ಮಂಗಳೂರು: ಯೆನೆಪೊಯ ವಿವಿಯಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

ಮಂಗಳೂರು: ಯೆನೆಪೊಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾನಿಲಯ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ಮಂಗಳೂರು ವಿವಿ ಯುವ ರೆಡ್‌ಕ್ರಾಸ್ ವತಿಯಿಂದ ಸ್ವಾಮಿ ವಿವೇಕಾನಂದರ 160ನೇ ಜನ್ಮದಿನಾಚರಣೆಯ ಅಂಗವಾಗಿ ಯೆನೆಪೊಯ ಪರಿಗಣಿಸಲ್ಪಟ್ಟ ವಿಶ್ವದ್ಯಾನಿಲಯದ ಯೆಂಡ್ಯೂರನ್ಸ್ ೊನ್ ಸಭಾಂಗಣದಲ್ಲಿ ರಾಷ್ಟ್ರೀಯ ಯುವ ದಿನಾಚರಣೆ ನಡೆಯಿತು.
ಕಾರ್ಯಕ್ರಮದ ಅಂಗವಾಗಿ ನಡೆಸಲಾದ ಯುವ ವಾಗ್ಮಿ, ಯುವ ಕಲಾಕಾರ ಮತ್ತು ಯುವ ತೇಜಸ್ವಿ ಸ್ಪರ್ಧೆಯಲ್ಲಿ 40ಕ್ಕೂ ಅಧಿಕ ಕಾಲೇಜಿನ 300ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ರಾಜ್ಯಮಟ್ಟದ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಯಿತು. ಯೆನೆಪೊಯ ಫಾರ್ಮಸಿ ಕಾಲೇಜು ಮತ್ತು ಸಂಶೋಧನಾ ಕೇಂದ್ರದ ಡೀನ್ ಡಾ. ಗುಲ್ಜರ್ ಅಹ್ಮದ್, ನೋಡಲ್ ಅಧಿಕಾರಿ ಡಾ.ಗಣಪತಿ ಗೌಡ, ಕುಸುಮಾಧರ ಬಿ.ಕೆ. ಉಪಸ್ಥಿತರಿದ್ದರು.
ಯೆನೆಪೊಯ ಹೋಮಿಯೋಪತಿ ಕಾಲೇಜಿನ ಡೀನ್ ಡಾ. ಶಿವಪ್ರಸಾದ್ ಕೆ. ಅಧ್ಯಕ್ಷತೆ ವಹಿಸಿದ್ದರು. ನೋಡಲ್ ಅಧಿಕಾರಿ ನಿತ್ಯಶ್ರೀ ಬಿ. ಸ್ವಾಗತಿಸಿದರು. ಜ್ಯೋತಿ ವಂದಿಸಿದರು. ಅದ್ರಿಜಾ ಕಾರ್ಯಕ್ರಮ ನಿರೂಪಿಸಿದರು.
Next Story





