Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಭಾರತವನ್ನು ಮೂರನೇ ಅತಿದೊಡ್ಡ ಆರ್ಥಿಕ...

ಭಾರತವನ್ನು ಮೂರನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿಸುವ ಸಂಕಲ್ಪ: ಪ್ರಧಾನಿ ಮೋದಿ

26ನೆ ರಾಷ್ಟ್ರೀಯ ಯುವಜನೋತ್ಸವಕ್ಕೆ ಪ್ರಧಾನಿ ಚಾಲನೆ

12 Jan 2023 8:59 PM IST
share
ಭಾರತವನ್ನು ಮೂರನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿಸುವ ಸಂಕಲ್ಪ: ಪ್ರಧಾನಿ ಮೋದಿ
26ನೆ ರಾಷ್ಟ್ರೀಯ ಯುವಜನೋತ್ಸವಕ್ಕೆ ಪ್ರಧಾನಿ ಚಾಲನೆ

ಹುಬ್ಬಳ್ಳಿ, ಜ. 12: ‘ಡಿಜಿಟಲ್ ಇಂಡಿಯಾದ ಪ್ರಸ್ತುತ ಕಾಲಘಟ್ಟದಲ್ಲಿ ಕೌಶಲ್ಯಭರಿತ ಯುವಜನತೆಗೆ ಅವಕಾಶಗಳ ಬಾಗಿಲು ತೆರೆದಿದೆ. ‘ಏಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ’ ಎಂಬ ಸ್ವಾಮಿ ವಿವೇಕಾನಂದರ ಮಂತ್ರವನ್ನು ಮನದಲ್ಲಿಟ್ಟುಕೊಂಡು ಅಭಿವೃದ್ಧಿಯ ದಿಗಂತದ ಕಡೆಗೆ ದೇಶವನ್ನು ಕೊಂಡೊಯ್ಯಲು ಯುವ ಸಮುದಾಯ ಕೈಜೋಡಿಸಬೇಕು’ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಕರೆ ನೀಡಿದರು.

ಗುರುವಾರ ‘ವಿಕಸಿತ ಯುವ-ವಿಕಸಿತ ಭಾರತ’ ಎಂಬ ಘೋಷವಾಕ್ಯದೊಂದಿಗೆ ಹುಬ್ಬಳ್ಳಿ-ಧಾರವಾಡ ಅವಳಿ ನಗರದ ಕೇಶ್ವಾಪುರದ ರೈಲ್ವೆ ಮೈದಾನದಲ್ಲಿ 26ನೆ ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸ್ವಾಮಿ ವಿವೇಕಾನಂದರು ಕರ್ನಾಟಕದ ಜತೆ ಅವಿನಾಭಾವ ಸಂಬಂಧ ಹೊಂದಿದ್ದರು. ಬೆಂಗಳೂರು, ಹುಬ್ಬಳ್ಳಿ-ಧಾರವಾಡದಲ್ಲಿ ಸಂಚರಿಸಿದ್ದರು. ಮೈಸೂರು ಮಹಾರಾಜರು ವಿವೇಕಾನಂದ ಅವರು ಶಿಕಾಗೊ ಸಮ್ಮೇಳನ ಹೋಗಲು ನೆರವು ನೀಡಿದ್ದರು ಎಂದು ನರೇಂದ್ರ ಮೋದಿ ಸ್ಮರಿಸಿದರು.

ಯುವ ಶಕ್ತಿ ಸದೃಢವಾಗಿದ್ದರೆ ಸದೃಢ ದೇಶ ನಿರ್ಮಾಣಕ್ಕೆ ಸಹಕಾರಿಯಾಗುತ್ತದೆ ಎಂದು ಸ್ವಾಮಿ ವಿವೇಕಾನಂದರ ನಂಬಿಕೆಯಾಗಿತ್ತು. ಚೆನ್ನಮ್ಮ ಎಂತಹ ಸಂಕಷ್ಟದ ಕಾಲದಲ್ಲೂ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದರು. ಸಂಗೊಳ್ಳಿ ರಾಯಣ್ಣನ ಶೌರ್ಯವು ಬ್ರಿಟಿಷರ ಎದೆ ನಡುಗಿಸಿತ್ತು ಇಂತಹ ಮಹನೀಯರ ದೇಶಭಕ್ತಿ ನಮಗೆ ಆದರ್ಶವಾಗಬೇಕಿದೆ. ವಿಶ್ವೇಶ್ವರಯ್ಯ ತಮ್ಮ ಪ್ರತಿಭೆಯ ಮೂಲಕ ಯುವ ಸಮುದಾಯವು ಹೇಗೆ ಎಲ್ಲೆಡೆ ಪಸರಿದೆ ಎಂಬುದಕ್ಕೆ ಉದಾಹರಣೆಯಾಗಿದ್ದಾರೆ ಎಂದು ಅವರು ಹೇಳಿದರು.

ಜಾಗತಿಕ ಮಟ್ಟದಲ್ಲಿ ಗಣಿತದಿಂದ ವಿಜ್ಞಾನದ ಯಾವುದೇ ಸ್ಪರ್ಧೆ ನಡೆದರೂ ಭಾರತೀಯರ ಸಾಧನೆ ಅದ್ವಿತೀಯ. ಇದು ಭಾರತದ ಯುವಶಕ್ತಿಯ ಸಂಕೇತವಾಗಿದೆ. ಯುವಶಕ್ತಿ ದೇಶವನ್ನು ನಡೆಸುವ ಶಕ್ತಿಯಾಗಿದೆ. ಮುಂದಿನ 25 ವರ್ಷಗಳಲ್ಲಿ ಭಾರತಕ್ಕೆ ಯುವಶಕ್ತಿ ದಿಕ್ಸೂಚಿಯಾಗಲಿದೆ ಎಂದು ಪ್ರಧಾನಿ ಹೇಳಿದರು.

ಭಾರತವು ಜಗತ್ತಿನ 5ನೆ ಅತಿದೊಡ್ಡ ಆರ್ಥಿಕ ಶಕ್ತಿಯಾಗಿದೆ. ಇದನ್ನು ಅಗ್ರ ಮೂರನೇ ಸ್ಥಾನಕ್ಕೆ ಕೊಂಡೊಯ್ಯುವ ಗುರಿ ನಮ್ಮದಾಗಿದೆ. ಕೃಷಿ ಕ್ಷೇತ್ರದಲ್ಲಿ ಭಾರತವು ಜಗತ್ತಿನ ಮುಂಚೂಣಿಯಲ್ಲಿದ್ದು, ಈ ಕ್ಷೇತ್ರದಲ್ಲಿ ತಂತ್ರಜ್ಞಾನ ಬಳಕೆಯಿಂದ ಯುವ ಜನತೆಗೆ ಇನ್ನಷ್ಟು ಅವಕಾಶಗಳು ಲಭಿಸಲಿವೆ. ಕ್ರೀಡಾ ಕ್ಷೇತ್ರದಲ್ಲಿ ಭಾರತವು ಪ್ರಕಾಶಿಸುತ್ತಿರುವುದಕ್ಕೆ ಯುವ ಸಮುದಾಯದ ಪ್ರಯತ್ನವೇ ಕಾರಣವಾಗಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಇದನ್ನೂ ಓದಿ:  ಹುಬ್ಬಳ್ಳಿಯ ಪ್ರಧಾನಿ ರೋಡ್‌ಶೋನಲ್ಲಿ ಭದ್ರತಾ ಲೋಪ !

ದೇಶದ ಆರ್ಥಿಕತೆ ಸುಧಾರಣೆ ಸೇರಿದಂತೆ ಪ್ರತಿಯೊಂದು ಕ್ಷೇತ್ರದಲ್ಲಿ ಕಳೆದ ಒಂಭತ್ತು ವರ್ಷಗಳಲ್ಲಿ ಸಾಕಷ್ಟು ಕೆಲಸ ಮಾಡಲಾಗಿದೆ. ಇದೀಗ ರನ್ ವೇ ಸಿದ್ಧವಾಗಿದೆ. ಯುವ ಸಮಯದಾಯ ಇದನ್ನು ಬಳಸಿಕೊಂಡು ಅಭಿವೃದ್ಧಿಯ ದಿಗಂತದ ಕಡೆಗೆ ಹಾರಲು ಮುಂದಾಗಬೇಕಿದೆ. ಸ್ತ್ರೀಶಕ್ತಿಯು ರಾಷ್ಟ್ರಶಕ್ತಿಯನ್ನು ಮುನ್ನಡೆಸುವಲ್ಲಿ ಸಫಲರಾಗಿದ್ದಾರೆ ಎಂದು ನರೇಂದ್ರ ಮೋದಿ ಹೇಳಿದರು.

ಫೈಟರ್ ಜೆಟ್ ಹಾರಿಸುತ್ತಿರುವ ಮಹಿಳೆಯರು ವಿಜ್ಞಾನ, ತಂತ್ರಜ್ಞಾನ, ಕ್ರೀಡೆ ಸೇರಿದಂತೆ ಎಲ್ಲ ಕ್ಷೇತ್ರದಲ್ಲಿ ಮುನ್ನುಗ್ಗುತ್ತಿದ್ದಾರೆ. ಯುವಜನತೆ ವರ್ತಮಾನದಲ್ಲಿದ್ದಕೊಂಡು ಭವಿಷ್ಯದ ಕಡೆ ಸಕಾರಾತ್ಮಕವಾಗಿ ಯೋಚಿಸುವ ಮೂಲಕ ಹೊಸ ಹೊಸ ಆವಿಷ್ಕಾರಗಳತ್ತ ಚಿತ್ತವನ್ನು ಹರಿಸಬೇಕು. ಸೈಬರ್ ಸೆಕ್ಯುರಿಟಿ, ಡೇಟಾ ಸೈನ್ಸ್, ದೇಶದ ಸುರಕ್ಷತೆ ಸೇರಿ ಎಲ್ಲದರ ಸ್ವರೂಪ ಬದಲಾಗಿದೆ. ಯುವ ಸಮುದಾಯವು ತಂತ್ರಜ್ಞಾನದ ಈ ಬದಲಾವಣೆಯಿಂದ ಪಾಠ ಕಲಿತು ಹೊಸ ಕೌಶಲಗಳನ್ನು ಬೆಳೆಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.

ದೇಶದ ಬೇರೆ ಬೇರೆ ಭೌಗೋಳಿಕ ಪ್ರದೇಶಗಳ ಯುವಕರ ತಂಡಗಳು ಇಲ್ಲಿ ಬಂದಿವೆ. ಇಲ್ಲಿನ ಸ್ಪರ್ಧೆಯಲ್ಲಿ ಯಾರೇ ಗೆದ್ದರೂ ಅಂತಿಮವಾಗಿ ಭಾರತವೇ ಗೆಲ್ಲುತ್ತದೆ. ಆದುದರಿಂದ, ಯುವಜನೋತ್ಸವದಲ್ಲಿ ಭಾಗವಹಿಸುವ ತಂಡಗಳು ‘ವಿಕಸಿತ ಭಾರತ-ಸಮರ್ಥ ಭಾರತ’ವನ್ನು ಗಮನದಲ್ಲಿಟ್ಟುಕೊಂಡು ದೇಶವನ್ನು ಮುನ್ನಡೆಸಬೇಕು ಎಂದು ಅವರು ಹೇಳಿದರು.

ಮೂರುಸಾವಿರ ಮಠ, ಸಿದ್ಧಾರೂಢ ಮಠ ಇಂತಹ ಅನೇಕ ಮಠಗಳ ಕ್ಷೇತ್ರಗಳಿಗೆ ನನ್ನ ನಮಸ್ಕಾರಗಳು. ಚೆನ್ನಮ್ಮನ ನಾಡು, ರಾಯಣ್ಣನ ಬೀಡು ಪುಣ್ಯದ ನಾಡಿಗೆ ನನ್ನ ನಮಸ್ಕಾರಗಳು ಎಂದು ಕನ್ನಡದಲ್ಲಿ ಮಾತು ಆರಂಭಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು, ಭೀಮಸೇನ್ ಜೋಶಿ, ಗಂಗೂಬಾಯಿ ಹಾನಗಲ್ ಸೇರಿದಂತೆ ಅನೇಕ ಸಂಗೀತ ಲೋಕದ ದಿಗ್ಗಜರನ್ನು ಸ್ಮರಿಸಿದರು. ಅಲ್ಲದೆ, ‘ಏಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ’ ಎಂಬ ಸ್ವಾಮಿ ವಿವೇಕಾನಂದರ ಮಂತ್ರವನ್ನು ಕನ್ನಡದಲ್ಲಿ ಉಚ್ಛರಿಸಿದರು.

ಸಾಂಪ್ರದಾಯಿಕ ಶಾಲು ಹೊದಿಸಿ, ಹಾವೇರಿಯ ಏಲಕ್ಕಿ ಹಾರ, ಮುತ್ತಿನಿಂದ ಅಲಂಕರಿಸಿದ ಪೇಟ ತೊಡಿಸಿ, ತೇಗದ ಮರದಲ್ಲಿ ತಯಾರಿಸಿದ ಸ್ವಾಮಿ ವಿವೇಕಾನಂದರ ವಿಗ್ರಹ, ಗರಗ-ಬೆಂಗೇರಿಯಲ್ಲಿ ಸಿದ್ಧವಾಗುವ ರಾಷ್ಟ್ರಧ್ವಜವನ್ನು ಅಳವಡಿಸಿದ ಚೌಕಟ್ಟಿನ ಸ್ಮರಣಿಕೆ ನೀಡಿ ಪ್ರಧಾನಿಯನ್ನು ಗೌರವಿಸಲಾಯಿತು.

ಚಿತ್ತಾಕರ್ಷಕ ಪಥಸಂಚಲನ: ದೇಶದ ವೈವಿಧ್ಯಮಯ ಕಲೆ, ಪೋಷಾಕು, ಸಂಸ್ಕೃತಿಗಳನ್ನು ಪ್ರತಿಬಿಂಬಿಸುವ ಚಿತ್ತಾಕರ್ಷಕ ಪಥಸಂಚಲನವು ವಿವಿಧ ರಾಜ್ಯಗಳ ತಂಡಗಳಿಂದ ಜರುಗಿತು. ರಾಷ್ಟ್ರೀಯ ಯೋಗಾಸನ ಮತ್ತು ಕ್ರೀಡಾ ಫೆಡರೇಷನ್ ನ ವಿದ್ಯಾರ್ಥಿಗಳಿಂದ ಕಲಾತ್ಮಕ ಯೋಗಾಸನ ಮತ್ತು ಮಲ್ಲಕಂಬ ಸಾಹಸಗಳ ಪ್ರದರ್ಶನ ಜರುಗಿತು.

share
Next Story
X