧಪಟ್ಟ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದೇವೆ ಎಂದರು.

share
Next Story
X