ಸ್ಯಾಂಟ್ರೋ ರವಿ ನಿರೀಕ್ಷಣಾ ಜಾಮೀನು ಅರ್ಜಿ ಮುಂದೂಡಿಕೆ

ಮೈಸೂರು: ಕೆ.ಎಸ್.ಮಂಜುನಾಥ್ ಅಲಿಯಾಸ್ ಸ್ಯಾಂಟ್ರೊ ರವಿ ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಇಲ್ಲಿನ 6ನೇ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜ.17ಕ್ಕೆ ಮುಂದೂಡಿದೆ.
ಅರ್ಜಿ ವಿಚಾರಣೆ ಗುರುವಾರ ನಡೆಯಿತು. ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸರ್ಕಾರಿ ವಕೀಲರು ಕಾಲಾವಕಾಶ ಕೋರಿದ ಹಿನ್ನೆಲೆಯಲ್ಲಿ ವಿಚಾರಣೆ ಮಂಗಳವಾರಕ್ಕೆ ಮುಂದೂಡಲಾಗಿದೆ.
ಸ್ಯಾಂಟ್ರೊ ರವಿ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದು, ಸರ್ಕಾರದ ಕೆಲವು ಸಚಿವರೊಂದಿಗೆ ಸಂಪರ್ಕ ಹೊಂದಿ ಹಲವರು ಅಕ್ರಮ ಚಟುವಟಕೆಯಲ್ಲಿ ಭಾಗಿಯಾಗಿರುವ ಸುದ್ದಿ ವ್ಯಾಪಕವಾಗಿ ಹರಡಿರುವ ಹಿನ್ನೆಲಯಲ್ಲಿ ಆತಂಕಕ್ಕೆ ಒಳಗಾಗಿರುವ ಆರೋಪಿ ಸ್ಯಾಂಟ್ರೊ ರವಿ ಜಿಲ್ಲಾ ನ್ಯಾಯಾಲಯಕ್ಕೆ ಆಗಮಿಸಿ ಶರಣಾಗಲಿದ್ದಾನೆ ಎಂಬ ವದಂತಿ ಕೇಳಿ ಬಂದಿತ್ತು. ಆ ಹಿನ್ನೆಲೆಯಲ್ಲಿ ಪೊಲೀಸರು ಮತ್ತು ಪತ್ರಕರ್ತರು ನ್ಯಾಯಾಲಯದ ಆವರಣದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದರು.
Next Story





